ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ದೇಶದಲ್ಲೇ ಪ್ರತಿಷ್ಠಿತ ವಿ.ವಿ: ದೇಶದಲ್ಲೇ 11ನೇ ಸ್ಥಾನ!
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾಭ್ಯಾಸ ಮಾಡಿ, ವಿಶ್ವವಿದ್ಯಾನಿಲಯದಿಂದ ಹೊರಬರುವ ಪದವಿದರ ಯುವಕರು ಬೆಂಗಳೂರು ಕೃಷಿ ವಿವಿಯ ರಾಯಭಾರಿಗಳು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಹೆಬ್ಬಾಳದ ಜಿಕೆವಿಕೆ ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ಗುರುವಾರ ನಡೆದ 'ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ 60ನೇ ಸಂಸ್ಥಾಪನಾ ದಿನಾಚರಣೆ' ಹಾಗೂ ಜಲಾನಯನ ನಿರ್ವಹಣೆಯ ಉತ್ಕೃಷ್ಠ ಕೇಂದ್ರದ ನವೀಕರಿಸಿದ ಕಟ್ಟಡ' ಮತ್ತು 'ಸೂಕ್ಷ್ಮ ನೀರಾವರಿ ಪರಿಕರಗಳ ಗುಣಮಟ್ಟ ಪರೀಕ್ಷಣ ಪ್ರಯೋಗಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದ್ದಾರೆ.
ದೇಶದ 75 ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ 11ನೇ ಸ್ಥಾನದಲ್ಲಿದೆ. ನ್ಯಾಕ್ ಸಂಸ್ಥೆಯಿಂದ ಎ ಪ್ಲಸ್ ಶ್ರೇಣಿ ಪಡೆದುಕೊಂಡಿದೆ. ಎನ್ಐಆರ್ಎಫ್ (NIRF) ರ್ಯಾಂಕಿಂಗ್ನಲ್ಲಿ 11ನೇ ಸ್ಥಾನ ದೊರಕಿದೆ. ಈ ಎಲ್ಲ ಸಾಧನೆಗಳು ವಿಶ್ವವಿದ್ಯಾನಿಲಯವು 60 ವರ್ಷಗಳಲ್ಲಿ ಯಾವ ರೀತಿ ನಡೆದು ಬಂದಿದೆ ಎಂಬುದಕ್ಕೆ ಸಾಕ್ಷಿ. ವಿಶ್ವವಿದ್ಯಾನಿಲಯದ ಬೆಳವಣಿಗೆಗೆ ಅನೇಕ ಕುಲಪತಿಗಳು, ಪ್ರಾಧ್ಯಾಪಕರುಗಳು ಹಾಗೂ ಎಲ್ಲ ವಿದ್ಯಾರ್ಥಿಗಳು ದುಡಿದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1899ರಲ್ಲಿ ಮೈಸೂರಿನ ಮಹಾರಾಣಿ ಕೆಂಪ ನಂಜಮ್ಮ ಅವರು ಕೃಷಿ ಸಂಸ್ಥೆ ಸ್ಥಾಪನೆಗೆ ಹೆಬ್ಬಾಳದಲ್ಲಿ 30 ಎಕರೆ ಭೂಮಿ ನೀಡಿದರು. ಲೆಸ್ಲಿ ಕೋರ್ಲ್ಡ್ವನ್ ಎಂಬ ಬ್ರಿಟಿಷ್ ಅಧಿಕಾರಿ 25 ವರ್ಷ ಕೆಲಸ ಮಾಡಿ, ಕೃಷಿ ಸಂಸ್ಥೆಯನ್ನು, ಕೃಷಿ ಸಂಶೋಧನಾ ಸಂಸ್ಥೆಯನ್ನಾಗಿ ಪರಿವರ್ತಿಸಿದ. ಮೈಸೂರಿನ ದಿವಾನರಾಗಿದ್ದ ಸರ್ ಎಂ.ವಿಶ್ವೇಶ್ವರಯ್ಯ ನವರು ತದನಂತರ 1913ರಲ್ಲಿ ಕೃಷಿ ಕಾಲೇಜು ಆಗಿ ಮಾಡಿದರು. ಕೃಷಿ ವಿಷಯದಲ್ಲಿ ಡಿಪ್ಲೋಮಾ ಕೋರ್ಸ್ಗಳನ್ನು ಆರಂಭಿಸಿದರು. ಹಾಗಾಗಿ ಬೆಂಗಳೂರು ಕೃಷಿ ವಿವಿಯ ಅಡಿಪಾಯ ಬಹಳ ಗಟ್ಟಿಯಾಗಿ ಹಾಕಿದ ಕಾರಣಕ್ಕಾಗಿ, ಇಡೀ ದೇಶದಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾನಿಲಯವಾಗಿ ಬೆಳೆದು ನಿಂತಿದೆ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರು ಕೃಷಿ ವಿವಿಯು ಕೃಷಿಯಲ್ಲಿ ಅನೇಕ ಸಂಶೋಧನೆಗಳನ್ನು ಕೈಗೊಂಡು, ಅದರ ಪ್ರಯೋಜನವನ್ನು ರೈತರಿಗೆ ಕೊಡುಗೆಯಾಗಿ ಕೊಟ್ಟಿದೆ. ಕೃಷಿ ವಿವಿ 60 ವರ್ಷ ನಡೆದು ಬಂದ ದಾರಿ ಸುಗಮವಾಗಿರಲಿಲ್ಲ. ಕೃಷಿ ವಿಶ್ವವಿದ್ಯಾನಿಲಯದಿಂದ ಹೊರಬರುವ ಪದವಿದರರೇ ವಿಶ್ವವಿದ್ಯಾನಿಲಯದ ರಾಯಭಾರಿಗಳು. ಇಲ್ಲಿ ಕಲಿತ ಅನೇಕರು ದೇಶದ ಬೇರೆಬೇರೆ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಸರ್ಕಾರಿ ನೌಕರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಉನ್ನತ ಸ್ಥಾನದಲ್ಲಿರುವುದು ಕರ್ನಾಟಕಕ್ಕೆ ಕೀರ್ತಿ ತಂದಿದೆ ಎಂದಿದ್ದಾರೆ.
1980ರಲ್ಲಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಇಂಟರ್ನ್ಯಾಷನಲ್ ಬಟನಿಕಲ್ ಕಾಂಗ್ರೆಸ್ ಸಮಾವೇಶ ನಡೆಯಿತು. ನಾನು ಆಗ ವಿದ್ಯಾರ್ಥಿ. ಸುಮಾರು 4500 ಕೃಷಿ ವಿಜ್ಞಾನಿಗಳು ಭಾಗವಹಿಸಿದ್ದರು. ಈ ವೇಳೆ ಭಾರತ, ಆಹಾರ ಧಾನ್ಯದಲ್ಲಿ ಸ್ವಾವಲಂಬನೆಯ ದೇಶ ಎಂದು ಘೋಷಣೆಯಾಯಿತು. 60ರ ದಶಕದಲ್ಲಿ ದೇಶದ ಜನಸಂಖ್ಯೆಗೆ ಎರಡು ಹೊತ್ತು ನೀಡಲು ಆಗುತ್ತಿರಲಿಲ್ಲ. ಆ ದೇಶ 20 ವರ್ಷಗಳಲ್ಲಿ ಆಹಾರ ಧಾನ್ಯದಲ್ಲಿ ಸ್ವಾವಲಂಬನೆ ದೇಶ ಎಂದು ಅಂತಾರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಹೇಳುತ್ತಾರೆ. ಇದಕ್ಕೆ ನಮ್ಮ ರೈತರು, ವಿಜ್ಞಾನಿಗಳ ಪ್ರಯತ್ನ ದೊಡ್ಡದಿದೆ. ಹಸಿರು ಕ್ರಾಂತಿ ಸುಮ್ಮನೆ ಆಗಿಲ್ಲ. ದೇಶದ ಕೃಷಿ ವಿಜ್ಞಾನಿಗಳು ಮಾಡಿದ ಸಾಧನೆಯಿಂದಾಗಿ ಆಹಾರ ಧಾನ್ಯದಲ್ಲಿ ಸ್ವಾವಲಂಬನೆ ಪಡೆದುಕೊಂಡಿದ್ದೇವೆ ಎಂದೂ ಅವರು ಹೇಳಿದ್ದಾರೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಸ್.ವಿ.ಸುರೇಶ, ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್, ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಮತ್ತು ಆಡಳಿತ ಮಂಡಳಿಯ ಸದಸ್ಯ ಕಾರ್ಯದರ್ಶಿಗಳಾದ ಡಾ. ಕೆ.ಸಿ.ನಾರಾಯಣಸ್ವಾಮಿ ಈ ಸಂದರ್ಭದಲ್ಲಿ ಇದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications