• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉದ್ಯೋಗದ ನೆಪದಲ್ಲಿ ವಂಚನೆ, ಇಬ್ಬರ ಬಂಧನ

|

ಬೆಂಗಳೂರು, ಅ.30 : ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಜಾಬ್‌ ಕನ್ಸಲ್ಟೆನ್ಸಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ ವಂಚನೆಗೊಳಗಾದ ಯುವಕರು ಸಲ್ಲಿಸಿದ ದೂರಿನ ಅನ್ವಯ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಶಿವಾಜಿನಗರದಲ್ಲಿರುವ Exalt Consultancy ಮೇಲೆ ಗುರುವಾರ ದಾಳಿ ನಡೆಸಿದ ಪೊಲೀಸರು ಕನ್ಸಲ್ಟೆನ್ಸಿ ಮ್ಯಾನೇಜರ್‌ ಮಹ್ಮಮದ್‌ ಶಕೀಲ್‌ ಮತ್ತು ಜೇಮ್ಸ್‌ರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ದೂರದ ಊರುಗಳಿಂದ ಉದ್ಯೋಗ ಹುಡುಕಿಕೊಂಡು ಬರುವ ಯುವಕ ಯುವತಿಯರಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ, ಅವರಿಂದ 5 ರಿಂದ 9 ಸಾವಿರ ರೂ. ಹಣ ಪಡೆಯುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. [ಪುರಾತನ ವಿಗ್ರಹ ಕಳ್ಳಸಾಗಣೆ ಜಾಲ ಪತ್ತೆ ಹಚ್ಚಿದ ಸಿಸಿಬಿ]

2011ರಿಂದ ಹೀಗೆ ಯುವಕರಿಗೆ ವಂಚಿಸುತ್ತಿದ್ದ ಇವರು ಇದುವರೆಗೂ ಸಮಾರು 14 ಜನರಿಗೆ ವಂಚನೆ ಮಾಡಿದ್ದು, ಅವರಿಂದ 2.75 ಕೋಟಿ ರೂ. ಹಣ ಸಂಗ್ರಹಿಸಿದ್ದಾರೆ ಎಂದು ಪೊಲೀಸರು ಹೇಳಿದ್ದು, ಹೆಚ್ಚಿನ ವಿಚಾರನೆ ನಡೆಸುತ್ತಿದ್ದಾರೆ.

ದೆಹಲಿ ಮೂಲದ ಯುವಕರು ಇವರಿಗೆ ಹಣ ಕೊಟ್ಟು ವಂಚನೆಗೆ ಒಳಗಾಗಿದ್ದರು. ಇ ಮೇಲ್‌ ಮೂಲಕ ಅವರು ಬೆಂಗಳೂರು ಸಿಸಿಬಿ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ದೂರಿನ್ವಯ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. [ಮಾಹಿತಿ : ಪೊಲೀಸ್ ಇಲಾಖೆ]

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bangalore CCB police busted a fake JOB scam, raided Exalt Consultancy in Shivajinagar. Consultancy members collected data of unemployed from job portals and contacted them on phone, mail took 5-9 thousand promising job/refund.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more