ಹಳೇ ಹುಲಿ ಪಿಸಿ ಮೋಹನ್ ಎದುರು ಮನ್ಸೂರ್ ಅಲಿ ಖಾನ್ ಕಣಕ್ಕೆ; ಮತ್ತೊಮ್ಮೆ ಇತಿಹಾಸ ಬರೆಯುತ್ತಾರಾ ಬಿಜೆಪಿ ಕಲಿ?
ಬೆಂಗಳೂರು, ಏಪ್ರಿಲ್ 19: ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಮೂರು ಬಾರಿ ಹ್ಯಾಟ್ರಿಕ್ ಗೆಲುವ ಸಾಧಿಸಿರುವ ಬಿಜೆಪಿ ಸಂಸದ ಪಿ.ಸಿ.ಮೋಹನ್ ತಮ್ಮ 4ನೇ ಗೆಲುವಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಅವರು ಮನೆ ಮನೆಗೆ ತೆರಳಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವನ್ನು ಶ್ಲಾಘಿಸಿದ ಪಿ.ಸಿ.ಮೋಹನ್. ''ಪ್ರಧಾನಿ ಮೋದಿ ಅವರ ರೋಡ್ ಶೋ ಹಾಗೂ ಜೆಡಿಎಸ್ ಪಕ್ಷದ ಬೆಂಬಲದೊಂದಿಗೆ ಕರ್ನಾಟಕದ 28 ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ದೇಶದ ಆರ್ಥಿಕತೆಯು ದೃಢವಾದ ಬೆಳವಣಿಗೆಯನ್ನು ಕಂಡಿದೆ. ಮೆಟ್ರೊ ಸೇವೆಗಳು, ನಿರ್ಗತಿಕರಿಗೆ ವಸತಿ, ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ಮತ್ತು ಇತರ ಹಲವಾರು ಯೋಜನೆಗಳಂತಹ ಉಪಕ್ರಮಗಳ ಮೂಲಕ ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಅಪಾರವಾದ ಕೊಡುಗೆ ನೀಡಿದ್ದೇವೆ. ಆದರೆ ಕಾಂಗ್ರೆಸ್ ಪಕ್ಷ ಬೆಂಗಳೂರು ಮಾತ್ರವಲ್ಲದೆ ದೇಶದಾದ್ಯಂತ ತನ್ನ ವಿಶ್ವಾಸಾರ್ಹತೆ ಕಳೆದುಕೊಂಡಿದೆ'' ಎಂದರು.

ಬೆಂಗಳೂರು ನಗರದ ಅಭಿವೃದ್ಧಿಗೆ ಅವರು ಶ್ರಮಿಸಿದ ಬಗ್ಗೆಯೂ ಮಾತನಾಡಿರುವ ಅವರು, ಕಳೆದ 15 ವರ್ಷಗಳಿಂದ ಬೆಂಗಳೂರಿನ ಮೂಲಸೌಕರ್ಯಕ್ಕಾಗಿ ಸಾಕಷ್ಟು ಶ್ರಮ ವಹಿಸಿದ್ದೇನೆ. ಮೆಟ್ರೊ ರೈಲು ಮತ್ತು ಸಬ್ ಅರ್ಬನ್ ರೈಲಿನಂತಹ ಯೋಜನೆಗಳು ಹಾಗೂ ರೈಲ್ವೆ ನಿಲ್ದಾಣಗಳು ಮತ್ತು ಹೆದ್ದಾರಿಗಳಲ್ಲಿ ಉತ್ತಮ ಸೌಕರ್ಯಗಳು, ನಗರಕ್ಕೆ ಎಲೆಕ್ಟ್ರಿಕ್ ಬಸ್‌ಗಳು ಸ್ಕೈವಾಕ್ಗಳು, ಫ್ಲೈ ಓವರ್‌ಗಳಂತಹ ಯೋಜನೆಗಳಿಂದ ನಗರದ ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು, ಬೆಂಗಳೂರನ್ನು ವಿಶ್ವದರ್ಜೆಯ ಸೌಕರ್ಯಗಳನ್ನು ಒದಗಿಸಲು ದಣಿವರಿಯದೆ ಶ್ರಮ ಪಟ್ಟಿದ್ದೇನೆ ಎಂದರು.
ಇದರ ಜೊತೆಗೆ ಜನರಿಗೆ ಸುಲಭವಾಗಿ ಸಿಗುವ ರಾಜಕಾರಣಿ ನಾನಾಗಿದ್ದು, ಯಾವುದೇ ಸಮಯದಲ್ಲಿ ಜನ ಕರೆ ಮಾಡಿದರೂ ನಾನೆ ಖುದ್ದು ಸ್ವೀಕರಿಸಿ ಅವರ ಸಮಸ್ಯೆ ಬಗೆಹರಿಸುತ್ತೇನೆ, ನಮ್ಮ ಕ್ಷೇತ್ರದಲ್ಲಿ ವಿವಿಧ ವರ್ಗದ ಜನರಿದ್ದು ಅವರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ರಾಜಕೀಯ ಆದ್ಯತೆಗಳನ್ನೂ ಲೆಕ್ಕಿಸದೆ ಅವರ ಅಗತ್ಯದ ಸಮಯದಲ್ಲಿ ನಾನಿದ್ದೇನೆ ಎಂದು ಹೇಳಿದರು.
ಮರು ಆಯ್ಕೆಯಾದರೆ ಜನರಿಗೆ ನೀವು ನೀಡುವ ಭರವಸೆ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿ ಮತ್ತು ಎನ್‌ಡಿಎ ಸರ್ಕಾರ ಪ್ರತಿಯೊಂದು ಕಾರ್ಯಕ್ರಮಗಳು ಮತ್ತು ಉಪಕ್ರಮಗಳು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹಾಗೂ ಆರ್‌ಡಬ್ಲೂಎ ಮಟ್ಟದಲ್ಲಿ ಉತ್ತಮ ಆಡಳಿತವನ್ನು ಸುಗಮಗೊಳಿಸುವುದು, ನಗರ ಭೂದೃಶ್ಯಗಳನ್ನು ಹೆಚ್ಚಿಸುವ ಮತ್ತು ಜೀವನ ಶಾಂತಿಯನ್ನು ಖಾತ್ರಿಪಡಿಸುವ ನೀತಿಯನ್ನು ಜಾರಿಗೆ ತರುವುದು, ಕೇಂದ್ರ ಸರ್ಕಾರದ ಯೋಜನೆಗಳು ಜನರ ಹಿತದೃಷ್ಟಿಗಾಗಿ ತಂದಿದ್ದು ಅದನ್ನು ಅನುಷ್ಠಾನಗೊಳಿಸಿ, ಜನರಿಗೆ ಪೂರ್ಣ ಪ್ರಮಾಣದಲ್ಲಿ ತಲುಪಿಸುವ ಉದ್ದೇಶವಿದೆ ಎಂದರು.

ಅಷ್ಟೇ ಅಲ್ಲದೆ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರಿಗೆ ಮೂಲಸೌಕರ್ಯವನ್ನು ಹೆಚ್ಚಿಸುವುದು ನನ್ನ ಗುರಿ ಮತ್ತು ಮೊದಲ ಆದ್ಯತೆ ಎಂದು ಭರವಸೆಯ ಮಾತುಗಳನ್ನಾಡಿದರು. ಅಂದಹಾಗೆ ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಎದುರು ಕಾಂಗ್ರೆಸ್ ಮನ್ಸೂರ್ ಆಲಿ ಖಾನ್ ಅವರನ್ನು ಕಣಕ್ಕಿಳಿಸಿದ್ದು, ಮೇಲ್ನೋಟಕ್ಕೆ ಇದು ನಾಮಕಾವಸ್ಥೆಯ ಪ್ರಯತ್ನ ಎಂಬಂತೆ ಕಾಣುತ್ತಿದೆ.
ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡನೇ ಮತ್ತು ಮೂರನೇ ಹಂತದ ಮತದಾನ ನಡೆಯಲಿದೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 25 ಸ್ಥಾನ, ಕಾಂಗ್ರೆಸ್ 1, ಜೆಡಿಎಸ್ 1, ಪಕ್ಷೇತರ 1 ಗೆದ್ದಿತ್ತು. ಆದರೆ ಈ ಬಾರಿಯ ಚುನಾವಣೆಯ ಲೆಕ್ಕಾಚಾರಗಳು ಏನಾಗಬಹುದು ಎಂಬ ಕುತೂಹಲ ಇದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications