ಚುನಾವಣೆಯಲ್ಲಿ ಬಿಜೆಪಿಗೆ ರೋಷನ್ ಬೇಗ್ ಸಹಾಯ: ರಿಜ್ವಾನ್ ಆರೋಪ

ಬೆಂಗಳೂರು, ಮೇ 22: ರೋಷನ್ ಬೇಗ್ ಅವರಿಗೆ ತಾಕತ್ತಿದ್ದರೆ ಕಾಂಗ್ರೆಸ್ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಸ್ಪರ್ಧಿಸಲಿ ಎಂದು ಮಂಗಳವಾರ ಸವಾಲು ಹಾಕಿದ್ದ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್, ರೋಷನ್ ಬೇಗ್ ವಿರುದ್ಧ ಕೆಪಿಸಿಸಿಗೆ ಪತ್ರ ಬರೆದಿದ್ದಾರೆ.

ರೋಷನ್ ಬೇಗ್ ಅವರು ಬಿಜೆಪಿ ಕಡೆಗೆ ತೋರಿಸುತ್ತಿರುವ ಒಲವು ಇತ್ತೀಚಿನದ್ದೇನಲ್ಲ. ಅವರು ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಜತೆಗೆ ಕೈ ಜೋಡಿಸಿ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

bangalore central rizwan arshad letter to kpcc against roshan baig

ಲೋಕಸಭೆ ಚುನಾವಣೆಗೆ ಮುಂಚೆಯಿಂದಲೂ ರೋಷನ್ ಬೇಗ್ ಅವರು ಬಿಜೆಪಿಯೊಂದಿಗೆ ಒಡನಾಟ ಹೊಂದಿದ್ದರು. ಅವರ ಪಕ್ಷ ವಿರೋಧಿ ಚಟುವಟಿಕೆಗಳನ್ನು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರ ಗಮನಕ್ಕೆ ತರಲಾಗಿತ್ತು ಎಂದು ತಿಳಿಸಿದ್ದಾರೆ.

ರೋಷನ್ ಬೇಗ್ ಅವರು ನನ್ನ ವಿರುದ್ಧ ಕೆಲಸಗಳನ್ನು ಮಾಡಿದ್ದರೂ, ಪಕ್ಷದ ಕಾರ್ಯಕರ್ತರು, ಸ್ವಯಂಸೇವಕರು ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಗೆಲುವಿಗಾಗಿ ಪ್ರಾಮಾಣಿಕತೆಯಿಂದ ದುಡಿದಿದ್ದಾರೆ. ಅಲ್ಲಿನ ಮತದಾರರು ಕೂಡ ನನ್ನ ಪರವಾಗಿ ಹೆಚ್ಚಿನ ಮತ ಚಲಾಯಿಸಿದ್ದಾರೆ. ನಾನು ತುಂಬಾ ಧನಾತ್ಮಕ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬೆಂಗಳೂರು ಸೆಂಟ್ರಲ್ ಕ್ಷೇತ್ರವನ್ನು ಗೆಲ್ಲಿಸಿಕೊಡಬೇಕೆಂಬ ಅಪೇಕ್ಷೆಯಿದೆ.

ಹೀಗಾಗಿ ರೋಷನ್ ಬೇಗ್ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+