ಚಾಮರಾಜಪೇಟೆ ಹಿಂದೂ ರುದ್ರಭೂಮಿ ಬಗ್ಗೆ ಬೆಂಗಳೂರು ಕಮಿಷನರ್ ಮಹತ್ವದ ಆದೇಶ, ನಗರದ ಈ ರಸ್ತೆ ಅಗಲೀಕರಣ

ಬೆಂಗಳೂರಿನ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಗೆ ಸಂಬಂಧಿಸಿದಂತೆ ಬೆಂಗಳೂರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮಹತ್ವದ ಆದೇಶ ಮಾಡಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆ ಹಿಂದೂ ರುದ್ರಭೂಮಿಯ ನವೀಕರಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರು ಕೇಂದ್ರ ಹಾಗೂ ಪಶ್ಚಿಮ ನಗರ ಪಾಲಿಕೆಗಳ ವ್ಯಾಪ್ತಿಯ ಚಾಮರಾಜಪೇಟೆ ಮತ್ತು ಬಸವನಗುಡಿ ವಿಧಾನಸಭಾ ಕ್ಷೇತ್ರಗಳ ವಿವಿಧ ಸ್ಥಳಗಳಿಗೆ ಜುಲೈ 14ರ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಸಂಬಂಧಿತ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Bangalore

ರುದ್ರಭೂಮಿಯಲ್ಲಿ ಅಗತ್ಯ ಸೌಲಭ್ಯಗಳಿಗೆ ಒತ್ತು: ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದರ ಜೊತೆಗೆ, ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ಮೂಲಸೌಕರ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅನಧಿಕೃತ ವಾಹನ ತೆರವಿಗೆ ಕ್ರಮ

ಚಾಮರಾಜಪೇಟೆ 8ನೇ ಮುಖ್ಯ ರಸ್ತೆ ಹಾಗೂ ರಾಜಾಜಿನಗರದ ಮುಳಕಟ್ಟಮ್ಮ ರಸ್ತೆಯ ಎರಡೂ ಬದಿಗಳಲ್ಲಿ ಅನಧಿಕೃತವಾಗಿ ನಿಲುಗಡೆ ಮಾಡಿರುವ ವಾಹನಗಳಿಂದ ಸಂಚಾರಕ್ಕೆ ಹಾಗೂ ರುದ್ರಭೂಮಿಗೆ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಂಚಾರ ಪೊಲೀಸ್ ಹಾಗೂ ಬೆಂಗಳೂರು ಕೇಂದ್ರ ಮತ್ತು ಪಶ್ಚಿಮ ನಗರ ಪಾಲಿಕೆ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ, ನಿಯಮಾನುಸಾರ ವಾಹನಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಲಾಗಿದೆ.

ಮುಳಕಟ್ಟಮ್ಮ ರಸ್ತೆ ಅಗಲೀಕರಣಕ್ಕೆ ಕ್ರಮ

ರಾಜಾಜಿನಗರದ ಮುಳಕಟ್ಟಮ್ಮ ರಸ್ತೆಯ ಅಗಲ ಏಕರೂಪವಾಗಿಲ್ಲದಿರುವುದನ್ನು ಗಮನಿಸಿ, ರಸ್ತೆಯ ಮಿತಿಯೊಳಗಿನ ಕಟ್ಟಡಗಳನ್ನು ಗುರುತಿಸಿ, ಸಂಬಂಧಿತ ಸ್ವತ್ತುಗಳ ಮಾಲೀಕತ್ವದ ದಾಖಲೆಗಳನ್ನು ಪರಿಶೀಲಿಸಿ, ರಸ್ತೆ ಅಗಲೀಕರಣಕ್ಕೆ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಮುಂದುವರಿದು ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರು ಕ್ರೀಡಾಂಗಣವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಅನುಕೂಲವಾಗುವಂತೆ ಉತ್ತಮ ನಿರ್ವಹಣೆ, ಅಗತ್ಯ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಹೆಚ್ಚುವರಿ ಶೌಚಾಲಯಗಳ ನಿರ್ಮಾಣ ಸೇರಿದಂತೆ ಇತರೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ, ಕ್ರೀಡಾಂಗಣದ ಸಮರ್ಪಕ ನಿರ್ವಹಣೆಗಾಗಿ ಟೆಂಡರ್ ಆಹ್ವಾನಿಸಿ, ಸೂಕ್ತ ಏಜೆನ್ಸಿಯನ್ನು ನೇಮಕ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಸ್ವಚ್ಛತೆಗೆ ಸೂಚನೆ: ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದ ಚರಂಡಿಯಲ್ಲಿ ಕಸ ಸಂಗ್ರಹಗೊಂಡು ನೀರಿನ ಹರಿವಿಗೆ ಅಡಚಣೆ ಉಂಟಾಗಿರುವುದನ್ನು ಗಮನಿಸಿ, ಕೂಡಲೇ ಕಸವನ್ನು ತೆರವುಗೊಳಿಸಿ ಚರಂಡಿಯನ್ನು ಸ್ವಚ್ಛಗೊಳಿಸುವ ಮೂಲಕ ನೀರು ಸರಾಗವಾಗಿ ಹರಿಯುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬಸವನಗುಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಲ್. ಎ. ರವಿಸುಬ್ರಹ್ಮಣ್ಯ, ಮಾಜಿ ಮಹಾಪೌರರಾದ ಹುಚ್ಚಪ್ಪ, ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಿ. ಜಗದೀಶ್, ಅಪರ ಆಯುಕ್ತರಾದ ವೆಂಕಟಾ ಚಲಪತಿ, ಬೆಂ. ಘ.ತ್ಯಾ.ನಿ.ನಿ.ಯ ಸಿಒಒ ರಮಾಮಣಿ ಹಾಗೂ ಮುಖ್ಯ ಎಂಜಿನಿಯರರು ಸೇರಿದಂತೆ ಹಲವರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+