ಮಾಧ್ಯಮ ದೌರ್ಜನ್ಯ ಪ್ರಕರಣ : ಡಿಕೆಶಿ ವಿರುದ್ಧ ತನಿಖೆ
ಬೆಂಗಳೂರು, ಮೇ 19: ರಹಸ್ಯ ಕಾರ್ಯಾಚರಣೆಗೆಂದು ತೆರಳಿದ್ದ ಖಾಸಗಿ ವರದಿಗಾರರ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಡಿಕೆ ಶಿವಕುಮಾರ್ ವಿರುದ್ಧ ತನಿಖೆ ನಡೆಸುವಂತೆ ಇಲ್ಲಿನ 7ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಜೂ. 7ರೊಳಗೆ ವರದಿ ಸಲ್ಲಿಸುವಂತೆಯೂ ಸದಾಶಿವನಗರ ಪೊಲೀಸ್ ಠಾಣೆಗೆ ಕೋರ್ಟ್ ಸೂಚಿಸಿದೆ. ಮಾರ್ಚ್ 10ರಂದು ನಡೆದಿದ್ದ ಈ ದೌರ್ಜನ್ಯ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆಯೂ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿದೆ.

ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದರೂ ಪೊಲೀಸರು ಎಫ್ಐಆರ್ ದಾಖಲಿಸಿರಲಿಲ್ಲ. ಡಿಕೆ ಶಿವಕುಮಾರ್ ಅವರ ಹೆಸರಿದ್ದರೂ ಅಪರಿಚಿತ ವ್ಯಕ್ತಿಗಳೆಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಹಾಗಾಗಿ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಿದ ವರದಿಗಾರ್ತಿ ಈ ಪ್ರಕರಣದಲ್ಲಿ ಸಮರ್ಪಕ ತನಿಖೆ ನಡೆದಿಲ್ಲ. ಸೂಕ್ತ ತನಿಖೆಗೆ ಆದೇಶಿಸಬೇಕು ಎಂದು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಎಸಿಎಂಎಂ ಕೋರ್ಟ್, ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಆದೇಶಿಸಿದೆ. (ಟಿವಿ 9 ಪ್ರತಿನಿಧಿಗಳಿಗೆ ಜಾಮೀನು ಮಂಜೂರು)
ಮಾರ್ಚ್ 10ರಂದು ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದರೂ ಎಫ್‌ಐಆರ್ ದಾಖಲಿಸಿರಲಿಲ್ಲ. ಡಿಕೆ ಶಿವಕುಮಾರ್ ಹೆಸರು ಉಲ್ಲೇಖಿಸಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ದೌರ್ಜನ್ಯಕ್ಕೊಳಗಾದ ವರದಿಗಾರ್ತಿ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. (ಆಕೆ ನನ್ನ ಮಗಳಿದ್ದಂತೆ. ಹಲ್ಲೆ ನಡೆದಿಲ್ಲ : ಡಿಕೆ ಶಿವಕುಮಾರ್)












Click it and Unblock the Notifications