ಬೆಂಗಳೂರಿನಲ್ಲಿ ಜೋಡಿ ಕೊಲೆ, ವೃದ್ಧ ಅಪಹರಣ

crime beat
ಬೆಂಗಳೂರು, ಸೆ.23 : ಗಣೇಶ ವಿಸರ್ಜನೆ ವೇಳೆಯಲ್ಲಿ ಗುಂಪು ಘರ್ಷಣೆ ನಡೆದು ಇಬ್ಬರು ಯುವಕರನ್ನು ಕೊಲೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣೆವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಾಣಸವಾಡಿ ಸಮೀಪದ ಜಾನಕೀರಾಮ್‌ ಬಡಾವಣೆಯಲ್ಲಿ ಭಾನುವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಕಾರ್ತಿಕ್ (18) ಮತ್ತು ಕೇಶವ್ (18) ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು.

ಘಟನೆಯ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಎದುರಾಳಿ ಗುಂಪಿನ ಮೂವರು ಆರೋಪಿಗಳನ್ನು ಸೋಮವಾರ ಬೆಳಗ್ಗೆ ಬಾಣಸವಾಡಿಯಲ್ಲಿ ಬಂಧಿಸಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ವೃದ್ಧನ ಅಪಹರಣ : ವಾಯು ವಿಹಾರಕ್ಕೆ ತೆರಳಿದ್ದ ವೃದ್ಧನನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಅಂಜನಾನಗರದಲ್ಲಿ ನಡೆದಿದೆ. ಚೀಟಿ ವ್ಯವಹಾರ ನಡೆಸುತ್ತಿದ್ದ ಮುನಿಯಪ್ಪ (60) ಅಪಹರಣಗೊಂಡವರು.

ಸೋಮವಾರ ಬೆಳಗ್ಗೆ ಮುನಿಯಪ್ಪ ವಾಯುವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಇಂಡಿಕಾ ಕಾರಿನಲ್ಲಿ ಆಗಮಿಸಿದ ದುಷ್ಕರ್ಮಿಗಳು ಅವರನ್ನು ಅಪಹರಿಸಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ಡಿಕ್ಕಿ ಬೈಕ್ ಸವಾರ ಸಾವು : ಬೈಕ್‌ಗೆ ಖಾಸಗಿ ಬಸೊಂದು ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನುಕುಮಾರ್ (22) ಎಂದು ಗುರುತಿಸಲಾಗಿದೆ. ಅತೀ ವೇಗದಿಂದ ಬಂದ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಮನೋಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+