80ರ ಸಂಭ್ರಮದಲ್ಲಿ ಬೆಂಗಳೂರಿನ ಟೌನ್‌ಹಾಲ್
ಬೆಂಗಳೂರು, ಸೆ. 11 : ಮಹಾನಗರ ಬೆಂಗಳೂರಿನ ಪ್ರಮುಖ ಪ್ರಾರಂಪರಿಕ ಕಟ್ಟಡ ಟೌನ್‌ಹಾಲ್‌ಗೆ ಗುರುವಾರ 80ರ ಸಂಭ್ರಮ. ಸಾಂಸ್ಕೃತಿಕ ಕಾರ್ಯಕ್ರಮಗಳ ಮುಖ್ಯ ವೇದಿಕೆ ಹಾಗೂ ಪ್ರತಿಭಟನೆ ನಡೆಸುವವರ ಪ್ರಮುಖ ಸ್ಥಳವಾದ ಟೌನ್‌ಹಾಲ್‌ಅನ್ನು 1935ರ ಸೆ.11ರಂದು ಉದ್ಘಾಟಿಸಲಾಗಿತ್ತು.
ಬೆಂಗಳೂರು ನಗರ ಸಭೆಯ ಮೊದಲ ಅಧ್ಯಕ್ಷರಾಗಿದ್ದ ಸರ್.ಕೆ.ಪಿ.ಪುಟ್ಟಣ್ಣ ಚೆಟ್ಟಿ ಅವರ ಹೆಸರನ್ನು ಇದಕ್ಕೆ ಇಡಲಾಗಿದ್ದು, ಟೌನ್‌ಹಾಲ್ ಎಂದು ಪ್ರಸಿದ್ಧಿ ಪಡೆದಿದೆ. 80ರ ಸಂಭ್ರಮದಲ್ಲಿರುವ ಪುರಭವನವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, 5 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗುತ್ತಿದೆ.

ಶ್ರೀ ಕಂಠೀರವ ನರಸಿಂಹರಾಜ ಒಡೆಯರ್ ಅವರು ಸೆ.11, 1935 ರಂದು ಟೌನ್‌ಹಾಲ್‌ಅನ್ನು ಉದ್ಘಾಟಿಸಿದ್ದರು. ಸುಮಾರು 1.75 ಲಕ್ಷ ವೆಚ್ಚದಲ್ಲಿ ಈ ಕಟ್ಟಡವನ್ನು ಅಂದು ನಿರ್ಮಿಸಲಾಗಿತ್ತು. ಮೈಸೂರಿನ ದಿವಾನರಾಗಿದ್ದ ಸರ್ ಮಿರ್ಜಾ ಮಹಮದ್ ಇಸ್ಮಾಯಿಲ್ ನೇತೃತ್ವದಲ್ಲಿ ಕಟ್ಟಡದ ನಿರ್ಮಾಣ ಕಾರ್ಯ ನಡೆದಿತ್ತು.[ಪುರಭವನ ನವೀಕರಣಕ್ಕೆ ಚಾಲನೆ]
ಎರಡು ಮಹಡಿಗಳ ಟೌನ್‌ಹಾಲ್ 1,038 ಆಸನ ವ್ಯವಸ್ಥೆಗಳನ್ನು ಒಳಗೊಂಡಿದೆ. ಟೌನ್‌ಹಾಲ್ ಪಕ್ಕದಲ್ಲಿ ರವೀಂದ್ರ ಕಲಾ ಕ್ಷೇತ್ರ ನಿರ್ಮಾಣಗೊಳ್ಳುವ ತನಕ ಬೆಂಗಳೂರಿನ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇದು ಮುಖ್ಯ ವೇದಿಕೆಯಾಗಿತ್ತು. ಈಗಾಗಲೇ ಎರಡು ಬಾರಿ ಟೌನ್‌ಹಾಲ್ ನವೀಕರಣಗೊಂಡಿದ್ದು, ಮೂರನೇ ಬಾರಿ 5 ಕೋಟಿ ವೆಚ್ಚದಲ್ಲಿ ನವೀಕರಣ ಕಾರ್ಯ ಕೈಗೊಳ್ಳಲಾಗಿದೆ. [ಪುರಭವನ ಅಡವಿಡಲು ಸಿದ್ಧತೆ]
ಟೌನ್‌ಹಾಲ್ ಒಳಭಾಗ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆಯಾದರೆ ಹೊರಭಾಗ ಪ್ರತಿಭಟನೆಗಳಿಗೆ ಧ್ವನಿಯಾಗಿದೆ. ಸರ್ಕಾರದ ವಿರುದ್ಧ ಪ್ರತಿಭಟಿಸುವ ಹಲವಾರು ಸಂಘ ಸಂಸ್ಥೆಗಳಿಗೆ ಟೌನ್‌ಹಾಲ್ ಪ್ರಮುಖ ಸ್ಥಳವಾಗಿದೆ. 2014ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಟೌನ್‌ಹಾಲ್ ಅನ್ನು ಬ್ಯಾಂಕ್‌ಗೆ ಅಡವಿಡುವ ತೀರ್ಮಾನ ಕೈಗೊಂಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. [ಪುರಭವನಕ್ಕೆ ಆಧುನಿಕ ಟಚ್]
ಸದ್ಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 5 ಕೋಟಿ ವೆಚ್ಚದಲ್ಲಿ ಟೌನ್‌ಹಾಲ್ ನವೀಕರಣ ಕಾರ್ಯ ಕೈಗೊಂಡಿದೆ. ಎರಡು ತಿಂಗಳಿನಿಂದ ಈ ಕಾರ್ಯ ನಡೆಯುತ್ತಿದ್ದು, ಇನ್ನೊಂದು ತಿಂಗಳಿನಲ್ಲಿ ಈ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಎಂದಿನಂತೆ ಆರಂಭವಾಗಲಿವೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications