ಸಿದ್ಧಿ ವಿನಾಯಕ ವಿಸರ್ಜನೆ ದಿನ ಮದ್ಯ ಮಾರಾಟ ನಿಷಿದ್ಧ

ಬೆಂಗಳೂರು, ಆ. 30 : ಆ. 31ರಂದು ಅನೇಕ ಗಣೇಶ ಮೂರ್ತಿ ವಿಸರ್ಜನೆ ನಡೆಯಲಿದ್ದು ಮಹಾನಗರದ ಪೊಲೀಸ್‌ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ ಎಂದು ಪೊಲೀಸ್‌ ಆಯುಕ್ತ ಎಂ.ಎನ್‌.ರೆಡ್ಡಿ ತಿಳಿಸಿದ್ದಾರೆ.

ಪೂರ್ವ ಮತ್ತು ಉತ್ತರ ವಲಯದಲ್ಲಿ ಸುಮಾರು 80ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತಿದ್ದು ಈ ಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ganapati

ಜೆಸಿ.ನಗರ, ಆರ್.ಟಿ.ನಗರ, ಸಂಜಯನಗರ, ಹೆಬ್ಬಾಳ, ಕಮರ್ಷಿಯಲ್‌ ಸ್ಟ್ರೀಟ್‌, ಭಾರತಿನಗರ, ಫ್ರೆಜರ್‌ ಟೌನ್‌, ಡಿ.ಜಿ.ಹಳ್ಳಿ, ಕೆ.ಜಿ.ಹಳ್ಳಿ, ಶಿವಾಜಿನಗರ ಮತ್ತು ಹೈಗ್ರೌಂಡ್ಸ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ.(ಮನೆ ಮನೆಗೆ ಬಂದ ವಿಘ್ನ ನಿವಾರಕ ಗಣೇಶನ ಚಿತ್ರಾವಳಿ)

ಹಲಸೂರು ಮತ್ತು ಸ್ಯಾಂಕಿ ಕರೆಯಲ್ಲಿ ಅನೇಕ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಕಾರ್ಯಕ್ರಮವಿದೆ. ಮೆರವಣಿಗೆಯಲ್ಲಿ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆಯಿದೆ.

ವಿವಿಧ ಭಾಗದಲ್ಲಿ ಆರಂಭವಾದ ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಸರ್ಜನೆ ಸ್ಥಳಕ್ಕೆ ಅಂದರೆ ಕೆರೆ ಸಮೀಪ ಬಂದು ಸಮಾಪ್ತಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. [ಪಿಟಿಐ ಚಿತ್ರ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+