ಬಿಎಸ್ವೈಗೆ ಪೊಲೀಸ್ ನೋಟಿಸ್, ಬಂಧನ ಸಾಧ್ಯತೆ

ಬೆಂಗಳೂರು, ನ. 13 : ಸರ್ಕಾರದ ವಿರುದ್ಧ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರು ಪೊಲೀಸರು ನೋಟಿಸ್ ಜಾರಿಗಳಿಸಿ, ಧರಣಿ ಸ್ಥಳ ತೆರವುಗೊಳಿಸುವಂತೆ ಆದೇಶಿಸಿದ್ದರಾರೆ. ನೋಟಿಸ್ ಗೆ ಉತ್ತರ ನೀಡದಿದ್ದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ 8 ದಿನಗಳ ಧರಣಿಗೆ ಮಾತ್ರ ಪೊಲೀಸರಿಂದ ಅವಕಾಶ ಪಡೆದಿದ್ದರು. ಆದರೆ, ಬುಧವಾರಕ್ಕೆ ಅವರ ಧರಣಿ 13ನೇ ದಿನಕ್ಕೆ ಕಾಲಿಟ್ಟಿದೆ. ಧರಣಿ ವಿಸ್ತರಿಸುವ ಅವರ ಕ್ರಮಕ್ಕೆ ಪೊಲೀಸರು ಅನುಮತಿ ನೀಡಿರಲಿಲ್ಲ. ಆದರೂ ಯಡಿಯೂರಪ್ಪ ಧರಣಿ ಮುಂದುವರೆಸಿದ್ದಾರೆ. ಆದ್ದರಿಂದ ನೋಟಿಸ್ ಜಾರಿಗೊಳಿಸಲಾಗಿದೆ.

yeddyurappa

ಬುಧವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಆನಂದರಾವ್‌ ವೃತ್ತದ ಬಳಿಯ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನೀವು ನಡೆಸುತ್ತಿರುವ ಧರಣಿ ಸ್ಥಳವನ್ನು ತೆರವುಗೊಳಿಸಿ ಎಂದು ಆದೇಶಿಸಿದ್ದಾರೆ. ಆದರೆ, ಬಿ.ಎಸ್.ಯಡಿಯೂರಪ್ಪ ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ಸರ್ಕಾರ ಶಾದಿಭಾಗ್ಯ ಯೋಜನೆಯನ್ನು ಎಲ್ಲಾ ವರ್ಗಗಳಿಗೆ ವಿಸ್ತರಿಸರಣೆ ಮಾಡಬೇಕು ಹಾಗೂ ಎಪಿಎಲ್‌ ಕಾರ್ಡ್‌ದಾರರಿಗೂ ಪಡಿತರ ವಿತರಣೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಮೊದಲು 8 ದಿನ ಧರಣಿ ನಡೆಸುವುದಾಗಿ ಅವರು ಪೊಲೀಸರಿಂದ ಅನುಮತಿ ಪಡೆದಿದ್ದರು.

ಅವರ ಅನುಮತಿ ಅವಧಿ ಮುಗಿದ ಬಳಿಕ, ಧರಣಿಯನ್ನು ವಿಸ್ತರಿಸುವುದಾಗಿ ಯಡಿಯೂರಪ್ಪ ಪೊಲೀಸರಿಗೆ ಮನವಿ ಮಾಡಿದ್ದರು. ಆದರೆ, ಮನವಿಯನ್ನು ಪೊಲೀಸರು ನಿರಾಕರಿಸಿ ಧರಣಿ ಸ್ಥಳ ತೆರವುಗೊಳಿಸುವಂತೆ ನೋಟಿಸ್ ಜಾರಿಗೊಳಿಸಿದ್ದರು. ಅದಕ್ಕೆ ಉತ್ತರ ನೀಡಿದೆ ಧರಣಿ ಮುಂದುವರೆಸಿರುವ ಹಿನ್ನಲೆಯಲ್ಲಿ ಬುಧವಾರ ಮತ್ತೊಂದು ನೋಟಿಸ್ ಜಾರಿಗೊಳಿಸಲಾಗಿದೆ. ಇದನ್ನು ಉಲ್ಲಂಘಿಸಿದರೆ ಅವರನ್ನು ಪೊಲೀಸರು ಬಂಧಿಸುವ ಸಾದ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+