ಫೆಬ್ರವರಿ 17 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಬೆಂಗಳೂರು: ರಾಜಧಾನಿಯ ಹಲವು ಭಾಗಗಳಲ್ಲಿ ಫೆಬ್ರವರಿ 17ರಂದು ವಿದ್ಯತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತಿಳಿಸಿದೆ. ತುರ್ತು ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದು ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ನಿರ್ವಹಣಾ ಕಾರ್ಯ ಮುಗಿದ ನಂತರ ವಿದ್ಯುತ್ ಪೂರೈಕೆ ಯಥಾಸ್ಥಿತಿಗೆ ಬರಲಿದೆ. ಕಳೆದ ಕೆಲವು ವಾರಗಳಲ್ಲಿ ಕೆಪಿಟಿಸಿಎಲ್ ರಾಜಧಾನಿ ನಗರದ ಹಲವಾರು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳನ್ನು ನಡೆಸಿದೆ, ಇದರಿಂದಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಮುಖ್ಯವಾಗಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಸಬ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿರುವುದರಿಂದ ಫೆಬ್ರವರಿ 17 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನ ಈ ಭಾಗದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಸುತ್ತಮುತ್ತಲಿನ ಈ ಕೆಳಗಿನ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಿರಲಿದೆ:
ಫೆಬ್ರವರಿ 17 ರಂದು ಬೆಂಗಳೂರಿನಲ್ಲಿ ವಿದ್ಯುತ್ ಕಡಿತ (ಬೆಳಿಗ್ಗೆ 10 ರಿಂದ ಸಂಜೆ 5):
*ಮಾನ್ಯತಾ ಟೆಕ್ ಪಾರ್ಕ್
*ಮಾರುತಿ ಲೇಔಟ್
*ಭುವನೇಶ್ವರನಗರ
*ಏರ್ ಲೇಔಟ್
*ರಾಜೇನಹಳ್ಳಿ
*ಪಿಡಿ ಲೇಔಟ್
*ಶ್ರೀರಾಂಪುರ
*ಮಾಸ್ಟರ್ ಬಿಲ್ಡರ್
*ಚಾಮುಂಡೇಶ್ವರಿ ಬಡಾವಣೆ
ಇತರೆ ಪ್ರದೇಶಗಳಲ್ಲು ವ್ಯತ್ಯಯ:
ನಗರದ ಇತರೆ ಭಾಗಗಳಾದ ವರ್ತೂರು ರಸ್ತೆ, ನಾಗವಾರಪಾಳ್ಯ, ನಾಗಪ್ಪ ರೆಡ್ಡಿ ಲೇಔಟ್, ಅಬ್ಬೆರೆಡ್ಡಿ ಲೇಔಟ್, ಬಾಲಾಜಿ ಲೇಔಟ್, ಧರ್ಮರಾಜ ಪಾಳ್ಯ, ವಿಜಯನಗರ ಪೈ ಲೇಔಟ್, ಉದಯನಗರ, ಗಂಗಪ್ಪ ಲೇಔಟ್, ಸದಾನಂದನಗರ, ಕಸ್ತೂರಿ ನಗರ, ಕೃಷ್ಣಪ್ಪನ ಪಾಳ್ಯ, ಸುದ್ಧಗುಂಟೆಪಾಳ್ಯ, ಆರ್ಎಂ ಝಡ್ ಲೇಔಟ್, ಅಂಕಪ್ಪ ರೆಡ್ಡಿ ಲೇಔಟ್, ಶಿವ ದೇವಸ್ಥಾನ ರಸ್ತೆ ಮತ್ತು ಅಯ್ಯಪ್ಪ ದೇವಸ್ಥಾನ ರಸ್ತೆಗಳಲ್ಲಿಯೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸೂಚನೆ: ನಿರ್ವಹಣಾ ಕಾರ್ಯಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪೂರ್ಣಗೊಂಡಲ್ಲಿ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಸಾರ್ವಜನಿಕರು ತಮ್ಮ ದೈನಂದಿನ ಕೆಲಸಗಳನ್ನು ಈ ಮಾಹಿತಿಗೆ ಅನುಗುಣವಾಗಿ ಯೋಜಿಸಿಕೊಳ್ಳಲು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications