ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಗರದ ಗತಕಾಲದ ವೈಭವವನ್ನು ಮರಳಿ ತರುವುದೇ ನನ್ನ ಗುರಿ: ಹರಿಪ್ರಸಾದ್

|
Google Oneindia Kannada News

ಬೆಂಗಳೂರು, ಏಪ್ರಿಲ್ 15 2019: ಗಾರ್ಡನ್ ಸಿಟಿ ಯ ಗತಕಾಲದ ವೈಭವವನ್ನು ಮರಳಿ ತರುವುದು ನನ್ನ ಪ್ರಮುಖ ಗುರಿಯಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಹೇಳಿದರು.

ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?

ಮತದಾನದ ದಿನ ಹತ್ತಿರವಾಗುತ್ತಿರುವಂತೆ ತಮ್ಮ ಪ್ರಚಾರ ಕಾರ್ಯವನ್ನು ಬಿರುಸುವಗೊಳಿಸಿರುವ ಬಿ ಕೆ ಹರಿಪ್ರಸಾದ್ ಅವರು ಇಂದು ಪದ್ಮನಾಭ ನಗರ, ಬೊಮ್ಮನಹಳ್ಳಿ ಹಾಗೂ ಗೋವಿಂದರಾಜ ನಗರದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಭಾನುವಾರದಂದು ಜಯನಗರದ ಸಾವಯವ ಹೋಟೇಲ್ ನಲ್ಲಿ ಪರಿಸರವಾದಿಗಳೊಂದಿಗೆ "ಪರಿಸರವಾದದೊಂದಿಗೆ ಪ್ರಜಾಪ್ರಭುತ್ವ" ದ ಬಗ್ಗೆ ಚರ್ಚೆ ನಡೆಸಿದ ಅವರು ತಮ್ಮ ಕನಸಿನ ಯೋಜನೆಗಳನ್ನು ಹಂಚಿಕೊಂಡರು. ನಂತರ, ಬಸವನಗುಡಿಯ ಹನುಮಂತನಗರದಲ್ಲಿ ಬೃಹತ್ ಬೈಕ್ rallyಯಲ್ಲಿ ಪಾಲ್ಗೊಂಡಿದ್ದರು.

ಜಯನಗರದಲ್ಲಿ ಹಸಿರು ಬೆಂಗಳೂರು ಸಂಕಲ್ಪ ಕೈಗೊಂಡ ಕೈ ಅಭ್ಯರ್ಥಿಜಯನಗರದಲ್ಲಿ ಹಸಿರು ಬೆಂಗಳೂರು ಸಂಕಲ್ಪ ಕೈಗೊಂಡ ಕೈ ಅಭ್ಯರ್ಥಿ

ಬೆಳಿಗ್ಗೆ ಪದ್ಮನಾಭನಗರದ ಚಿಕ್ಕಲ್ಲಸಂದ್ರ ದೇವಸ್ಥಾನದಿಂದ ಪ್ರಾರಂಭವಾದ ರೋಡ್ ಶೋ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂತರ ಮಧ್ಯಾಹ್ನ ಬೊಮ್ಮನಹಳ್ಳೀ ವೃತ್ತದ ಬಳಿ ಇರುವ ಎಚ್ ಪಿ ಪವರ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕರ್ನಾಟಕ ಬಹುಜನ ಸಂಘರ್ಷ ಸಮಿತಿಯ ಮುಖಂಡರೊಂದಿಗೆ ಸಭೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದರು. ಸಂಜೆ ರಾಜಾಜಿನಗರದ 6 ನೇ ಬ್ಲಾಕ್ ನ ಬಿಬಿಎಂಪಿ ಸಮುದಾಯ ಭವನದ ಬಳಿ ಇರುವ ಗಣೇಶ ದೇವಸ್ಥಾನದಿಂದ ಪ್ರಾರಂಭವಾದ ರೋಡ್ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿತು.

 ಕ್ಷೇತ್ರದ ಅಭಿವೃದ್ದಿಗೆ ನನ್ನದೇ ಆದ ಕನಸುಗಳಿವೆ

ಕ್ಷೇತ್ರದ ಅಭಿವೃದ್ದಿಗೆ ನನ್ನದೇ ಆದ ಕನಸುಗಳಿವೆ

ನಂತರ ಮಾತನಾಡಿದ ಅವರು, ಬೆಂಗಳೂರು ನಗರ ಅದರಲ್ಲೂ ದಕ್ಷಿಣ ಲೋಕಸಭಾ ಕ್ಷೇತ್ರದ ಅಭಿವೃದ್ದಿಗೆ ನನ್ನದೇ ಆದ ಕನಸುಗಳಿವೆ. ಇಂದು ಬೆಂಗಳೂರು ನಗರದ ದಕ್ಷಿಣ ಭಾಗ ದೇಶದಲ್ಲಷ್ಟೇ ಅಲ್ಲ, ವಿದೇಶದಲ್ಲೂ ಹೆಸರುವಾಸಿ. ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ದಿಯ ಜೊತೆಗೆ ಇನ್ನೂ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರದ ಗಮನ ಸೆಳೆದು ಅನುದಾನ ತರುವುದು ನನ್ನ ಜವಾಬ್ದಾರಿಯಾಗಿರಲಿದೆ.

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಲಾಲ್ ಬಾಗ್

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಲಾಲ್ ಬಾಗ್

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಲಾಲ್ ಬಾಗ್ ನಂತಹ ಪಾರ್ಕ್ ನಿರ್ಮಿಸಲು ಅಗತ್ಯ ಜಾಗಗಳಿವೆ. ಈ ರೀತಿಯ ಉದ್ಯಾನವನಗಳನ್ನು ನಿರ್ಮಿಸುವುದರ ಮೂಲಕ ಗಾರ್ಡ್‍ನ್ ಸಿಟಿ ಎನ್ನುವ ಹೆಸರನ್ನು ತರುವುದು ನನ್ನ ಗುರಿಯಾಗಿರಲಿದೆ. ಹಸಿರು ಬೆಂಗಳೂರಿಗಾಗಿ ಈಗಿರುವ ಉದ್ಯಾನವನಗಳ ಅಭಿವೃದ್ದಿ, ಲಾಲ್ ಭಾಗ್ ಮಾದರಿಯ ನೂತನ ಉದ್ಯಾನವನ ನಿರ್ಮಾಣ, ರಸ್ತೆ ಬದಿಯಲ್ಲಿ ಸಾಲು ಮರಗಳನ್ನು ನೆಡುವುದು, ಈಗಿರುವಮರಗಳ ಸೂಕ್ತ ಆರೈಕೆ, ಸ್ಯಾಂಕಿ ಕರೆ ಮಾದರಿಯಲ್ಲಿ ಕ್ಷೇತ್ರದ ಕೆರೆಗಳ ಅಭಿವೃದ್ದಿ ಮುಂತಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವೆ ಎಂದರು.

ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಕೆ ಹರಿ ಪ್ರಸಾದ್ ರೋಡ್ ಶೋ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಕೆ ಹರಿ ಪ್ರಸಾದ್ ರೋಡ್ ಶೋ

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಇದರ ಪರಿಹಾರಕ್ಕಾಗಿ ಮೇಕೇದಾಟು ಬಳಿ ನಿರ್ಮಿಸಲು ಚಿಂತಿಸಲಾಗಿರುವ ಅಣೆಕಟ್ಟಿನಿಂದ ನೀರು ತರುವುದು ಸೂಕ್ತ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರದ ಮಟ್ಟದಲ್ಲಿ ಪ್ರಯತ್ನ ಪಡುವುದಾಗಿ ಭರವಸೆ ನೀಡಿದರು.

ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ನಡೆಸಿದ ಬೈಕ್ rally

ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ನಡೆಸಿದ ಬೈಕ್ rally

ಬಿ ಕೆ ಹರಿಪ್ರಸಾದ್ ಪರವಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ನಡೆಸಿದ ಬೈಕ್ ಮೆರವಣಿಗೆ ಎಲ್ಲರ ಗಮನ ಸೆಳೆಯಿತು. ಬಿ ಕೆ ಹರಿಪ್ರಸಾದ್ ಅವರು ನಿನ್ನೆ ದಿನ ಬಸವನಗುಡಿಯ ಹನುಮಂತನಗರದಲ್ಲಿ ಬೃಹತ್ ಬೈಕ್ rallyಯಲ್ಲಿ ಪಾಲ್ಗೊಂಡಿದ್ದರು. ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ಆರ್ಶಿರ್ವಾದ ಪಡೆದು ರ್ಯಾಲಿಗೆ ಚಾಲನೆ ನೀಡಲಾಯಿತು. ಮರಾಠ ಹಾಸ್ಟೆಲ್ ನಲ್ಲಿ ನಡೆದ ಕಮ್ಮ ನಾಯ್ದು ಸಮುದಾಯದ ನಾಯಕರೊಂದಿಗೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು.

'65 ವರ್ಷ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್ಸಿಗೆ ಮತ ನೀಡಿ' '65 ವರ್ಷ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್ಸಿಗೆ ಮತ ನೀಡಿ'

English summary
Today(April Bangalore South congress Candidate B.K Hariprasad participated in the election campaign at Padmanabha Nagar, Govindaraja Nagar & Bommanahalli Constituencies. Bike Rally organised by Congress Mahila workers attracted the attention.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X