ಬಿಕೆ ಹರಿಪ್ರಸಾದ್ ಬೆಂಬಲಿಸಲು ನಿರ್ಧರಿಸಿದ ಬ್ರಾಹ್ಮಣರು
Recommended Video
ಬೆಂಗಳೂರು, ಏಪ್ರಿಲ್ 15: 'ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಟಿಕೆಟ್ ನೀಡುವಲ್ಲಿ ಆದ ಗೊಂದಲದ ಮೂಲಕ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ತಪ್ಪಿರುವುದು ಸರಿಯಲ್ಲ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಅವರಿಗೆ ಪರ ಒಲವು ಹೊಂದುವ ನಿರ್ಧಾರವನ್ನು ತಗೆದುಕೊಂಡಿದ್ದೇವೆ' ವಿಪ್ರ ಮುಖಂಡ ಸುದರ್ಶನ್ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಗರದ ಪದ್ಮನಾಭನಗರದಲ್ಲಿ ಇಂದು ಆಯೋಜಿಸಿದ್ದ ಬ್ರಾಹ್ಮಣರ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಯಿತು. ನಂತರ ಮಾತನಾಡಿದ ಮುರಳಿ ಎಸ್, ಮೋದಿ ಅವರಿಗಿಂತಲೂ ಮುಂಚಿನಿಂದ ಬಿಜೆಪಿಯಲ್ಲಿ ಇದ್ದವರು ಅನಂತಕುಮಾರ್. ಅವರ ಪತ್ನಿ ಹಾಗೂ ಬ್ರಾಹ್ಮಣ ಮಹಿಳೆಗೆ ತುಂಬಾ ಅವಮಾನ ಮಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.
ದಿವಂಗತ ಅನಂತಕುಮಾರ್ ಅವರ ಕುಟುಂಬದ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಅವರಿಗೆ ಬೆಂಬಲ ನೀಡಬೇಕು ಎನ್ನುವುದು ನಮ್ಮೆಲ್ಲರ ಆಶಯವಾಗಿದೆ. ಇದು ನಮ್ಮ ವೈಯಕ್ತಿಕ ಅಭಿಪ್ರಾಯ ಎಂದರು.

ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಎಂದ ಹಲವರು
ನಗರದ ಪದ್ಮನಾಭನಗರದಲ್ಲಿ ಇಂದು ಆಯೋಜಿಸಿದ್ದ ಬ್ರಾಹ್ಮಣರ ಸಭೆಯಲ್ಲಿ ಮುಖಂಡರಾದ ಸುದರ್ಶನ್ ಹಾಗೂ ಮುರಳಿ, ಶಂಕರ ಶಾಸ್ತ್ರಿ ಅವರು ಉತ್ತಮ ಭರವಸೆಗಳನ್ನು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಲು ನಿರ್ಧರಿಸಿರುವುದಾಗಿ ಶೀಲಾ ಪ್ರಭಾಕರ್ ಹೇಳಿದರು.

ಗೊಂದಲದ ವಾತಾವರಣ ನಿರ್ಮಾಣ
ಸಭೆಯಲ್ಲಿ ಬಿಕೆ ಹರಿಪ್ರಸಾದ್ ಗೆ ಹಲವಾರು ಸದಸ್ಯರು ಬೆಂಬಲ ವ್ಯಕ್ತಪಡಿಸುತ್ತಿದ್ದಂತೆ ಸ್ವಲ್ಪ ಗೊಂದಲದ ವಾತಾವರಣ ನಿರ್ಮಾಣವಾಯಿತು. ಆದರೆ, ಅದನ್ನು ಸರಿಪಡಿಸುವಲ್ಲಿ ಯಶಸ್ವಿಯಾದ ವಿಪ್ರ ಮುಖಂಡರುಗಳು ಒಮ್ಮತದಿಂದ ಹರಿಪ್ರಸಾದದ ಬೆಂಬಲಿಸುವ ನಿರ್ಧಾರ ತಗೆದುಕೊಂಡರು. ಸಭೆಯಲ್ಲಿ ಎಸ್ ಮುರಳಿ, ಎಸ್ ಸುದರ್ಶನ್, ಬಿ ವಿ ಶ್ರೀನಿವಾಸ್, ಶಂಕರ್ ಶಾಸ್ತ್ರಿ ಸೇರಿದಂತೆ 500 ಕ್ಕೂ ಹೆಚ್ಚು ವಿಪ್ರರು ಪಾಲ್ಗೊಂಡಿದ್ದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮನವಿ
ಬ್ರಾಹ್ಮಣ ಸಂಘಟನಾ ಶಕ್ತಿ ಇನ್ನಷ್ಟು ಬಲಿಷ್ಠವಾಗಬೇಕಿದ್ದರೆ, ಎಲ್ಲ ಸಂಘಗಳು ಎಲ್ಲೆಡೆ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಮತದಾನವಾಗುವಂತೆ ಬಾಂಧವರನ್ನು ಪ್ರೇರೇಪಿಸಬೇಕು ಮತ್ತು ಜಾಗೃತಿ ಮೂಡಿಸಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮನವಿ ಮಾಡಿದೆ.

ತಪ್ಪದೆ ಮತದಾನ ಮಾಡಲು ಕರೆ
ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಮಹಾಸಭಾದ ಅಧ್ಯಕ್ಷ ಕೆ.ಎನ್. ವೇಂಕಟನಾರಾಯಣ್ ಅವರು, ಮತದಾನದ ಈ ಕಾರ್ಯವನ್ನು ವ್ಯಾಪಕವಾಗಿ ರಾಜ್ಯದಾದ್ಯಂತ ಪ್ರಚಾರ ಮಾಡಲು ಎಲ್ಲಾ ಸಂಘಗಳು ತಮ್ಮ ವ್ಯಾಪ್ತಿಯಲ್ಲಿ ಕಾರ್ಯಕ್ರಮವನ್ನು ರೂಪಿಸಿಕೊಳ್ಳಲು ಕೋರಿದ್ದು, ಹಿಂದಿನ ಚುನಾವಣೆಗಿಂತಲೂ ಅಧಿಕವಾಗಿ ಮತದಾನ ಆಗಬೇಕಾದರೆ ಎಲ್ಲರೂ ತಪ್ಪದೆ ಮತದ ಹಕ್ಕನ್ನು ಚಲಾಯಿಸಬೇಕು ಎಂದು ಅವರು ಕರೆ ನೀಡಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications