ಮೇ 13ರಂದು ರಂಗಶಂಕರದಲ್ಲಿ ತಪ್ಪದೇ ಚೆರಿ ತೋಟದಲ್ಲಿ ವಿಹರಿಸಿ
ರಂಗಕರ್ಮಿ ವೆಂಕಟೇಶ್ ಪ್ರಸಾದ್ ನೇತೃತ್ವದ ಬೆಂಗಳೂರು ಥಿಯೇಟರ್ ಕಂಪನಿ, ಆಂಟನ್ ಚೆಕಾಫ್ ನ 'ದಿ ಚೆರ್ರಿ ಆರ್ಚರ್ಡ್' ನಾಟಕದ ಕನ್ನಡಾನುವಾದ, ಚೆರ್ರಿ ತೋಟ ನಾಟಕವನ್ನು ಮತ್ತೊಮ್ಮೆ ರಂಗಶಂಕರದಲ್ಲಿ ಮೂಡಿಸುತ್ತಿದೆ.
ಬೆಂಗಳೂರು, ಮೇ 11:ರಂಗಕರ್ಮಿ ವೆಂಕಟೇಶ್ ಪ್ರಸಾದ್ ನೇತೃತ್ವದ ಬೆಂಗಳೂರು ಥಿಯೇಟರ್ ಕಂಪನಿ, ಆಂಟನ್ ಚೆಕಾಫ್ ನ 'ದಿ ಚೆರ್ರಿ ಆರ್ಚರ್ಡ್' ನಾಟಕದ ಕನ್ನಡಾನುವಾದ, ಚೆರ್ರಿ ತೋಟ ನಾಟಕವನ್ನು ಮತ್ತೊಮ್ಮೆ ರಂಗಶಂಕರದಲ್ಲಿ ಮೂಡಿಸುತ್ತಿದೆ.
ಬೆಂಗಳೂರು ಥೀಯೇಟರ್ ಕಲೆಕ್ಟಿವ್ ತನ್ನ ಚೊಚ್ಚಲ ಪ್ರಯೋಗದ 20 ಮತ್ತು 21 ನೇ ಪ್ರದರ್ಶನಕ್ಕೆ ಸಿದ್ಧವಾಗುತ್ತಿದೆ.
ಇದೇ ಮೇ 13 ಕ್ಕೆ ನಮ್ಮ ತಂಡ ಬೆಂಗಳೂರು ಥೀಯೇಟರ್ ಕಲೆಕ್ಟಿವ್ ನ ಮೊದಲ ಪ್ರಯೋಗ , ಆಂಟನ್ ಚೆಕೋವ್ ನ ದಿ ಚೆರ್ರಿ ಆರ್ಚರ್ಡ್ ನಾಟಕದ ಆಧಾರಿತ 'ಚೆರ್ರಿ ತೋಟ' 20 ಮತ್ತು 21 ನೇ ಪ್ರದರ್ಶನ ಕಾಣುತ್ತಿದೆ .

ಬದಲಾದ ಸಾಮಾಜಿಕ, ರಾಜಕೀಯ ವ್ಯವಸ್ಥೆಗಳು ತೋರಬಹುದಾದ ಪಲ್ಲಟಗಳು, ಸ್ಥಿತ್ಯಂತರಗಳನ್ನು ಒಂದು ಚೆರ್ರಿ ತೋಟದ ಪ್ರತಿಮೆಯ ಮೂಲಕ ರಷ್ಯಾದ ಮಹಾನ್ ಲೇಖಕ, ನಾಟಕಕಾರ ಆಂಟನ್ ಚೆಕಾಫ್ 1904 ರಲ್ಲಿ ಬರೆದ ತನ್ನ ಕೊನೆಯ ನಾಟಕ 'ದಿ ಚೆರ್ರಿ ಆರ್ಚರ್ಡ್', ತನ್ನ ದೇಶ, ಕಾಲಗಳನ್ನು ಮೀರಿ ಪ್ರಸ್ತುತವಾಗಿದೆ ಮತ್ತು ವಿಶ್ವದ ಶ್ರೇಷ್ಟ ನಾಟಕ ಕೃತಿಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ.
ನಾಟಕದ ಕೇಂದ್ರವಾದ ಚೆರ್ರಿ ತೋಟ, ಹಲವು ಪ್ರತಿಮೆಗಳ ಸಂಕೇತವಾಗಿ ಕಾಣುತ್ತದೆ. ಬಾಲ್ಯದ ಸುಂದರ ನೆನಪುಗಳ ಪ್ರತೀಕವಾಗಿ ಒಮ್ಮೆ ಚೆರ್ರಿ ತೋಟ ಕಂಡರೆ, ಪರಿಸರ-ಪೃಕೃತಿಯ ಸುಂದರ ದೃಶ್ಯವಾಗಿ, ಶತಮಾನಗಳ ಕಾಲ ಜನಸಮುದಾಯದಲ್ಲಿ ಬೇರು ಬಿಟ್ಟಿರುವ ನಂಬಿಕೆಯಾಗಿ; ಹೀಗೆ ಹಲವು ಧ್ವನಿಗಳನ್ನು, ಹಲವು ಅರ್ಥಗಳನ್ನು ಹೊಮ್ಮಿಸುತ್ತಾ ಸಾಗುವ ನಾಟಕ, ಭಾರತದಂತ ಭಿನ್ನ ವ್ಯವಸ್ಥೆಯಲ್ಲೂ ಪ್ರಸ್ತುತವಾಗಿ ಕಾಣುವ ಮೂಲಕ ಸಾರ್ವಕಾಲಿಕ ಶ್ರೇಷ್ಟ ನಾಟಕವೆಂದೆನಿಸಿಕೊಳ್ಳುತ್ತದೆ.
ಒಂದು ಕಡೆ ಜಮೀನ್ದಾರಿ ಪದ್ದತಿಯ ಪಾಳೇಗಾರೀ ಮೌಲ್ಯಗಳನ್ನು ಉಳಿಸಿಕೊಳ್ಳುತ್ತ, ಪೋಷಿಸುತ್ತಾ, ಮತ್ತೊಂದು ಕಡೆ ಉದಾರೀಕರಣ, ಮುಕ್ತ ಮಾರುಕಟ್ಟೆಯ ಬಂಡವಾಳಷಾಹಿ ವ್ಯವಸ್ಥೆಗೆ ತನ್ನನ್ನು ತೆರೆದುಕೊಳ್ಳುತ್ತ, ಸಮಾಜವಾದದ ಕನಸನ್ನೂ ಕಾಣುತ್ತ ಸಾಗುತ್ತಿರುವ ಭಾರತದ ಪರಿಸ್ಥಿತಿಯಲ್ಲಿ, ಚೆರ್ರಿ ತೋಟವನ್ನು ಗಟ್ಟಿ ಬೇರು ಬಿಟ್ಟ ಸಾಮಾಜಿಕ ವ್ಯವಸ್ಥೆಯೊಂದರ ಪ್ರತೀಕವಾಗಿ ನೋಡಲು ನಾವು ಪ್ರಯತ್ನಿಸಿದ್ದೇವೆ.
ಚೆರ್ರಿ ತೋಟ
ಮೂಲ : ಆಂಟನ್ ಚೆಕಾಫ್
ಕನ್ನಡಕ್ಕೆ : ವೆಂಕಟೇಶ್ ಪ್ರಸಾದ್
ಪ್ರಸ್ತುತಿ : ಬೆಂಗಳೂರು ಥಿಯೇಟರ್ ಕಂಪನಿ
ವಿನ್ಯಾಸ ಮತ್ತು ನಿರ್ದೇಶನ : ವೆಂಕಟೇಶ್ ಪ್ರಸಾದ್
ಸ್ಥಳ : ರಂಗಶಂಕರ
ದಿನಾಂಕ ಮತ್ತು ಸಮಯ : 13/05/2017 | 3:30 & 7:30
ಟಿಕೆಟ್ ದರ : ರೂ. 100/-
ಸಂಪರ್ಕಿಸಬೇಕಾದದೂರವಾಣಿ ಸಂಖ್ಯೆ : 9900182400
ವೆಬ್ ಸೈಟ್ : www.bookmyshow.com
(ಒನ್ಇಂಡಿಯಾ ಸುದ್ದಿ)
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications