ಬೆಂಗಳೂರಿಗೆ ಬರಲಿದೆ ಸೈಬರ್ ಕ್ರೈಂ ಲ್ಯಾಬ್

cyber crime
ಬೆಂಗಳೂರು, ಸೆ.13 : ಐಟಿ ಸಿಟಿ ಬೆಂಗಳೂರು ಮತ್ತೊಂದು ಹೆಗ್ಗಳಿಕೆಗೆ ಸಾಕ್ಷಿಯಾಗಲಿದೆ. ಕೇಂದ್ರ ಸೈಬರ್ ಕ್ರೈಂ ಪ್ರಯೋಗಾಲಯ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ. ರಾಜ್ಯದ ಸೈಬರ್ ಕ್ರೈಂ ಪ್ರಕರಣಗಳನ್ನು ಪತ್ತೆ ಹಚ್ಚಲು ಇದು ಸಹಾಯಕವಾಗಲಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ಬೆಂಗಳೂರಿನಲ್ಲಿ ಇತ್ತೀಚೆಗೆ ಸೈಬರ್ ಕ್ರೈಂಗಳು ಹೆಚ್ಚಾಗುತ್ತಿವೆ. ಆದ್ದರಿಂದ ನಗರದಲ್ಲಿ ಸೈಬರ್ ಕ್ರೈಂ ಪ್ರಯೋಗಾಲಯ ಸ್ಥಾಪನೆಗೆ ಮುಂದಾಗಿದ್ದು, ಮುಂದಿನ ಎರಡು ತಿಂಗಳಿನಲ್ಲಿ ಇದು ಕಾರ್ಯರಂಭ ಮಾಡಲಿದೆ.

ಸೈಬರ್ ಕ್ರೈಂ ಪ್ರಯೋಗಾಲಯದೊಂದಿಗೆ, ಫೊರೆನ್ಸಿಕ್ ಲ್ಯಾಬ್ ಮತ್ತು ರಾಜ್ಯದ ಆರು ಜಿಲ್ಲೆಗಳಲ್ಲಿ ಹೊಸ ಸೈಬರ್ ಕ್ರೈಂ ಪೊಲೀಸ್ ಠಾಣೆಗಳು ಪ್ರಾರಂಭವಾಗಲಿವೆ. ಸೈಬರ್ ಕ್ರೈಂ ಪ್ರಯೋಗಾಲಯ, ಪೊಲೀಸರಿಗೆ ಸೈಬರ್ ಅಪರಾಧಗಳ ಬಗ್ಗೆ ತನಿಖೆ ನಡೆಸಲು ಅಗತ್ಯ ಸಹಕಾರ ನೀಡಲಿದೆ.

ರಾಜ್ಯದ ಮಂಗಳೂರು, ಮೈಸೂರು, ಗುಲ್ಬರ್ಗಾ, ಬೆಳಗಾವಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಗಳು ಪ್ರಾರಂಭವಾಗಲಿದೆ. ಬೆಂಗಳೂರಿನಲ್ಲಿ ಎರಡನೇ ಸೈಬರ್ ಕ್ರೈಂ ಪೊಲೀಸ್ ಠಾಣೆ ಸಹ ಆರು ತಿಂಗಳವೊಳಗೆ ಸ್ಥಾಪನೆಯಾಗಲಿದೆ.

ಬೆಂಗಳೂರಿನ ಸಿಐಡಿ ಕಚೇರಿಯ ಅಧಿಕಾರಿಗಳು ರಾಜ್ಯದ ಇತರ ಜಿಲ್ಲೆಗಳ ಸೈಬರ್ ಕ್ರೈಂ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲಿದ್ದಾರೆ. ಹೊಸದಾಗಿ ನೇಮಕಾತಿ ಮಾಡಿಕೊಂಡ ಪೊಲೀಸರಿಗೆ ಸೈಬರ್ ಕ್ರೈಂ ಕುರಿತು ಅಗತ್ಯ ತರಬೇತಿ ನೀಡಿದ ನಂತರ ಅವರನ್ನು ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗುತ್ತದೆ.

ಪೊಲೀಸ್ ಠಾಣೆಗಳಿಗೆ ಅಗತ್ಯವಿರುವ ಆಧುನಿಕ ತಂತ್ರಜ್ಞಾನದ ಉಪಕರಣಗಳ ಖರೀದಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಬೆಂಗಳೂರಿನ ಸೈಬರ್ ಕ್ರೈಂ ಪ್ರಯೋಗಾಯಲದ ಮೂಲಕ ರಾಜ್ಯದ ಹ್ಯಾಕಿಂಗ್, ಸೈಬರ್ ಕ್ರೈಂ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅನುಕೂಲವಾಗಲಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲಾಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಆದ್ದರಿಂದ ಬೆಂಗಳೂರಿನಲ್ಲಿ ಕೇಂದ್ರ ಸೈಬರ್ ಕ್ರೈಂ ಪ್ರಯೋಗಾಲಯ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ ಎಂದು ಸೈಬರ್ ಕ್ರೈಂ ವಿಭಾಗದ ಎಸ್ಪಿ ಡಿ.ರೂಪ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+