ಒಂದು ವರ್ಷದಲ್ಲಿ ಬೆಂಗಳೂರು ವೈಫೈ ಸಿಟಿ

ಬೆಂಗಳೂರು, ಆ.13 : ಮುಂದಿನ ಒಂದು ವರ್ಷದಲ್ಲಿ ಬೆಂಗಳೂರು ನಗರ ಸಂಪೂರ್ಣ ವೈಫೈ ಸಿಟಿಯಾಗಲಿದೆ ಎಂದು ಐಟಿ, ಬಿಟಿ ಸಚಿವ ಎಸ್.ಆರ್.ಪಾಟೀಲ್ ಹೇಳಿದ್ದಾರೆ. ಈ ಯೋಜನೆ ಪೂರ್ಣಗೊಂಡ ನಂತರ ದೇಶದಲ್ಲಿ ಉಚಿತ ವೈಫೈ ಸೌಲಭ್ಯ ನೀಡುವ ಪ್ರಥಮ ನಗರ ಬೆಂಗಳೂರು ಆಗಲಿದೆ ಎಂದು ಸಚಿವರು ತಿಳಿಸಿದರು.

ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ಆರ್.ಪಾಟೀಲ್, ಆ.15ರಂದು ಬಾಗಲಕೋಟೆ ನಗರದಲ್ಲಿ ವೈಫೈ ವ್ಯವಸ್ಥೆಗೆ ಚಾಲನೆ ನೀಡಲಾಗುತ್ತಿದೆ. ಶೀಘ್ರದಲ್ಲೇ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ವೈಫೈ ಸೌಲಭ್ಯ ವಿಸ್ತರಿಸಲಾಗುವುದು ಎಂದು ತಿಳಿಸಿದರು.

S.R.Patil

ಮುಂದಿನ ಒಂದು ವರ್ಷದಲ್ಲಿ ಬೆಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ವೈಫೈ ವ್ಯವಸ್ಥೆ ಒದಗಿಸಲಾಗುತ್ತದೆ ಎಂದು ಹೇಳಿದ ಅವರು, ಶೀಘ್ರದಲ್ಲೇ ಬೆಂಗಳೂರಿನ ಕೆಂಗೇರಿ ಟಿಟಿಎಂಸಿ, ಸ್ಯಾಟಲೈಟ್ ಬಸ್ ನಿಲ್ದಾಣ, ಶಿವಾಜಿನಗರ, ಜಯನಗರ, ಬನಶಂಕರಿ ಮತ್ತು ವಿಜಯನಗರದಲ್ಲಿ ವೈಫೈ ಸಂಪರ್ಕ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು. [ಜ್ಞಾನಭಾರತಿ ಆವರಣದಲ್ಲಿ ಉಚಿತ ವೈಫೈ]

ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಅವರು ಮಾತನಾಡಿ, ಇಡೀ ಬೆಂಗಳೂರಿಗೆ ವೈಫೈ ಸಂಪರ್ಕ ಕಲ್ಪಿಸುವುದು ಕಷ್ಟದ ಕೆಲಸವಾದರೂ ಒಂದು ವರ್ಷದಲ್ಲಿ ಅದನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಸದ್ಯ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಪ್ರತಿದಿನ ಸರಾಸರಿ ಒಂದು ಸಾವಿರ ಬಳಕೆದಾರರು ವೈಫೈ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು.

ಇತರ ಜಿಲ್ಲೆಗಳಲ್ಲೂ ವೈಫೈ : ಬೆಂಗಳೂರು ಹೊರತು ಪಡಿಸಿ ಇತರ ಜಿಲ್ಲೆಗಳಲ್ಲೂ ವೈಫೈ ಸೌಲಭ್ಯ ಒದಗಿಸಲಾಗುವುದು. ಮೈಸೂರಿನ ನಗರ ಮತ್ತು ಗ್ರಾಮಾಂತರ ಬಸ್ ನಿಲ್ದಾಣ, ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಮತ್ತು ವಿದ್ಯಾಗಿರಿಯಲ್ಲಿ ಉಚಿತ ವೈಫೈ ವ್ಯವಸ್ಥೆ ಆರಂಭಿಸಲಾಗುತ್ತದೆ ಎಂದು ತಿಳಿಸಿದರು.

ಅರ್ಜಿ ಆಹ್ವಾನ : ಬೆಂಗಳೂರು ಮತ್ತು ಇತರ ಎಲ್ಲ ಜಿಲ್ಲಾ ಕೇಂದ್ರಗಳಿಗೆ ವೈಫೈ ಸೌಲಭ್ಯ ಒದಗಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಈಗಾಗಲೇ 6 ಕಂಪನಿಗಳು ಪ್ರತಿಕ್ರಿಯಿಸಿದ್ದು, ಪ್ರಸ್ತಾವನೆ ಪರಿಶೀಲಿಸಲಾಗುತ್ತಿದೆ. ಈ ಪ್ರಕ್ರಿಯೆ 6 ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+