ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸೋಂಕು ಮತ್ತು ಬಸ್ ಮುಷ್ಕರ: ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 19: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಹೆಚ್ಚಳದಿಂದಾಗಿ ಏ.19, 20 ಮತ್ತು 21ರಿಂದ ನಡೆಯಬೇಕಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿಯ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ.

ಬೆಂಗಳೂರು ವಿಶ್ವವಿದ್ಯಾನಿಲಯವು ಪದವಿ ಕೋರ್ಸ್‌ಗಳ ಮೊದಲ, ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು, ಸ್ನಾತಕೋತ್ತರ ಪದವಿಯ ಮೊದಲ ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಂ.ಎ, ಎಂ.ಎಸ್ಸಿ ಮತ್ತು ಎಂಕಾಮ್ ಸೇರಿದಂತೆ ಕಾರ್ಯಕ್ರಮಗಳ ಮೂರನೇ ಸೆಮಿಸ್ಟರ್ ಸ್ನಾತಕೋತ್ತರ ಸೆಮಿಸ್ಟರ್ ಪರೀಕ್ಷೆಗಳನ್ನು ವಿಶ್ವವಿದ್ಯಾಲಯವು ಮುಂದೂಡಿದೆ.

Bangalore University Postpones Exams Indefinitely Due To Coronavirus Cases Surge And Bus Strike

ಎಂಸಿಎ ಮತ್ತು ಬಿ.ಎಸ್ಸಿ-ಎಂ.ಎಸ್ಸಿ ಜೈವಿಕ ವಿಜ್ಞಾನ ಮತ್ತು ಎಂಟಿಎ ಐದು ವರ್ಷಗಳ ಇಂಟಿಗ್ರೇಟೆಡ್ ಕೋರ್ಸ್ ಸೇರಿದಂತೆ ಕಾರ್ಯಕ್ರಮಗಳಿಗೆ ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಈ ಪರೀಕ್ಷೆಗಳನ್ನು ಏಪ್ರಿಲ್ 20 ರಿಂದ ನಡೆಸಲು ನಿರ್ಧರಿಸಲಾಗಿತ್ತು.

Recommended Video

'ಜನರು ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರೆ, ಕಠಿಣ ಕ್ರಮದ ಅವಶ್ಯಕತೆ ಬರ್ತಿರಲಿಲ್ಲ' ಸಚಿವ ಸುಧಾಕರ್‌ | Oneindia Kannada

ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ವೇಣುಗೋಪಾಲ್ ಕೆ.ಆರ್ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, ಸಾರಿಗೆ ಮತ್ತು ಕೊರೊನಾ ಸೋಂಕು ಹೆಚ್ಚಳದ ಕಾರಣದಿಂದಾಗಿ ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂಮದಿನ ಆದೇಶದವರೆಗೂ ಮುಂದೂಡುವುದಾಗಿ ಘೋಷಿಸಿದ್ದಾರೆ. ವಿಶ್ವವಿದ್ಯಾಲಯವು ಪರೀಕ್ಷೆಯ ಹೊಸ ದಿನಾಂಕಗಳನ್ನು ನಂತರ ಪ್ರಕಟಿಸಲಿದೆ ಎಂದು ತಿಳಿಸಿದ್ದಾರೆ.

English summary
Bangalore University has postponed all exams which were scheduled to begin from April 19 till further orders due to covid-19 cases surge and bus strike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X