• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು ವಿವಿ ಪ್ರೊಫೆಸರ್ ನಿಗೂಢ ಸಾವು; ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

|

ಬೆಂಗಳೂರು, ಡಿಸೆಂಬರ್ 22 : ಬೆಂಗಳೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಕೆಂಗೇರಿಯ ನಿವಾಸದಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

ಪ್ರೊ. ಡಾ. ಜಿ. ನಂಜುಂಡನ್ ಬೆಂಗಳೂರು ವಿಶ್ವವಿದ್ಯಾಲಯದ ಸಾಂಖ್ಯಿಕ ವಿಭಾಗದಲ್ಲಿ ಪ್ರೊಫೆಸರ್ ಆಗಿದ್ದರು. ಕೆಂಗೇರಿ ಬಳಿಯ ನಾಗದೇವನಹಳ್ಳಿಯ ಮನೆಯಲ್ಲಿ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಾಲ್ಕು ದಿನಗಳಿಂದ ನಂಜುಂಡನ್ ವಿಶ್ವವಿದ್ಯಾಲಯಕ್ಕೆ ತೆರಳಿರಲಿಲ್ಲ.

ವಾರದ ಹಿಂದೆ ನಾಪತ್ತೆಯಾಗಿದ್ದ ಬಾಲಕಿ ಶವ ಸಿಕ್ಕಿದ್ದು ತೋಟದ ಬಾವಿಯಲ್ಲಿ

ಸಾಂಖ್ಯಿಕ ವಿಭಾಗ ಸಿಬ್ಬಂದಿ ಪ್ರೊ. ಡಾ. ಜಿ. ನಂಜುಂಡನ್‌ಗೆ ಅನಾರೋಗ್ಯವಾಗಿರಬಹುದು ಎಂದು ಮನೆಗೆ ಬಂದಿದ್ದರು. ಎಷ್ಟು ಕರೆದರೂ, ಫೋನ್ ಮಾಡಿದರೂ ಬಾಗಿಲು ತೆರೆದಿರಲಿಲ್ಲ. ಆಗ ಪತ್ನಿಗೆ ಮಾಹಿತಿಯನ್ನು ನೀಡಿದ್ದರು.

ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

ಸೌದಿಯಲ್ಲಿ ಮೃತಪಟ್ಟ ಜಾನ್ ಶವ 9 ತಿಂಗಳ ಬಳಿಕ ಮೂಲ್ಕಿಗೆ ಬಂತು!

ತಮಿಳುನಾಡಿನಲ್ಲಿದ್ದ ಪತ್ನಿ ಆಗಮಿಸಿ ಫೋನ್ ಮಾಡಿ, ಬಾಗಿಲು ಬಡಿದರೂ ಬಾಗಿಲು ತೆರೆಯಲಿಲ್ಲ. ಆಗ ಕೆಂಗೇರಿ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಬಾಗಿಲು ಒಡೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಮಗನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪ್ರೊ. ಡಾ. ಜಿ. ನಂಜುಂಡನ್ 4 ದಿನದ ಹಿಂದೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದು, ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊ. ಡಾ. ಜಿ. ನಂಜುಂಡನ್ ಅನುವಾದಕರಾಗಿಯೂ ಉತ್ತಮ ಹೆಸರುಗಳಿಸಿದ್ದರು. ಡಾ. ಯು. ಆರ್. ಅನಂತಮೂರ್ತಿ ಅವರ ಕೃತಿಗಳನ್ನು ತಮಿಳಿಗೆ ಅನುವಾದ ಮಾಡಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸಹ ಪಡೆದಿದ್ದರು.

English summary
Bangalore university statistics department professor Dr.G. Nanjundan found dead. Body was found in decomposed state at his residence, Kengeri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X