ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೌರಶಕ್ತಿ ಮೊರೆ ಹೋದ ಬೆಂಗಳೂರು ವಿಶ್ವವಿದ್ಯಾಲಯ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 02 : ಪರಿಸರ ಸ್ನೇಹಿಯಾಗುತ್ತ ಹೆಜ್ಜೆ ಇಟ್ಟಿರುವ ಬೆಂಗಳೂರು ವಿಶ್ವವಿದ್ಯಾಲಯ ಸೌರ ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪನೆ ಮಾಡಿದೆ. 495 ಕಿಲೋವಾಟ್ ವಿದ್ಯುತ್ ಉತ್ಪಾದನೆಯಾಗಲಿದೆ.

ವಿಶ್ವವಿದ್ಯಾಲಯದ ಜ್ಞಾನ ಭಾರತಿ ಕ್ಯಾಂಪಸ್ ಆವರಣದಲ್ಲಿ ಸೌರ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸುಮಾರು 500 ಕಿಲೋವಾಟ್ ವಿದ್ಯುತ್ ಅಗತ್ಯವಿದೆ.

2 ಉದ್ಯಾನದಲ್ಲಿ ಸೌರ ವಿದ್ಯುತ್ ಉತ್ಪಾದನೆ ಆರಂಭಿಸಿದ ಬಿಬಿಎಂಪಿ 2 ಉದ್ಯಾನದಲ್ಲಿ ಸೌರ ವಿದ್ಯುತ್ ಉತ್ಪಾದನೆ ಆರಂಭಿಸಿದ ಬಿಬಿಎಂಪಿ

495 ಕಿಲೋವಾಟ್ ವಿದ್ಯುತ್ ವಿವಿ ಆವರಣದಲ್ಲಿಯೇ ತಯಾರಾಗುವುದರಿಂದ ವಿದ್ಯುತ್ ಮೇಲಿನ ಬೇಡಿಕೆ ಕಡಿಮೆಯಾಗಲಿದೆ. ವಿಶ್ವವಿದ್ಯಾಲಯಕ್ಕೆ ವಿದ್ಯುತ್ ಪೂರೈಕೆ ಮಾಡುವ ಬೆಸ್ಕಾಂಗೆ ಪ್ರತಿ ಯೂನಿಟ್‌ಗೆ 7 ರೂ. ಅನ್ನು ಪಾವತಿ ಮಾಡಲಾಗುತ್ತಿದೆ.

ಬೆಳಗಾವಿ : ಜಿಲ್ಲಾ ಆಸ್ಪತ್ರೆಗಳಲ್ಲಿ ಸೌರ ವಿದ್ಯುತ್ ಉತ್ಪಾದನೆ ಬೆಳಗಾವಿ : ಜಿಲ್ಲಾ ಆಸ್ಪತ್ರೆಗಳಲ್ಲಿ ಸೌರ ವಿದ್ಯುತ್ ಉತ್ಪಾದನೆ

Bangalore University Set Up 495 Kilowatt Solar Power Plant

ಈಗ ಸೌರ ವಿದ್ಯುತ್ ಉತ್ಪಾದನೆಯಿಂದಾಗಿ ಬೆಸ್ಕಾಂಗೆ ಪ್ರತಿ ಯೂನಿಟ್‌ಗೆ 4 ರೂ. ಪಾವತಿ ಮಾಡಬೇಕಿದೆ. ಇದರಿದಾಗಿ ಶೇ 50ರಷ್ಟು ವಿದ್ಯುತ್ ಬಿಲ್ ಉಳಿತಾಯವಾಗಲಿದೆ ಎಂದು ಬೆಂಗಳೂರು ವಿವಿ ಪ್ರಕಟಣೆಯಲ್ಲಿ ಹೇಳಿದೆ.

ಸೌರಶಕ್ತಿ ಮೊರೆ ಹೋದ ಬಿಎಂಟಿಸಿ; 4.32 ಕೋಟಿ ವಿದ್ಯುತ್ ಬಿಲ್ ಉಳಿತಾಯ ಸೌರಶಕ್ತಿ ಮೊರೆ ಹೋದ ಬಿಎಂಟಿಸಿ; 4.32 ಕೋಟಿ ವಿದ್ಯುತ್ ಬಿಲ್ ಉಳಿತಾಯ

ವಿಶ್ವವಿದ್ಯಾಲಯ ಆರು ಕಟ್ಟಡಗಳ ಮೇಲೆ ಸೌರ ಫಲಕವನ್ನು ಅಳವಡಿಕೆ ಮಾಡಲಾಗಿದೆ. ಸುಮಾರು 5 ಸಾವಿರ ಚದರ ಅಡಿಯಲ್ಲಿ ಫಲಕ ಹಾಕಲಾಗಿದೆ. ಇಲ್ಲಿ ಉತ್ಪಾದನೆಯಾಗುವ ವಿದ್ಯುತ್‌ ಅನ್ನು ವಿವಿಗೆ ವಿದ್ಯುತ್ ಪೂರೈಕೆಯಾಗುವ ಗ್ರಿಡ್‌ಗೆ ಸಂಪರ್ಕಿಸಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 2 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡುವಷ್ಟು ಸ್ಥಳಾವಕಾಶವಿದೆ. ಭವಿಷ್ಯದಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಮಾಡಿ ಬೆಸ್ಕಾಂಗೆ ಮಾರಾಟ ಮಾಡುವ ಚಿಂತನೆಯೂ ವಿವಿ ಮುಂದಿದೆ.

English summary
Bangalore University has set up a 495 kilowatt solar power plant in Jnanabharathi campus. University requires approximately 500KW power.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X