ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ವಿವಿ ಕುಲಪತಿ ನೇಮಕ ವಿವಾದ
ಬೆಂಗಳೂರು, ಮಾ.21: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಪ್ರೊಫೆಸರ್ ಕೆ.ಆರ್. ವೇಣುಗೋಪಾಲ್ ಅವರ ನೇಮಕವನ್ನು ರದ್ದುಗೊಳಿಸಿದ ಹೈಕೋರ್ಟ್ ವಿಭಾಗೀಯ ಪೀಠದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯಪಾಲರ ಕಚೇರಿ ಇಂದು ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸಿದೆ.
"ರಾಜ್ಯಪಾಲರ ಕಚೇರಿಯು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ, ಕಚೇರಿ ಇಂದೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದೆ' ಎಂದು ರಾಜ್ಯಪಾಲರ ಕಾರ್ಯದರ್ಶಿ ಹೇಳಿದ್ದಾರೆ.
ಇದೇ ವೇಳೆ ಉನ್ನತ ಶಿಕ್ಷಣ ಇಲಾಖೆ ಹಾಗೂ ಪ್ರಾಧ್ಯಾಪಕ ಕೆ.ಆರ್. ವೇಣುಗೋಪಾಲ್ ಅವರು ಸಹ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇದರಿಂದಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ಎರಡು ಸುತ್ತು ಕಾನೂನು ಹೋರಾಟ ನಡೆದಿದ್ದ ವಿಚಾರ ಮೂರನೇ ಸುತ್ತಿನ ಹೋರಾಟಕ್ಕೆ ಅಣಿಯಾಗಿದೆ.

ಕಳೆದ ವಾರ ಮಾರ್ಚ್ 17 ರಂದು ನ್ಯಾಯಮೂರ್ತಿ ಎಸ್.ಸುಜಾತಾ ಮತ್ತು ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ್ ಅವರಿದ್ದ ವಿಭಾಗೀಯ ಪೀಠವು ಪ್ರೊ.ಕೆ.ಆರ್. ವೇಣುಗೋಪಾಲ್ ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಕರ್ನಾಟಕ ಸರ್ಕಾರದ ರಾಜ್ಯಪಾಲರ ಕಚೇರಿ ಮತ್ತು ಬೆಂ.ವಿ.ವಿ. ಕುಲಪತಿ ವೇಣುಗೋಪಾಲ್ ಸಲ್ಲಿಸಿದ್ದ ರಿಟ್ ಮೇಲ್ಮನವಿಗಳನ್ನು ವಜಾಗೊಳಿಸಿದ ವಿ'ಗೀಯ ಪೀಠವು ಏಕಸದಸ್ಯಪೀಠದ ಆದೇಶ ಎತ್ತಿಹಿಡಿದಿತ್ತು.
ವಿಭಾಗೀಯಪೀಠದ ತೀರ್ಪು ಏನು?
ನಾಲ್ಕು ಮೇಲ್ಮನವಿಗಳನ್ನು ವಜಾಗೊಳಿಸಿರುವ ವಿಭಾಗೀಯಪೀಠ, 2018ರ ಜೂ.12ರಂದು ನೇಮಕ ಆದೇಶ ಹೊರಡಿಸಲಾಗಿದೆ. ಅದಕ್ಕೆ ಸರ್ಕಾರದ ಅನುಮೋದನೆ ಇರಲಿಲ್ಲ. ತದ ನಂತರ 2018ರ ಜೂ.28ರಂದು ಸರ್ಕಾರ ಅನುಮೋದನೆ ನೀಡಿದೆ. ಇದು ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ2000ರ ಸೆಕ್ಷನ್ 14(4)ರ ಸ್ಪಷ್ಟ ಉಲ್ಲಂಘನೆಯಾಗಿದೆ'' ಎಂದು ಆದೇಶಿಸಿದೆ.
ಅಲ್ಲದೆ, ಸರ್ಕಾರದ ಅನುಮೋದನೆ ಪಡೆದ ನಂತರವೇ ನೇಮಕ ಆದೇಶ ಹೊರಡಿಸಬೇಕಿದೆ. ಅದು ಬಿಟ್ಟು ನೇಮಕಾತಿ ಆದೇಶ ಹೊರಡಿಸಿದ ನಂತರ ಸರ್ಕಾರದ ಅನುಮೋದನೆ ನೀಡಿದರೆ, ಅದು ನೇಮಕದಲ್ಲಿ ಲೋಪವಾದಂತಾಗುತ್ತದೆ. ಆದ್ದರಿಂದ ವೇಣುಗೋಪಾಲ್ ಅವರನ್ನು ಕುಲಪತಿಗೆ ನೇಮಿಸಿದ ಆದೇಶ ರದ್ದುಪಡಿಸಿ ಏಕಸದಸ್ಯಪೀಠ ನೀಡಿರುವ ತೀರ್ಪು ಸರಿ ಇದ್ದು, ಅದರಲ್ಲಿ ಹಸ್ತಕ್ಷೇಪ ಮಾಡಲಾಗದು''ಎಂದು ಆದೇಶದಲ್ಲಿ ತಿಳಿಸಿದೆ.
ಇದರಿಂದಾಗಿ ಕುಲಪತಿ ವೇಣುಗೋಪಾಲ್ ತಮ್ಮ ಹುದ್ದೆ ತ್ಯಜಿಸಬೇಕಾಗುತ್ತದೆ. ನ್ಯಾಯಾಲಯದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಅವರು ಈವರೆಗೆ ಕುಲಪತಿಯಾಗಿ ಮುಂದುವರಿದಿದ್ದರು. ಅವರ ಸೇವಾವಧಿ ಜೂನ್ 12ರವರೆಗೆ ಇದೆ, ಆದರೂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹುದ್ದೆ ತ್ಯಜಿಸಬೇಕು, ಇಲ್ಲವೇ ಸುಪ್ರೀಂಕೋರ್ಟ್ ಮೊರೆ ಹೋಗಿ ಕೂಡಲೇ ಹೈಕೋರ್ಟ್ ವಿಭಾಗೀಯಪೀಠದ ಆದೇಶಕ್ಕೆ ತಡೆಯಾಜ್ಞೆ ತರಬೇಕಾದ ಅನಿವಾರ್ಯತೆ ಎದುರಾಗಿದೆ.
ಪ್ರಕರಣದ ಹಿನ್ನೆಲೆ: ಡಾ.ಕೆ.ಆರ್.ವೇಣುಗೋಪಾಲ್ ಅವರನ್ನು ಕುಲಪತಿ ಹುದ್ದೆಗೆ ನಾಲ್ಕು ವರ್ಷ ಅವಧಿ ಅಥವಾ ಅವರಿಗೆ 67 ವರ್ಷ ತುಂಬುವವರೆಗೆ, ಈ ಎರಡರಲ್ಲಿ ಯಾವುದು ಮೊದಲು ಘಟಿಸುವುದಕ್ಕೆ ಅಲ್ಲಿಯವರೆಗೆ ನೇಮಕ ಮಾಡಿ 2018ರ ಜೂ.12ರ ಆದೇಶಿಸಲಾಗಿತ್ತು. ಏಕ ಸದಸ್ಯ ನ್ಯಾಯಪೀಠವು 2019ರ ಸೆ.24ರಂದು ವೇಣುಗೋಪಾಲ್ ನೇಮಕ ರದ್ದುಪಡಿಸಿತ್ತು. ಆ ಆದೇಶಕ್ಕೆ ವಿಭಾಗೀಯಪೀಠ ತಡೆಯಾಜ್ಞೆ ನೀಡಿತ್ತು.
ಡಾ.ಕೆ.ಆರ್. ವೇಣುಗೋಪಾಲ್ ನೇಮಕ ಪ್ರಶ್ನಿಸಿ ನಿವೃತ್ತ ಪ್ರೊ.ಸಂಗಮೇಶ್ ಪಾಟೀಲ್ ಹೈಕೋರ್ಟ್ ಮೊರೆ ಹೋಗಿದ್ದರು,ಸರ್ಕಾರದ ಅನುಮೋದನೆ ಇಲ್ಲದೆಯೇ ಡಾ.ವೇಣುಗೋಪಾಲ್ ಅವರನ್ನು ಕುಲಪತಿ ಹುದ್ದೆಗೆ ನೇಮಿಸಿರುವುದು ಕಾನೂನು ಬಾಹಿರ ಎಂದು ವಾದಿಸಿದ್ದರು. ಈ ವಾದ ಪುರಸ್ಕರಿಸಿದ್ದ ಏಕ ಸದಸ್ಯ ಪೀಠ, ಡಾ.ವೇಣುಗೋಪಾಲ್ ಅವರನ್ನು ಕುಲಪತಿಗೆ ನೇಮಿಸಿದ್ದ ಆದೇಶ ರದ್ದುಪಡಿಸಿತ್ತು.












Click it and Unblock the Notifications