ಮಧ್ಯಾಹ್ನ 3ಗಂಟೆ ತನಕ ಬಿಬಿಎಂಪಿ ಕಚೇರಿಗೆ ಬರಬೇಡಿ
ಬೆಂಗಳೂರು, ನ. 15 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಗೆ ತೆರಳುವ ಸಾರ್ವಜನಿಕರಿಗೆ ಇನ್ನು ಮುಂದೆ ಸಮಯ ನಿಗದಿ ಮಾಡಲಾಗುತ್ತದೆ. ಹೌದು, ಬಿಬಿಎಂಪಿ ಲೆಕ್ಕಪತ್ರ ವಿಭಾಗದ ಎಲ್ಲ ವ್ಯವಹಾರಗಳು ಡಿ.1ರಿಂದ ಆನ್‌ಲೈನ್ ಮೂಲಕ ನಡೆಯಲಿದ್ದು, ಬೆಳಗ್ಗೆಯಿಂದ ಮಧ್ಯಾಹ್ನ 3ರವರೆಗೆ ಬಿಬಿಎಂಪಿ ಕಚೇರಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗುತ್ತದೆ.
ಬಿಬಿಎಂಪಿ ಮೇಯರ್ ಎನ್.ಶಾಂತಕುಮಾರಿ ಅವರು ಶುಕ್ರವಾರ ಪಾಲಿಕೆಯ ಇಲಾಖಾವಾರು ವಿಶ್ಲೇಷಣಾ ಸಭೆ ನಡೆಸಿದರು, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೆಕ್ಕಪತ್ರ ವಿಭಾಗದ ವ್ಯವಹಾರದಲ್ಲಿ ಪಾರದರ್ಶಕತೆ ಇಲ್ಲ ಎಂಬ ಆರೋಪವಿದೆ. ಆ ಹಿನ್ನೆಲೆಯಲ್ಲಿ ಡಿ.1ರಿಂದ ವೇತನ ವಿತರಣೆ, ಗುತ್ತಿಗೆದಾರರಿಗೆ ಬಿಲ್ ಪಾವತಿ ಸೇರಿದಂತೆ ಎಲ್ಲ ಪ್ರಕ್ರಿಯೆ ಆನ್‌ಲೈನ್‌ನಲ್ಲಿ ನಡೆಯಲಿದೆ ಎಂದರು. [ಮೇಯರ್ ಸಂದರ್ಶನ ಓದಿ]

ಮುಖ್ಯ ಲೆಕ್ಕಾಧಿಕಾರಿ ವಿಭಾಗ ಸೇರಿದಂತೆ ಇತರ ಕಚೇರಿಗಳಿಗೆ ದಿನವಿಡೀ ಸಾರ್ವಜನಿಕರು, ಇತರರು ಭೇಟಿ ನೀಡುವುದರಿಂದ ಕೆಲಸ ಕಾರ್ಯಗಳಿಗೆ ಅಡ್ಡಿಯಾಗಲಿದೆ. ಆದ್ದರಿಂದ ಪ್ರತಿದಿನ ಮಧ್ಯಾಹ್ನ 3ರವರೆಗೆ ಬಿಬಿಎಂಪಿ ಕೇಂದ್ರ ಕಚೇರಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗುವುದು ಎಂದು ತಿಳಿಸಿದರು.
ಬಿಬಿಎಂಪಿ ಕಚೇರಿ ಆವರಣದಲ್ಲಿ ದೇವಾಲಯವಿರುವುದರಿಂದ ಭಕ್ತರ ನಿಯಂತ್ರಣ ಸಾಧ್ಯವೇ? ಎಂಬ ಪ್ರಶ್ನೆಗೆ ಉತ್ತರಿಸಿದ ಮೇಯರ್, ಕಚೇರಿ ಸಮಯ ಆರಂಭವಾಗುವ ಹೊತ್ತಿಗೆ ನಿರ್ಬಂಧ ವಿಧಿಸುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಶಿಸ್ತು ತರಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಹೊರತುಪಡಿಸಿ ಉಳಿದವರಿಗೆ 3 ಗಂಟೆ ಬಳಿಕ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. 3 ಗಂಟೆಗೆ ಎಲ್ಲ ಅಧಿಕಾರಿಗಳು ಕಚೇರಿಯಲ್ಲಿರುವಂತೆ ಸೂಚಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications