ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಂಗ್ಲಾದೇಶಿ ಯುವತಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಎನ್ಐಎ ಎಂಟ್ರಿ ಯಾಕೆ?

|
Google Oneindia Kannada News

ಬೆಂಗಳೂರು, ಜು. 20: ರಾಜಧಾನಿಯ ಮರ್ಯಾದೆಯನ್ನು ರಾಷ್ಟ್ರ ಮಟ್ಟದಲ್ಲಿ ಕಳೆದ ಬಾಂಗ್ಲಾ ಯುವತಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಬಾಂಗ್ಲಾ ವಾಸಿಗಳು ಅಕ್ರಮವಾಗಿ ದೇಶಕ್ಕೆ ನುಸುಳಿರುವ ಹಾಗೂ ಮಾನವ ಕಳ್ಳ ಸಾಗಣೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವಾಲಯ ಎನ್ಐಎ ತನಿಖೆಗೆ ಸೂಚಿಸದೆ. ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಪ್ರತ್ಯೇಕ ಎಫ್ಐಆರ್ ದಾಖಲಿಸುವ ಮೂಲಕ ತನಿಖೆ ಆರಂಭಿಸಿದ್ದಾರೆ.

ಬಾಂಗ್ಲಾ ಮೂಲದ ಯುವತಿಯ ಮೇಲೆ ಯುವಕ ಗುಂಪು ಚಿತ್ರಹಿಂಸೆ ನೀಡಿ ಅತ್ಯಾಚಾರ ಎಸಗಿದ್ದ ವಿಡಿಯೋ ವೈರಲ್ ಆಗಿತ್ತು. ದೇಶವನ್ನೇ ತಲ್ಲಣ ಗೊಳಿಸಿದ್ದ ವಿಡಿಯೋ ಜಾಡು ಹಿಡಿದು ತನಿಖೆ ನಡೆಸಿದ್ದ ಬೆಂಗಳೂರು ಪೊಲೀಸರು ಯುವತಿಯನ್ನು ಪತ್ತೆ ಮಾಡಿದ್ದರು. ಅತ್ಯಾಚಾರ ಸಂಬಂಧ ಹದಿಮೂರು ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರೆಲ್ಲರೂ ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿದ್ದು, ಭಾರತದಲ್ಲಿ ಅಕ್ರಮ ದಾಖಲೆ ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಅಲ್ಲದೇ ಬಾಂಗ್ಲಾದಿಂದ ಹೆಣ್ಣು ಮಕ್ಕಳನ್ನು ಮಾವನ ಕಳ್ಳ ಸಾಗಣೆ ಮಾಡಿ ವೇಶ್ಯಾವಾಟಿಕೆ ದಂಧೆಗೆ ತಳ್ಳಿರುವ ವಿಚಾರವೂ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಸಂಬಂಧ ತನಿಖೆ ಪೂರ್ಣಗೊಳಿಸಿದ್ದ ರಾಮಮೂರ್ತಿನಗರ ಪೊಲೀಸರು ಹದಿಮೂರು ಮಂದಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.

Bangladeshi Girl Gang Rape Case: NIA Registered New FIR for human trafficking investigation

Recommended Video

ಹುಟ್ಟೋ ಮಕ್ಕಳ ಅದ್ಭುತ ಭವಿಷ್ಯಕ್ಕಾಗಿ ಗರ್ಭ ಸಂಸ್ಕಾರ | Benefits of Garbha Sanskar | Oneindia Kannada

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೆತ್ತಿಕೊಂಡಿರುವ ಎನ್ಐಎ ಅಧಿಕಾರಿಗಳು ಮಾನವ ಕಳ್ಳ ಸಾಗಣೆ ಜಾಡು ಪತ್ತೆಗೆ ಮುಂದಾಗಿದ್ದಾರೆ. ಮಾತ್ರವಲ್ಲದೆ ದೇಶದೊಳಗೆ ಅಕ್ರಮವಾಗಿ ನುಸುಳಿದ ಬಗ್ಗೆ ತನಿಖೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾ ಯುವತಿಯ ಆರೋಪಿಗಳ ವಿವರ ಹಾಗೂ ಸಂತ್ರಸ್ತೆಯ ವಿವರಗಳನ್ನು ಎನ್ಐಎ ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಈ ಪ್ರಕರಣದ ಜಾಡು ಹಿಡಿದು ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶೀಯರ ಅದರಲ್ಲೂ ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ತನಿಖೆ ನಡೆಸಲು ಎನ್ಐಎ ಮುಂದಾಗಿದೆ.

English summary
Why did the NIA make a entry in the Bangladeshi Girl gang rape case know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X