50 ಲಕ್ಷದಷ್ಟು ನಿಷೇಧಿತ ನೋಟು ವಶಕ್ಕೆ ಪಡೆದ ಅಶೋಕ ನಗರ ಪೊಲೀಸರು
ಬೆಂಗಳೂರಿನ ಅಶೋಕನಗರ ಪೊಲೀಸರು ಭರ್ಜರಿ ಬೇಟೆಯನ್ನೇ ಆಡಿದ್ದಾರೆ. ನಿಷೇಧಿತ 500, 1000ದ ನೋಟಿನ 50 ಲಕ್ಷದಷ್ಟು ಹಣ ಇಟ್ಟುಕೊಂಡಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಆನಂದ ಜೈನ್, ವಿನಾಯಕ ಪ್ರಸಾದ್ ಬಂಧಿತರು.
ಬೆಂಗಳೂರು, ಮಾರ್ಚ್ 18: ನಗರ ಅಪರಾಧ ವಿಭಾಗದ ಪೊಲೀಸರು ಅಶೋಕನಗರ ಪೊಲೀಸ್ ಠಾಣಾ ಸರಹದ್ದಿನ ಎಸ್ ಸ್ಟ್ರೀಟ್ ನಂಜಪ್ಪ ಸರ್ಕಲ್, ಲಾಂಗಪೋರ್ಡ್ ಲಿಂಕ್ ರಸ್ತೆ ಮನೆಯೊಂದಲ್ಲಿ ಇಬ್ಬರನ್ನು ಬಂಧಿಸಿ, ಅಮಾನ್ಯಗೊಂಡ 500, 1000 ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.
ಆನಂದ್ ಜೈನ್, ವಿನಾಯಕ್ ಪ್ರಸಾದ್ ಬಂಧಿತರು. ಇವರಿಬ್ಬರಿಂದ 50 ಲಕ್ಷದಷ್ಟು ನಿಷೇಧಿಸಲಾದ 500, 1000 ನೋಟುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ವಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ. ಸಿಸಿಬಿ ಎಸಿಪಿ ಎಚ್ ಎಂ ಮಹಾದೇವಪ್ಪ ನೇತೃತ್ವದಲ್ಲಿ ಇನ್ ಸ್ಪೆಕ್ಟರ್ ಗಳಾದ ಡಾ.ಬಿಎಸ್ ಸುಧಾಕರ್, ಎಸ್ ರಾಜು ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.[ಉಡುಪಿ: ಚಿನ್ನದ ವ್ಯಾಪಾರಿಯ ದರೋಡೆ]

ನಕಲಿ ವುಡ್ ಕಟರ್ ವಶ
ಸಿಸಿಬಿ ಪೊಲೀಸರು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರಾಜ್ ಶ್ರೀ ಟೂಲ್ಸ್ ಎಂಬ ಅಂಗಡಿಯಲ್ಲಿ ಪ್ರತಿಷ್ಠಿತ ಬ್ರಾಂಡಿನ ಹೆಸರಿನಲ್ಲಿ ಕಳಪೆ ಗುಣಮಟ್ಟದ, ನಕಲಿಯಾಗಿ ತಯಾರು ಮಾಡಿದ ವುಡ್‌ಕಟರ್ ಉಪಕರಣಗಳನ್ನು ಮಾರಾಟ ಮಾಡುತ್ತಿದ್ದ ಜಗದೀಶ್ ಬಿನ್ ಮುದ್ದಾರಾಮ್ ಎಂಬಾತನನ್ನು ಬಂಧಿಸಲಾಗಿದೆ.[ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದವನು ಕಂಬಿ ಹಿಂದೆ]
ಆತನಿಂದ ನಕಲಿಯಾಗಿ ತಯಾರು ಮಾಡಿದ್ದ ಒಟ್ಟು ಒಟ್ಟು 4.59 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Janhvi Kapoor: ಅಶ್ಲೀಲ ವೆಬ್ಸೈಟ್ನಲ್ಲಿ ನನ್ನ ಫೋಟೋ ನೋಡಿದ್ದೆ: ಹದಿಹರೆಯದ ಕಹಿ ಘಟನೆ ಬಿಚ್ಚಿಟ್ಟ ನಟಿ ಜಾನ್ವಿ ಕಪೂರ್ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications