ಬೆಂಗಳೂರಿನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದ್ದು ಬೆಳ್ಳಂಬೆಳಿಗ್ಗೆ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ ಮಾಡಲಾಗಿದೆ.

ಬೆಂಗಳೂರು ಫೆಬ್ರವರಿ 28: ಹಣಕಾಸಿನ ವಿಚಾರಕ್ಕೆ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಚೆಟ್ಟೀಸ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಲಿಯಾಖತ್ ಅಲಿಖಾನ್ ಕೊಲೆಯಾದ ವ್ಯಕ್ತಿ. ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ರಾತ್ರಿ ಜಿಮ್‌ಗೆ ಹೋಗಿದ್ದ ಲಿಯಾಖತ್ ಅಲಿಖಾನ್ ನಾಪತ್ತೆಯಾಗಿದ್ದರು. ಬೆಳಗಾದರೂ ಮನೆಗೆ ಆಗಮಿಸಿರಲಿಲ್ಲ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ರಾತ್ರಿ ಇಡೀ ಕುಟುಂಬಸ್ಥರು ಹುಡುಕಾಟ ನಡೆಸಿದಾಗ, ಇಂದು ಬೆಳಿಗಿನ ಜಾವ ಮತ್ತೊಂದು ಮನೆಯಲ್ಲಿ ಲಿಯಾಕತ್ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಪೊಲೀಸರು ಮತಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಚಂದ್ರಾಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Barbaric killing of a person in Bangalore: hacked to death with handguns!

ಹಣಕಾಸಿನ ವಿಚಾರವಾಗಿ ಹತ್ಯೆ ನಡೆದಿರುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಸ್ನೇಹಿತರಾದ ವಾಸೀಂ ಮತ್ತು ಜೋಹರ್ ಕೊಲೆ ಮಾಡಿರುವುದಾಗಿ ಆರೋಪ ಕೇಳಿ ಬರುತ್ತಿದೆ. ಘಟನೆಗೆ ಸಂಬಂಧಿಸಿ ಮೃತ ಲಿಯಾಕತ್ ಕುಟುಂಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡ ಚಂದ್ರಾಲೇಔಟ್ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+