Bengaluru: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಬೆಂಗಳೂರು ಮೇ 25: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ಮಾಡಲಾಗಿದೆ. ನಗರದ ಲಗ್ಗೆರೆ ಬಳಿಯ ಚೌಡೇಶ್ವರಿನಗರದ ಹಳ್ಳಿರುಚಿ ಹೋಟೆಲ್ ಬಳಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ(42) ಎಂಬಾತನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬೈಕ್‌ನಲ್ಲಿ ಬಂದ ಐವರು ದುಷ್ಕರ್ಮಿಗಳು ಸಿಎಂಹೆಚ್ ಬಾರ್ ಬಳಿ ರವಿಯನ್ನು ಅಟ್ಟಾಡಿಸಿಕೊಂಡು ಹೊಡೆದು ತಲೆ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಕಾಂಗ್ರೆಸ್ ಮುಖಂಡ ಹಾಗೂ ಫೈನಾನ್ಷಿಯರ್ ಕೃಷ್ಣ ಮೂರ್ತಿ ಹುಟ್ಟುಹಬ್ಬದ (ಮೇ 24) ದಿನವೇ ರವಿಯನ್ನು ಹತ್ಯೆ ಮಾಡಲಾಗಿದೆ. ಕೃಷ್ಣ ಮೂರ್ತಿ ಹುಟ್ಟುಹಬ್ಬಕ್ಕೆ ಹಲವಾರು ಕಾರ್ಯಕರ್ತರನ್ನು ಆಹ್ವಾನಿಸಲಾಗಿತ್ತು. ಇವರಲ್ಲಿ ರವಿ ಕೂಡ ಒಬ್ಬರು. ಕೃಷ್ಣಮೂರ್ತಿ ಹುಟ್ಟುಹಬ್ಬಕ್ಕೆ ಹಾಜರಾಗಲು ಹೊರಟಿದ್ದ ರವಿಯನ್ನು ಕೊಲೆ ಮಾಡಲಾಗಿದೆ.

ರವಿ ಹತ್ಯೆಗೂ ಮುನ್ನ ಹಂತಕರು ಬೀದಿಯಲ್ಲಿ ಹಾಕಿದ್ದ ರವಿ ಪೋಸ್ಟರ್‌ನ್ನು ಹರಿದು ಬೀಸಾಡಿದ್ದರು. ಬಳಿಕ ರವಿ ಮನೆ ಮುಂದೆ ಯಮನಂತೆ ಕಾದು ಕುಳಿತ ಹಂತಕರು ಹೊರ ಬರುತ್ತಿದ್ದಂತೆ ಆತನನ್ನು ಹೋಟೆಲ್ ಬಳಿ ಕರೆದುಕೊಂಡು ಹೋಗಿದ್ದಾರೆ. ಹುಟ್ಟುಹಬ್ಬಕ್ಕೆ ಸಂತೋಷದಿಂದ ಹೊರಟಿದ್ದ ರವಿ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಈ ವೇಳೆ ರವಿ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದರೂ ಹಂತಕರು ಕರುಣೆ ತೋರದೆ ಅಟ್ಟಾಡಿಸಿಕೊಂಡು ಆತನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಹಂತಕರು ರವಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯ ಮಾಡಿದ್ದಾರೆ.
ಕುರಿ, ಮೇಕೆ ಸಾಕಾಣಿಕೆ ಮಾಡಿಕೊಂಡಿದ್ದ ರವಿ ಮೇಲೆ ಈ ಹಿಂದೆಯೂ ಹಲವಾರು ಪ್ರಕರಣಗಳು ದಾಖಲಾಗಿವೆ. ಸದ್ಯ ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಂಕತರ ಪತ್ತೆಗೆ ಬಲೆ ಬೀಸಿದ್ದಾರೆ.












Click it and Unblock the Notifications