ಹೊಸ ವರ್ಷದ ಸಂಭ್ರಮಕ್ಕೆ ಮತ್ತೇರಿಸುವ ಸುದ್ದಿ!
ಬೆಂಗಳೂರು, ಡಿ. 22 : ಹೊಸ ವರ್ಷದ ಸ್ವಾಗತಕ್ಕೆ ಹಂಬಲಿಸುವವರಿಗೆ ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಒಂದು ವಾರಕ್ಕೆ ಮೊದಲೇ ಮತ್ತೇರಿಸುವ ಸುದ್ದಿ ನೀಡಿದ್ದಾರೆ. ಡಿ.31 ರಂದು ತಡರಾತ್ರಿ 1 ಗಂಟೆವರೆಗೆ ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ತೆರೆಯಲು ಪೊಲೀಸ್ ಇಲಾಖೆ ಅನುಮತಿ ನೀಡಿದೆ.
ಈ ಕುರಿತು ಪ್ರಕರಣೆ ಹೊರಡಿಸಿರುವ ಪೊಲೀಸರು ಡಿ.31ರಿಂದ ಜನವರಿ 1ರ 1 ಗಂಟೆ ವರೆಗೆ ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಈ ಆದೇಶ ಎಲ್ಲ ಹೋಟೆಲ್, ತಿಂಡಿ ತಿನಿಸು ಮಾರಾಟ ಮಳಿಗೆಗಳಿಗೂ ಅನ್ವಯವಾಗುತ್ತದೆ ಎಂದು ಪ್ರಕರಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಗೆ ಒಳಪಡುವ ಬಾರ್, ಪಬ್ ಮತ್ತು ರೆಸ್ಟೋರೆಂಟ್ ಮಾಲೀಕರು ಅಬಕಾರಿ ಇಲಾಖೆಯಿಂದ ರಾತ್ರಿ 1 ಗಂಟೆವರೆಗೆ ತೆರೆದಿರಲು ಸೂಕ್ತ ಅನುಮತಿ ಪಡೆಯಬೇಕೆಂದು ಇಲಾಖೆ ತಿಳಿಸಿದೆ. ಹೊಸ ವರ್ಷದ ಸ್ವಾಗತಕ್ಕೆ ಜನರು ಸಜ್ಜಾಗುತ್ತಿದ್ದರೆ, ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಬಾರದು ಎಂದು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ಹೊಸ ವರ್ಷದ ಸ್ವಾಗತ ನೆಪದಲ್ಲಿ ಅಕ್ಕಪಕ್ಕದವರಿಗೆ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸರು ಬಾರ್, ಪಬ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ. ಹೊಸ ವರ್ಷದ ಸ್ವಾಗತಿಸಲು ಒಂದು ವಾರಕ್ಕು ಹೆಚ್ಚು ಕಾಲ ಬಾಕಿ ಇದ್ದು, ಸಿಲಿಕಾನ್ ಸಿಟಿ ಬೆಂಗಳೂರು, ಹ್ಯಾಪಿ ನ್ಯೂ ಇಯರ್ ಹೇಳಲು ಸಜ್ಜಾಗುತ್ತಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications