ಬಸವಜಯಮೃತ್ಯುಂಜಯ ಸ್ವಾಮಿ ತಂಡದಿಂದ ವಿಶಿಷ್ಟ ನಾಗ ಪಂಚಮಿ
ಬೆಂಗಳೂರು, ಜುಲೈ 23: ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ, ಧರ್ಮಕ್ಷೇತ್ರ ಕೂಡಲ ಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು ವಿಶಿಷ್ಟವಾಗಿ ನಾಗರ ಪಂಚಮಿ ಹಬ್ಬ ಆಚರಣೆಗೆ ಕರೆ ನೀಡಿದ್ದಾರೆ.
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ , ವಿವಿಧ ಘಟಕ ಹಾಗೂ ಸಂಸ್ಥೆಗಳ ಸಹಯೋಗದೊಂದಿಗೆ ನಾಗರಪಂಚಮಿ ಹಬ್ಬದ ಪ್ರಯುಕ್ತ, ರಾಜ್ಯಾದ್ಯಂತ 20ನೇ ವರ್ಷದ ಕಲ್ಲುನಾಗರಕ್ಕೆ ಹಾಕುವ ಹಾಲನ್ನು ಮಕ್ಕಳಿಗೆ ಕುಡಿಯಲು ನೀಡುತ್ತಾ ಬಂದಿದೆ.
"ಹಾಲು ಕುಡಿಯುವ ಹಬ್ಬದ ಸಪ್ತಾಹ 2017" ಕಾರ್ಯಕ್ರಮವು 24/ 7/ 2017 ರ ಸೋಮವಾರ ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮವು ಬೊಸ್ಕೋ ಮನೆ ಚಿಲ್ಡ್ರನ್ಸ್ ಹೋಮ್, 242, 4ನೇ ಮುಖ್ಯರಸ್ತೆ, 2ನೇ ಅಡ್ಡರಸ್ತೆ, ಚಾಮರಾಜಪೇಟೆ, ಬೆಂಗಳೂರು ಇಲ್ಲಿ ನೆರವೇರಲಿದೆ.

ಜಗದ್ಗುರು ಶ್ರೀ ಬಸವಜಯಮೃತ್ಯುಂಜಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಎಚ್ ಆಂಜನೇಯ, ಸಮಾಜ ಕಲ್ಯಾಣ ಸಚಿವರು, ವಿನಯ್ ಕುಲಕರ್ಣಿ, ಭೂ ವಿಜ್ಞಾನ ಸಚಿವರು, ವಿಜಯಾನಂದ ಕಾಶಪ್ಪನವರ, ಶಾಸಕರು ಹುನಗುಂದ, ಟಿ. ಎ ನಾರಾಯಣಗೌಡರು, ರಾಜ್ಯಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ, ಪ್ರಶಾಂತ್ ಕಲ್ಲೂರ್, ರಾಜ್ಯಾಧ್ಯಕ್ಷರು, ವೀರಶೈವ ಲಿಂಗಾಯತ ಯುವ ವೇದಿಕೆ, ಶಿವುಕುಮಾರ್, ಅಧ್ಯಕ್ಷರು, ಉತ್ತರ ಕರ್ನಾಟಕ ನವನಿರ್ಮಾಣ ವೇದಿಕೆ, ಡಾ|| ಸಂಗಮೇಶ್, ಬೆಂಗಳೂರು ಮುಖ್ಯ ಅತಿಥಿಗಳಾಗಿದ್ದಾರೆ.
ನಾಗರಪಂಚಮಿ ಅಥವಾ ಪಂಚಮಿ ಹಬ್ಬ ವಿಶೇಷವಾಗಿ ಹಾವಿನ ಹುತ್ತಕ್ಕೆ ಹಾಲೆರೆಯುವುದು ಸಂಪ್ರದಾಯ. ಆ ಹಾಲನ್ನು ನಾಗರ ಹಾವು ಸೇವಿಸುತ್ತದೆ ಎನ್ನುವುದು ಬಲವಾದ ನಂಬಿಕೆ. ಈ ಹಬ್ಬವನ್ನು ಶ್ರಾವಣಮಾಸ ಆರಂಭವಾದ 5ನೇ ದಿನಕ್ಕೆ ಆಚರಿಸುತ್ತಾರೆ.
ನಾಗರ ಪಂಚಮಿ ದಿನದಂದು ಮಹಿಳೆಯರು ನಾಗರ ಪ್ರತಿಮೆಗೆ ವಿವಿಧ ರೀತಿಯಲ್ಲಿ ಪೂಜಾ ಕಾರ್ಯಗಳನ್ನು ಮಾಡುತ್ತಾರೆ. ಜತೆಗೆ ನೂತನವಾಗಿ ಮದುವೆಯಾಗಿರುವ ಹೆಣ್ಣು ಮಕ್ಕಳು ತವರಿಗೆ ಬಂದು ಪಂಚಮಿ ಹಬ್ಬವನ್ನು ಆಚರಿಸುವುದು ರೂಢಿ. ಈ ಹಬ್ಬವನ್ನು ಸಹೋದರ-ಸಹೋದರಿಯರ ಹಬ್ಬ ಎಂದು ಕರೆಯಲಾಗುತ್ತದೆ. ತಂಗಿಯರು ತಮ್ಮ ಅಣ್ಣನಿಗೆ ಪ್ರೀತಿಯಿಂದ ಹಾರೈಸುವುದು. ಅಣ್ಣನಾದವನು ತಂಗಿಗೆ ಪ್ರೀತಿಯ ಪ್ರತೀಕವಾಗಿ ಉಡುಗೊರೆ ನೀಡುವುದು ಹಲವು ಕಡೆಗಳಲ್ಲಿ ಕಂಡು ಬರುವ ಆಚರಣೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications