• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಸವನಗುಡಿ ಶಾಸಕ ರವಿ ಸುಬ್ರಮಣ್ಯಗೆ ಕೋವಿಡ್ 19 ಸೋಂಕು

|

ಬೆಂಗಳೂರು, ಸೆಪ್ಟೆಂಬರ್ 29: ಬಸವನಗುಡಿ ಬಿಜೆಪಿ ಶಾಸಕ ರವಿ ಸುಬ್ರಮಣ್ಯ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಭಾನುವಾರ ಪರೀಕ್ಷೆಗೆ ಒಳಗಾಗಿದ್ದ ಶಾಸಕ ರವಿ ಸುಬ್ರಮಣ್ಯ ಅವರ ವರದಿ ಮಂಗಳವಾರ ಬಂದಿದ್ದು, ಆ ಮಾಹಿತಿಯನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅವರು ಶನಿವಾರ ನಡೆದ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಿದ್ದರು. ಇದರಿಂದಾಗಿ ಅಧಿವೇಶನದಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದವರು ಕೂಡ ಕೋವಿಡ್ ತಪಾಸಣೆಗೆ ಒಳಗಾಗಿ ಪ್ರತ್ಯೇಕವಾಗಿರಬೇಕಿದೆ. ಇತ್ತೀಚೆಗೆ ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಂಡು ಆರೋಗ್ಯದ ಬಗ್ಗೆ ನಿಗಾ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.

ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯರಿಗೆ ಕೊವಿಡ್-19 ಸೋಂಕುಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯರಿಗೆ ಕೊವಿಡ್-19 ಸೋಂಕು

'ನಾನು ಶನಿವಾರ ಅಧಿವೇಶನ ಮುಗಿಸಿ ಬಂದಮೇಲೆ ಭಾನುವಾರದಂದು ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ ಅದಕ್ಕಾಗಿ ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ' ಎಂದು ಅವರು ತಿಳಿಸಿದ್ದಾರೆ.

   Babri Masjid : ಇವತ್ತು ನಿರ್ಧಾರ ಆಗತ್ತೆ ಬಿಜೆಪಿ ನಾಯಕರ ಭವಿಷ್ಯ! | Oneindia Kannada

   'ಎಲ್ಲರ ಆರೋಗ್ಯದ ಹಿತದೃಷ್ಟಿಯಿಂದ ಇನ್ನು 10-12 ದಿನಗಳ ಕಾಲ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲವಾದರಿಂದ ಎಲ್ಲರು ಸಹಕರಿಸಬೇಕಾಗಿ ಹಾಗೂ ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತೇನೆ' ಎಂದು ಮನವಿ ಮಾಡಿದ್ದಾರೆ.

   English summary
   BJP MLA from Basavanagudi LA Ravi Subramanya has tested positive for covid-19. He has attended Assembly session on Saturday and underwent covid test on Sunday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X