ನ್ಯಾಷನಲ್ ಕಾಲೇಜು ಬಳಿಯ ಮೇಲ್ಸೇತುವೆಯ ದುರಸ್ತಿ ಹೇಗೆ ನಡೆದಿದೆ?
ಬಸವನಗುಡಿಯ ನ್ಯಾಷನಲ್ ಕಾಲೇಜು ಬಳಿಯ ಮೇಲ್ಸೇತುವೆಯ ದುರಸ್ತಿಗಾಗಿ ಜನವರಿ 20ರಿಂದ ಕಾಮಗಾರಿ ಕೈಗೊಳ್ಳಲಾಗಿದ್ದು, ಮೇಲ್ಸೇತುವೆ ದುರಸ್ತಿ ಕಾರ್ಯ ತಿಂಗಳವರೆಗೆ ನಡೆಯಲಿದ್ದು, ವಾಹನ ಸಂಚಾರ ಬಂದ್ ಆಗಲಿದೆ.
ಬೆಂಗಳೂರು, ಜನವರಿ 27: ಬಸವನಗುಡಿಯ ನ್ಯಾಷನಲ್ ಕಾಲೇಜು ಬಳಿಯ ಮೇಲ್ಸೇತುವೆಯ ದುರಸ್ತಿ ಕಾರ್ಯ ಜನವರಿ 20ರಿಂದ ಕಾಮಗಾರಿ ಆರಂಭಗೊಂಡಿದ್ದು, ಇನ್ನೊಂದು ತಿಂಗಳವರೆಗೆ ನಡೆಯಲಿದೆ. ವಾಹನ ಸಂಚಾರ ಬಂದ್ ಆಗಿರುವುದರಿಂದ ಕಿರಿಕಿರಿಯಾದರೂ ನಾಗರಿಕರು ರಸ್ತೆ ದುರಸ್ತಿ ಬಗ್ಗೆ ಪ್ರತಿದಿನ ಕುತೂಹಲದಿಂದ ಕಣ್ಣು ಹಾಯಿಸಿ ಮುಂದೆ ಸಾಗುತ್ತಿದ್ದಾರೆ.
ಕಾಮಗಾರಿ ಮುಕ್ತಾಯಗೊಳ್ಳುವರೆಗೂ ಮೇಲ್ಸೇತುವೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಜತೆಗೆ ವಾಹನಗಳ ಸಂಚಾರಕ್ಕಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ.
'ಸುಮಾರು 750 ಮೀಟರ್ ಉದ್ದವಿರುವ ಈ ಮೇಲ್ಸೇತುವೆ ಮೂಲಕ ಜಯನಗರ, ಲಾಲ್‌ಬಾಗ್, ಮಿನರ್ವ ವೃತ್ತ ಸೇರಿದಂತೆ ಹಲವು ಪ್ರದೇಶಗಳ ಪ್ರಯಾಣಿಕರು ಸಂಚರಿಸುತ್ತಾರೆ. ಕಾಮಗಾರಿ ಆರಂಭವಾಗಿರುವುದರಿಂದ ಬದಲಿ ಮಾರ್ಗದ ಮೂಲಕ ಸಂಚರಿಸಬೇಕು' ಎಂದು ಬಸವನಗುಡಿ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಹೇಳಿದ್ದಾರೆ.

ಎಲ್ಲಿ ನಿಷೇಧ: 'ರಾಮಕೃಷ್ಣ ಆಶ್ರಮ ವೃತ್ತದಿಂದ ವಾಣಿವಿಲಾಸ್ ಮತ್ತು ಶಂಕರಮಠ ಜಂಕ್ಷನ್‌ನಿಂದ ಮೇಲ್ಸೇತುವೆ ಮೂಲಕ ಲಾಲ್ ಬಾಗ್ ಪಶ್ಚಿಮ ಗೇಟ್ ಕಡೆ ಹೋಗುತ್ತಿದ್ದ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿಷೇಧಿಸಲಾಗಿದೆ.' ಪಶ್ಚಿಮ ಗೇಟ್ ಕಡೆಯಿಂದ ನಾರ್ತ್ ರಸ್ತೆ ಕಡೆ ದ್ವಿಚಕ್ರ ವಾಹನಗಳು ಆಗಾಗ ನುಸುಳಿ ಬರುತ್ತಿವೆ.
Tiki Tar sheets are being used for resurfacing Flyovers across Bengaluru as they ensure more durability of road surface. @thekjgeorge pic.twitter.com/UR0FPVMnW3
— GoK Updates (@GOKUpdates) January 25, 2017
ಸರ್ವೀಸ್ ರಸ್ತೆ ಬಳಸಿ: ಮೇಲ್ಸೇತುವೆಯ ಸರ್ವೀಸ್ ರಸ್ತೆಯಲ್ಲಿ ಸಂಚರಿಸಿ ನ್ಯಾಷನಲ್ ಕಾಲೇಜು ವೃತ್ತದ ಮಾರ್ಗವಾಗಿ ಮುಂದೆ ಹೋಗಬಹುದು.'ಶೇಷಮಹಲ್ ವೃತ್ತದಿಂದ ರಾಮಕೃಷ್ಣ ಆಶ್ರಮದ ಕಡೆಗೆ ಹೋಗುವ ವಾಹನಗಳು ಮೇಲ್ಸೇತುವೆ ಮೇಲೆ ಹೋಗುವಂತಿಲ್ಲ. ಸರ್ವೀಸ್ ರಸ್ತೆಯಲ್ಲಿ ಸಂಚರಿಸಿ, ನ್ಯಾಷನಲ್ ಕಾಲೇಜು ವೃತ್ತದ ಮೂಲಕ ರಾಮಕೃಷ್ಣ ಆಶ್ರಮ ವೃತ್ತದ ಕಡೆಗೆ ಹೋಗಬಹುದು.
ಮೆಲ್ಸೇತುವೆ ದುರಸ್ತಿ: 'ನಗರದ ಒಂದೊಂದೇ ಮೇಲ್ಸೇತುವೆಯನ್ನು ದುರಸ್ತಿ ಮಾಡಲಾಗುತ್ತಿದೆ. ಈಗಾಗಲೇ ರಿಚ್ಮಂಡ್ ಸೇರಿ ಹಲವು ಮೇಲ್ಸೇತುವೆಗಳು ದುರಸ್ತಿ ಮಾಡಲಾಗಿದೆ. ಈಗ ನ್ಯಾಷನಲ್ ಕಾಲೇಜು ಬಳಿಯ ಮೇಲ್ಸೇತುವೆ ದುರಸ್ತಿಗೆ ಚಾಲನೆ ನೀಡಲಾಗಿದೆ ನಂತರ ಮೇಲ್ಸೇತುವೆಗಳ ದುರಸ್ತಿ ಕಾರ್ಯ ಆರಂಭವಾಗಲಿದೆ. ಇದಕ್ಕಾಗಿ ಹೊಸ ತಂತ್ರಜ್ಞಾನ ಬಳಸಲಾಗುತ್ತಿದೆ' ಎಂದು ಬಿಬಿಎಂಪಿ ಪ್ರಕಟಿಸಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications