ಹಾಲು ಉತ್ಪಾದಕರಿಗೆ ₹757 ಕೋಟಿ ಬಿಡುಗಡೆ ಆಗಿಲ್ಲ: ಮಾಜಿ ಸಿಎಂ ಕೊಟ್ರು ಸುಳ್ಳುಗಳ ಲೆಕ್ಕ
ಬೆಂಗಳೂರು, ಫೆಬ್ರವರಿ 20: ಕರ್ನಾಟಕ ರಾಜ್ಯದ ಸರ್ಕಾರವು ರಾಜ್ಯದ 8.65 ಲಕ್ಷ ಹಾಲು ಉತ್ಪಾದಕರಿಗೆ ಆರು ತಿಂಗಳಿಂದ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ. ಆದರೂ ಬಿಡುಗಡೆ ಮಾಡಲಾಗಿದೆ ಎಂದು ಸುಳ್ಳು ಹೇಳಲಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ರಾಜಪಾಲರ ಭಾಷಣ ಮೇಲಿನ ಚರ್ಚೆ ವೇಳೆ ನಾವು ರಾಜ್ಯಪಾಲರಿಂದ ಸುಳ್ಳು ಹೇಳಿಸಿಲ್ಲ. ಹಾಗೆನಾದರೂ ಆಗಿಲ್ಲಿ ತೋರಿಸಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದರು. ಇದಕ್ಕೆ ಪ್ರತಿಯಾಗಿ ಉತ್ತರಿಸಿದ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 8.65 ಲಕ್ಷ ಹಾಲು ಉತ್ಪಾದಕರಿಗೆ 757 ಕೋಟಿ ರೂ. ಪ್ರೋತ್ಸಾಹ ಧನ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದೀರಿ ಎಂದು ತಿರುಗೇಟು ಕೊಟ್ಟರು.

ಅಧಿಸೂಚನೆ ಹೊರಡಿಸುವ ಯೋಜನೆ ಆರಂಭವಾಗಿಲ್ಲ
ಪ್ರೋತ್ಸಾಹ ಧನ ಬಂದಿದ್ದರೆ, ಹಾಲು ಉತ್ಪಾದಕರು ಹಣ ಬಂದಿಲ್ಲ ಎಂದು ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಇನ್ನೂ ಐದು ಗ್ಯಾರೆಂಟಿ ಯೋಜನೆಗಳ ಜೊತೆಗೆ ಬಜೆಟ್ ನಲ್ಲಿ ಘೋಷಿಸಿರುವ ಶೇಕಡಾ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ರಾಜ್ಯಪಾಲರಿಂದ ಹೇಳಿಸಿದ್ದೀರಿ. ಸರ್ಕಾರ ಅಧಿಸೂಚನೆ ಹೊರಡಿಸಿರುವ ಯೋಜನೆಗಳು ಆರಂಭವೇ ಆಗಿಲ್ಲ ಅದು ಸಳ್ಳಲ್ಲವಾ ಎಂದು ತಿಳಿಸಿದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದೂ ಹೊಸ ಬಸ್ ಖರೀದಿ ಮಾಡಿಲ್ಲ ಎಂದು ಸುಳ್ಳು ಹೇಳಲಾಗಿದೆ. ಬಿಜೆಪಿ ಅವಧಿಯಲ್ಲಿ ನಾಲ್ಕು ನಿಗಮಗಳಿಗೆ ಬಸ್ ಖರೀದಿ ಮಾಡಲಾಗಿದೆ ಎಂದು ಬೊಮ್ಮಾಯಿ ಅವರು ಲೆಕ್ಕ ಕೊಟ್ಟರು.

ಬಸ್ ಖರೀದಿಗಳ ಲೆಕ್ಕ ನೀಡಿದ ಬೊಮ್ಮಾಯಿ
2022-23ನೇ ಸಾಲಿನಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಒಟ್ಟು 3,526, ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ. ನಮ್ಮ ಅವಧಿಯಲ್ಲಿ ಬಿಎಂಟಿಸಿಗೆ 1,311 ಮತ್ತು KSRTCಗೆ 50 ಪವರ್ ಪ್ಲಸ್ ಬಸ್ಸುಗಳು ಹಾಗೂ 20 ವೊಲ್ವೊ ಬಸ್ ಗಳನ್ನು ಖರೀದಿಸಲಾಗಿದೆ ಎಂದು ಸರ್ಕಾರಕ್ಕೆ ಬೊಮ್ಮಾಯಿಯವರು ತಿರುಗೇಟು ಕೊಟ್ಟರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 3000 ಕೋಟಿ ಮೀಸಲಿಟ್ಟಿದ್ದೇವೆ. ಸರ್ಕಾರ ಈಗಾಗಲೇ ಅದಕ್ಕಾಗಿ 5468 ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಮಂಜೂರು ಮಾಡಿ, ನವೆಂಬರ್ ಹೊತ್ತಿಗೆ 1287 ಕಾಮಗಾರಿ ಪೂರ್ಣಗೊಂಡಿವೆ ಎಂದು ಹೇಳಿದೆ. ನಮ್ಮ ಕಾಲದಲ್ಲಿ ಅನುಮೋದನೆಗೊಂಡ ಯೋಜನೆಗಳನ್ನು ನಿಮ್ಮ ಸಾಧನೆ ಅಂತ ಹೇಳಿಕೊಂಡಿದ್ದೀರಿ ಎಂದು ಅವರು ದೂರಿದರು.












Click it and Unblock the Notifications