• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಹಸಸಿಂಹ ವಿಷ್ಣುವರ್ಧನ್ ಮನೆ ನವೀಕರಣ, ಗೃಹಪ್ರವೇಶದಲ್ಲಿ ಸಿಎಂ ಭಾಗಿ

|
Google Oneindia Kannada News

ಬೆಂಗಳೂರು, ನವೆಂಬರ್ 27; ಕನ್ನಡ ನಟ, ಅಭಿಮಾನಿಗಳಪಾಲಿನ ಸಾಹಸಸಿಂಹ ಡಾ. ವಿಷ್ಣುವರ್ಧನ್ ಮನೆ ನವೀಕರಣ ಮಾಡಲಾಗಿದೆ. ಮನೆಯ ಗೃಹ ಪ್ರವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು.

ಬೆಂಗಳೂರಿನ ಜಯನಗರದಲ್ಲಿರುವ ವಿಷ್ಣುವರ್ಧನ್ ನೂತನ ನಿವಾಸಕ್ಕೆ 'ವಲ್ಮೀಕ' ಎಂದು ನಾಮಕರಣ ಮಾಡಲಾಗಿದೆ. ಮನೆಯ ಗೇಟ್‌ಗೆ ಸಿಂಹದ ಮುಖ ಹೊಂದಿರುವ ಲಾಂಚನ ಹಾಕಲಾಗಿದೆ.

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ: ಸಚಿವ ಎಸ್.ಟಿ.ಎಸ್ ಸಂತಸವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ: ಸಚಿವ ಎಸ್.ಟಿ.ಎಸ್ ಸಂತಸ

ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಮನೆಗೆ ಭೇಟಿ ನೀಡಿದರು. ಮನೆಯನ್ನು ವೀಕ್ಷಣೆ ಮಾಡಿದರು. ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಜೊತೆ ಮಾತುಕತೆ ನಡೆಸಿ, ಶುಭ ಹಾರೈಸಿದರು.

ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ನಟಿ ಭಾರತಿ ವಿಷ್ಣುವರ್ಧನ್ ಚಾಲನೆ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ನಟಿ ಭಾರತಿ ವಿಷ್ಣುವರ್ಧನ್ ಚಾಲನೆ

ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ವಿಷ್ಣುವರ್ಧನ್ ಒಬ್ಬ ಮೇರು ನಟರಾಗಿದ್ದರು. ಭಾರತಿ ವಿಷ್ಣುವರ್ಧನ್ ತುಂಬಾ ಕಷ್ಟಪಟ್ಟು ಮನೆ ನಿರ್ಮಾಣ ಮಾಡಿದ್ದಾರೆ" ಎಂದರು.

Basavaraj Bommai Attend Vishnuvardhan House Warming Ceremony

"ಮನೆಯನ್ನು ತುಂಬಾ ಚೆನ್ನಾಗಿ ನಿರ್ಮಾಣ ಮಾಡಲಾಗಿದೆ. ಮೈಸೂರಿನಲ್ಲಿ ದಿ. ನಟ ವಿಷ್ಣುವರ್ಧನ್ ಅವರ ಸ್ಮಾರಕ ಮತ್ತು ಮ್ಯೂಸಿಯಂ ನಿರ್ಮಾಣ ಮಾಡುತ್ತೇವೆ" ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಜಯನಗರ ಪಟಾಲಮ್ಮ ಜಾತ್ರೆ ವೈಭವ, ನೋಡಲು ಎರಡು ಕಣ್ಣು ಸಾಲದವ್ವಜಯನಗರ ಪಟಾಲಮ್ಮ ಜಾತ್ರೆ ವೈಭವ, ನೋಡಲು ಎರಡು ಕಣ್ಣು ಸಾಲದವ್ವ

"ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣು ವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರಿಗೆ ಶುಭ ಕೋರಲು. ಬಂದಿದ್ದೇನೆ" ಎಂದರು .

"ಮೈಸೂರಿನಲ್ಲಿ ನಿರ್ಮಾಣ ವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣ ಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಾಯುತವಾಗಿ ಆಯೋಜಿಸಲಾಗುವುದು" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಚುಕ್ಕಿ ರೋಗ ತಡೆಗೆ ಕ್ರಮ; "ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ವಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆ ಯಾಗುತ್ತಿದೆ" ಎಂದರು.

ಡಾ. ವಿಷ್ಣುವರ್ಧನ್ ಅವರು ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಶಂಕರಪುರಂನ ಬಾಡಿಗೆ ಮನೆಯಲ್ಲಿದ್ದರು. ಸಿನಿಮಾ ರಂಗದಲ್ಲಿ ಒಂದು ಹಂತಕ್ಕೆ ಬರುವ ತನಕ ಬಾಡಿಗೆ ಮನೆಯಲ್ಲಿಯೇ ಇದ್ದರು.

ಶಂಕರಪುರಂನ ಬಾಡಿಗೆ ಮನೆಯ ಬಳಿಕ ಜಯನಗರದ 4ನೇ ಬ್ಲಾಕ್‌ನಲ್ಲಿ ಸೈಟ್‌ ಖರೀದಿ ಮಾಡಿ ತಮಗೆ ಬೇಕಾದ ರೀತಿಯಲ್ಲಿ ಮನೆ ನಿರ್ಮಾಣ ಮಾಡಿದ್ದರು. ಆದರೆ ಬಳಿಕ ನವೀಕರಿಸಿಕೊಂಡಿರಲಿಲ್ಲ.

2019ರಲ್ಲಿ ಮನೆಯ ಹೊರಾಂಗಣವನ್ನು ಕೆಡವಿ ಈಗ ಹೊಸ ವಿನ್ಯಾಸದ ಮುಖಾಂತರ ಮನೆಯನ್ನು ನಿರ್ಮಾಣ ಮಾಡಲಾಗಿದೆ. ವಿಷ್ಣುವರ್ಧನ್ ಮನೆ ನವೀಕರಣದ ಕನಸನ್ನು ಭಾರತಿ ವಿಷ್ಣುವರ್ಧನ್ ಈಗ ನನಸು ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿ
Know all about
ಬಸವರಾಜ ಬೊಮ್ಮಾಯಿ
English summary
Karnataka chief minister Basavaraj Bommai attend the house warming ceremony of late Kannada actor Vishnuvardhan at Jayanagar, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X