• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ, ದೆಹಲಿ ಪ್ರವಾಸ ರದ್ದು

|
Google Oneindia Kannada News

ಬೆಂಗಳೂರು, ಆಗಸ್ಟ್‌ 6: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶನಿವಾರ ಕೋವಿಡ್‌ 19 ದೃಢಪಟ್ಟಿದ್ದು, ತಮ್ಮ ದೆಹಲಿ ಪ್ರವಾಸವನ್ನು ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ.

Recommended Video

   ಮುಖ್ಯಮಂತ್ರಿ ಬೊಮ್ಮಾಯಿಗೆ ಕೊರೋನಾ ಮೋದಿ ಮೀಟಿಂಗ್ ಕ್ಯಾನ್ಸಲ್ | *Politics | OneIndia Kannada

   ಬೊಮ್ಮಾಯಿ ಶನಿವಾರ ಸಂಜೆ ದೆಹಲಿಯಲ್ಲಿ ನಡೆಯಲಿದ್ದ ಅಜಾದಿ ಕಾ ಅಮೃತ್‌ ಮಹೋತ್ಸವದ ರಾಷ್ಟ್ರೀಯ ಸಮಿತಿಯ 3ನೇ ಸಭೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಕೋವಿಡ್‌ 19 ದೃಢವಾಗಿರುವುದರಿಂದ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ.

   ನನಗೆ ಇಂದು ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ಧಾಗಿದೆ ಎಂದು ಬಸವರವಾಜ ಬೊಮ್ಮಾಯಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

   ಬಸವರಾಜ ಬೊಮ್ಮಾಯಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯುವ ನೀತಿ ಆಯೋಗದ 7ನೇ ಸಭೆಯಲ್ಲೂ ಭಾಗವಹಿಸಬೇಕಿತ್ತು.

   ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ:
   ಮುಖ್ಯಮಂತ್ರಿ‌ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ದೂರವಾಣಿ ಮೂಲಕ ಸಿಎಂ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು.

   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದ್ದರಿಂದ ಇಂದು ತಮ್ಮ ಆರ್.ಟಿ ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಬೆಳಿಗ್ಗೆ ದೂರವಾಣಿ ಮೂಲಕ ಬಿ.ಎಸ್ ಯಡಿಯೂರಪ್ಪ ಹಾಗೂ ಸಚಿವರಾದ ಡಾ. ಅಶ್ವತ್ ನಾರಾಯಣ್ , ಹಾಲಪ್ಪ ಆಚಾರ್, ಪ್ರಭು ಚೌಹಾಣ್, ಬಿ.ಸಿ ನಾಗೇಶ್ ದೂರವಾಣಿ ಮೂಲಕ ಸಿಎಂ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು.

   English summary
   Karnataka Chief Minister Basavaraj Bommai cancelled the Delhi Trip after he tested positive for Covid-19.He confirmed Through Twitter on Saturday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X