ಬೆಂಗಳೂರಲ್ಲಿ ಇದೆಂಥಾ ಹೀನ ಕೃತ್ಯ: ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ: ಬಿಜೆಪಿ ಕರಾಳ ಸಂಕ್ರಾಂತಿ ಎಚ್ಚರಿಕೆ!
ಬೆಂಗಳೂರು, ಜನವರಿ 12: ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಮೂಕ ಪ್ರಾಣಿಯ ಮೇಲೆ ಹಿಂಸಾತ್ಮಕ ಕೃತ್ಯ ನಡೆಸಿದ ಘಟನೆ ನಡೆದಿದೆ. ಕಿಡಿಗೇಡಿಗಳು ಶನಿವಾರ ರಾತ್ರಿ ಮೂರು ಹಸುಗಳ ಕೆಚ್ಚಲು ಕತ್ತರಿಸಿ ಹಿಂಸೆ ಮೆರೆದಿದ್ದಾರೆ. ಈ ಘಟನೆ ಬೆಂಗಳೂರಿನ ಚಾಮರಾಪೇಟೆಯ ವಿನಾಯಕ ನಗರದಲ್ಲಿ ನಡೆದಿದೆ. ಈ ಘಟನೆಗೆ ವ್ಯಾಪಕ ಖಂಡನೇ ವ್ಯಕ್ತವಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.
ಮೂರು ಆಕಳ ಕೆಚ್ಚಲು ಕತ್ತಿಸಲಾಗಿದೆ. ವಿಷಯ ಗೊತ್ತಾಗುತ್ತಿದ್ದಂತೆ ಪಶು ಆಸ್ಪತ್ರೆಯಲ್ಲಿ ವೈದ್ಯರು ಹಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಘಟನಾ ಸ್ಥಳದಲ್ಲಿ 20 ಕ್ಕೂ ಹೆಚ್ಚು ಪೊಲೀಸರು ಭೇಟಿ ನೀಡಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಈ ಘಟನೆಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಖಂಡಿಸಿದ್ದಾರೆ. ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಖುದ್ದು ಪರಿಶೀಲಿಸಿದ್ದಾರೆ. ಈ ಭಾಗದಲ್ಲಿ ಡ್ರಗ್ಸ್ ಗಾಂಜಾ ಹಾವಳಿ ಜಾಸ್ತಿ ಇದೆ. ಇದರ ಸೇವನೆಯ ಕಿಡಿಗೇಡಿಗಳೇ ಇಂತಹ ಕೃತ್ಯ ಎಸಗಿದ್ದಾರೆ ಎಂದು ಹಿಂದೂಪರ ಸಂಘಟನೆಗಳು ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿ ಆಚರಣೆ: ಆರ್.ಅಶೋಕ್
ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸದಿದ್ದರೆ, ರಾಜ್ಯದಾದ್ಯಂತ ಕರಾಳ ಸಂಕ್ರಾಂತಿ ಆಚರಿಸಲಾಗುವುದು ಎಂದು ವಿನಾಯಕ ನಗರದ ಕೃತ್ಯ ನಡೆದ ಸ್ಥಳ ಖುದ್ದು ಭೇಟಿ ನೀಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು.
ಚಾಮರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಗೋವನ್ನು ಪವಿತ್ರ ಎಂದು ಪರಿಗಣಿಸಿದೆ. ಸಂಕ್ರಾಂತಿ ಹಬ್ಬದಲ್ಲೂ ಗೋವನ್ನು ಪೂಜಿಸಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಬೆಲೆ ಏರಿಕೆಯ ಕೊಡುಗೆ ನೀಡಿದೆ. ಅದೇ ರೀತಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದುಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಾನು ಈವರೆಗೆ ನೋಡಿಲ್ಲ ಎಂದರು.

ನೂರಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿ ಪಶು ಆಸ್ಪತ್ರೆ ಇದೆ. ಈ ಭೂಮಿಯನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಗ ಸರ್ಕಾರದ ವಿರುದ್ಧ ಪ್ರತಿಭಟಿಸುವುದರ ಜೊತೆಗೆ, ಕೋರ್ಟ್ ಮೊರೆ ಹೋಗಲಾಯಿತು. ಪ್ರತಿಭಟನೆಯ ಸಮಯದಲ್ಲಿ ಇವೇ ಹಸುಗಳನ್ನು ತೋರಿಸಲಾಗಿತ್ತು. ಅದಕ್ಕಾಗಿಯೇ ಮಚ್ಚು, ಡ್ರ್ಯಾಗರ್ ಬಳಸಿ ಹಸುಗಳ ಕೆಚ್ಚಲು ಕೊಯ್ದು, ಕಾಲು ಕತ್ತರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರು ಮತಕ್ಕಾಗಿ ದೇವಸ್ಥಾನಕ್ಕೆ ಹೋಗುತ್ತಾರೆ. ಆದರೆ ಯಾರಿಗೂ ಹಿಂದೂ ಧರ್ಮದ ಬಗ್ಗೆ ಶ್ರದ್ಧೆ ಇಲ್ಲ. ಹಿಂದೂಗಳಲ್ಲಿ ಭೀತಿ ಹುಟ್ಟಿಸಲು ಜಿಹಾದಿಗಳು ಹೀಗೆ ಮಾಡಿದ್ದರೂ ಕಾಂಗ್ರೆಸ್ ನಾಯಕರು ಇದನ್ನು ಖಂಡಿಸುವುದಿಲ್ಲ. ಈಗ ಯಾವ ಮುಖ ಇಟ್ಟುಕೊಂಡು ಸಂಕ್ರಾಂತಿ ಆಚರಣೆ ಮಾಡುತ್ತಾರೆ? ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿ ಆಚರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸಿಸಿಟಿವಿ ಕ್ಯಾಮೆರಾ ಕಿತ್ತು ಬೆದರಿಕೆ
ಈ ಭಾಗದಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದರೆ ಅದನ್ನು ಕಿತ್ತುಕೊಂಡು ಹೋಗುತ್ತಾರೆ. ಈಗ ಆ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಬೆದರಿಕೆ ಹಾಕುವ ಕೆಲಸ ಮಾಡಿದ್ದಾರೆ. ಎಸಿಪಿ ಜೊತೆ ಮಾತಾಡಿದ್ದು, ತಕ್ಷಣ ಕ್ರಮ ವಹಿಸುವಂತೆ ಸೂಚಿಸಿದ್ದೇನೆ. ಇಲ್ಲವಾದರೆ ತೀವ್ರವಾದ ಪ್ರತಿಭಟನೆ ಮಾಡುತ್ತೇವೆ. ಕಾಂಗ್ರೆಸ್ ಸಚಿವರು, ಮುಖ್ಯಮಂತ್ರಿ ಈ ಕಡೆ ತಿರುಗಿಯೂ ನೋಡಲ್ಲ ಎಂದರು.
ಒಂದು ಹಸು 20 ಲೀಟರ್ ಹಾಲು ನೀಡುತ್ತಿತ್ತು. ಈಗ ಯಾವುದೇ ಹಸುಗಳು ಬದುಕುವ ಸ್ಥಿತಿಯಲ್ಲೇ ಇಲ್ಲ. ಪಶು ಸಂಗೋಪನೆ ಮಾಡುವವರಿಗೆ ನಾವು ಕೂಡ ಸಹಾಯ ಮಾಡುತ್ತೇವೆ. ಸರ್ಕಾರ ಕೂಡ ನೆರವು ನೀಡಬೇಕೆಂದು ಆಗ್ರಹಿಸಿದರು.
ಅಮಾನವೀಯ ಕೃತ್ಯ: ಕಠಿಣ ಕ್ರಮಕ್ಕೆ ಬೊಮ್ಮಾಯಿ ಆಗ್ರಹ
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೋಯ್ದ ದುರುಳರ ಕೃತ್ಯ ಅತ್ಯಂತ ಅಮಾನೀಯವಾಗಿದೆ. ಈ ಹೀನ ಕೃತ್ಯವನ್ನು ತೀರ್ವವಾಗಿ ಖಂಡಿಸುತ್ತೇನೆ. ಗೋಮಾತೆಯನ್ನು ತಾಯಿಯಂತೆ ಪೂಜಿಸುವ ನಮಗೆಲ್ಲ ಈ ಕೃತ್ಯ ಅತ್ಯಂತ ಘಾಸಿಯುಂಟು ಮಾಡಿದೆ. ಸುಗ್ಗಿಯ ಹಬ್ಬ ಮಕರ ಸಂಕ್ರಾತಿಯ ಸಂದರ್ಭದಲ್ಲಿ ರಾಜ್ಯದ ರಾಜ್ಯಧಾನಿಯಲ್ಲಿಯೇ ಇಂತಹ ಅಮಾನವೀಯ ಕೆಲಸ ಮಾಡಿರುವ ಪುಂಡರಿಗೆ ಈ ಸರ್ಕಾರದಲ್ಲಿ ಯಾವುದೇ ಭಯ ಇಲ್ಲದಂತೆ ಕಾಣಿಸುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಗೋವುಗಳಿಗೆ ಸರಿಯಾದ ರಕ್ಷಣೆ ನೀಡದಿರುವುದು, ಗೋಶಾಲೆಗಳಿಗೆ ಸರಿಯಾದ ಅನುದಾನ ನೀಡದೇ ನಿರ್ಲಕ್ಣ್ಯ ಮಾಡಿರುವುದರ ಪರಿಣಾಮ, ಇಂತಹ ಹೃದಯ ಹೀನ ಕೃತ್ಯಗಳು ನಡೆಯಲು ಪ್ರೇರಣೆ ನೀಡಿದಂತಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಮೂಕ ಪ್ರಾಣಿಗಳ ಮೇಲೆ ಮಾಡಿರುವ ಇಂತಹ ಕೃತ್ಯವನ್ನು ಅಂತಃಕರಣ ಇರುವವರು ಯಾರೂ ಕ್ಷಮಿಸಲು ಸಾಧ್ಯವಿಲ್ಲ. ಈ ಸರ್ಕಾರಕ್ಕೆ ಗೋಮಾತೆಯ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ಇಂತಹ ಹೇಯ ಕೃತ್ಯ ಮಾಡಿರುವ ಪುಂಡರನ್ನು ಪತ್ತೆ ಹಚ್ಚಿ ತಕ್ಷಣ ಬಂಧಿಸಿ, ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು. ಗಾಯಗೊಂಡಿರುವ ಹಸುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications