• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಜಿ ಪ್ರಧಾನಿ ಹೆಚ್ ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜನವರಿ 22: ಕೊರೊನಾವೈರಸ್ ಸೋಂಕು ತಗುಲಿದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ್ದಾರೆ. ಶನಿವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ದೇವೇಗೌಡರ ಆರೋಗ್ಯ ವಿಚಾರಿಸಿದರು.

ಶನಿವಾರ ಕೊರೊನಾವೈರಸ್ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಹಾಲು, ವಿದ್ಯುತ್ ಬೆಲೆ ಏರಿಕೆ ತೀರ್ಮಾನ ಸದ್ಯಕ್ಕಿಲ್ಲ: ಬಸವರಾಜ ಬೊಮ್ಮಾಯಿಹಾಲು, ವಿದ್ಯುತ್ ಬೆಲೆ ಏರಿಕೆ ತೀರ್ಮಾನ ಸದ್ಯಕ್ಕಿಲ್ಲ: ಬಸವರಾಜ ಬೊಮ್ಮಾಯಿ

ದೇವೇಗೌಡರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಂತರ ಮಣಿಪಾಲ್ ಆಸ್ಪತ್ರೆ ವೈದ್ಯರೊಂದಿಗೆ ಚರ್ಚೆ ನಡೆಸಿದರು. ದೇವೇಗೌಡರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.

ದೇವೇಗೌಡರ ಆರೋಗ್ಯಕ್ಕಾಗಿ ಪ್ರಾರ್ಥನೆ:

ಕೊವಿಡ್-19 ಸೋಂಕು ತಗುಲಿರುವ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡರು ಆದಷ್ಟು ಬೇಗ ಗುಣಮುಖರಾಗಲಿ ಎಂದು ರಾಜ್ಯದ ಹಲವು ನಾಯಕರು ಆಶಿಸಿದ್ದಾರೆ. ಟ್ವೀಟ್ ಮೂಲಕ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ದೇವೇಗೌಡರ ಆರೋಗ್ಯವಾಗಲಿ ಎಂದು ಟ್ವೀಟ್:

ಮಾಜಿ ಪ್ರಧಾನಮಂತ್ರಿಗಳು, ಹಿರಿಯರಾದ ಹೆಚ್ ಡಿ ದೇವೇಗೌಡರು ಕೊರೊನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಆರೋಗ್ಯ ಸಚಿವ ಸುಧಾಕರ್ ಟ್ವೀಟ್:

"ಹಿರಿಯರು, ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ಅವರು ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಬಳಿ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ನಿರಂತರ ಮಾಹಿತಿ ಪಡೆಯುತ್ತೇನೆ," ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಡಿಸಿಎಂ ಅಶ್ವಥ್ ನಾರಾಯಣ ಟ್ವೀಟ್

"ನಾಡಿನ ಹಿರಿಯ ನಾಯಕರು ಹಾಗೂ ಮಾಜಿ ಪ್ರಧಾನಿಗಳಾದ ಶ್ರೀ ಎಚ್‌.ಡಿ. ದೇವೇಗೌಡ ಅವರು ಕೋವಿಡ್-19 ಸೋಂಕಿನಿಂದ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ," ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್:

"ಮಾಜಿ ಪ್ರಧಾನಿಗಳಾದ ಶ್ರೀ ಎಚ್‌.ಡಿ. ದೇವೇಗೌಡ ಅವರಿಗೆ ಕೋವಿಡ್ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ವಿಷಯ ತಿಳಿಯಿತು. ಶ್ರೀಯುತರು ಶೀಘ್ರ ಗುಣಮುಖರಾಗಲಿ, ದೇವರು ಅವರಿಗೆ ಇನ್ನಷ್ಟು ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ," ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಕೊವಿಡ್-19 ಪರಿಸ್ಥಿತಿ:

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 48,049 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 34,25,002ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 22 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ 18,115 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
CM Basavaraj Bommai inquired about Ex-PM Deve Gowda's health, Who Admitted in Bengaluru Manipal Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X