Dharmasthala: ಷಡ್ಯಂತ್ರ ಮಾಡಿದಂತೆ ರಾಜಕೀಯ ಒತ್ತಡ ಹೇರಲಾಗುತ್ತಿದೆ: ಮಾಜಿ ಸಿಎಂ
ಬೆಂಗಳೂರು, ಸೆಪ್ಟಂಬರ್ 14: ಧರ್ಮಸ್ಥಳ ಪ್ರಕರಣದಲ್ಲಿ ಎಸ್ ಐಟಿಗೆ ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ ರಾಜಕೀಯ ಒತ್ತಡ ಇದೆ. ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೆಯುತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಾಸ್ಕ್ ಮ್ಯಾನ್ ನ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಶೀಘ್ರದಲ್ಲೇ ವರದಿ ಕೊಡಲಿ, ಇದುವರೆಗೆ ಆಗಿರುವ ತನಿಖೆ ಬಗ್ಗೆ ವರದಿ ಕೊಡಲಿ. ಎಸ್ಐಟಿಯವರು ಷಢ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನೇ ಇನ್ನೂ ಮುಟ್ಟಿಲ್ಲ. ಎಸ್ಐಟಿಯವರು ನಮ್ಮನ್ನು ಮುಟ್ಟಲ್ಲ ಅಂತ ಅವರಿಗೂ ಖಾತ್ರಿ ಆಗಿದೆ, ಅದಕ್ಕಾಗಿಯೇ ಅವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಹೊಸ ಹೊಸ ದೂರುಗಳು ಬರುತ್ರಿವೆ, ಅವುಗಳನ್ನೂ ತನಿಖೆ ಮಾಡುತ್ತಿದ್ದಾರೆ. ಎಸ್ ಐಟಿಗೆ ಷಡ್ಯಂತ್ರ ಮಾಡಿದವರನ್ನು ಮುಟ್ಟಬೇಡಿ ಅನ್ನುವ ರಾಜಕೀಯ ಒತ್ತಡ ಇದೆ ಎಂದರು.

ಸಿಎಂ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಜಾತಿ ಸಮೀಕ್ಷೆ
ಜಾತಿ ಜನಗಣತಿ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರದ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,
ಸಂವಿಧಾನದಲ್ಲಿ ಕೇವಲ ಆರು ಧರ್ಮಗಳು ಇವೆ, ಅಷ್ಟೇ ಧರ್ಮಗಳ ಹೆಸರು ಬರೆಯಬೇಕು. ರಾಜ್ಯದಲ್ಲಿ ಮತಾತಂತರಗೊಂಡ ಕ್ರೈಸ್ತರು ಅನ್ನುವ ಹೊಸ ಕಾಲಂ ಮಾಡಿದ್ದಾರೆ. ಇದೊಂದು ಧರ್ಮದ ರೀತಿ ಕಾಲಂ ಮಾಡಿದ್ದಾರೆ. ಇದು ಕಾನೂನು ಬಾಹಿರ, ಸಂವಿಧಾನ ಬಾಹಿರ, ರಾಜಕೀಯ ಪ್ರೇರಿತವಾಗಿದೆ ಎಂದು ದೂರಿದರು.
ಎರಡೂ ಕಡೆಯೂ ಮತಾಂತರ ಆಗಿರುತ್ತದೆ. ಆದರೆ, ಸಿಎಂ ಕ್ರೈಸ್ತ ಧರ್ಮದ ಮತಾಂತರಕ್ಕೆ ಮಾತ್ರ ಮನ್ನಣೆ ಕೊಟ್ಟಿರೋದೇಕೆ? ಸಿಎಂ ಅವರು ಒಂದು ಹೆಜ್ಜೆ ಮುಂದೆ ಹೋಗಿ ಮತಾಂತರ ಅವರ ಹಕ್ಕು ಅಂದಿದ್ದಾರೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲ ಅಂತ ಸಿಎಂ ಹೇಳಿದ್ದಾರೆ. ಇದು ಸಮಾನತೆ ಪ್ರಶ್ನೆ ಅಲ್ಲ, ಆಸೆ ಆಮಿಷ ಒಡ್ಡಿ ಮತಾಂತರ ಆಗಿದ್ದಾರೆ. ಅವರ ಬಡತನ, ಶಿಕ್ಷಣ ಇಲ್ಲದಿರುವುದನ್ನು ದುರುಪಯೋಗ ಪಡಿಸಿಕೊಂಡು ಮತಾಂತರ ಮಾಡಲಾಗಿದೆ. ಹಲವರು ಕ್ರೈಸ್ತಧರ್ಮದಿಂದ ವಾಪಸ್ ಬಂದಿದ್ದಾರೆ.
ಇದು ಧರ್ಮಧರ್ಮ ಗಳ ನಡುವೆ, ವಿಷ ಬೀಜ ಬಿತ್ತುವ, ಗಲಭೆ ಮಾಡಿಸುವ ಕೆಲಸ ಈಗಾಗಲೇ 350 ಕೋಟಿ ರೂ ಪೋಲು ಮಾಡಿದ್ದರು, ಈಗ 420 ಕೋಟಿ ಮತ್ತೆ ಪೋಲು ಮಾಡಲು ಹೊರಟಿದ್ದಾರೆ. ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಜಾತಿ ಏಕೆ ಬೇಕು? ಡಿಸೆಂಬರ್ ನಲ್ಲಿ ಜಾತಿ ಜನಗಣತಿ ವರದಿ ಕೊಡಿ ಅಂತ ಆಯೋಗಕ್ಕೆ ಸಿಎಂ ಹೇಳಿದ್ದಾರೆ. ಈ ಕಡೆ ಡಿಸೆಂಬರ್ ನಲ್ಲಿ ನಾಯಕತ್ವ ಬದಲಾವಣೆ ಆಗಬೇಕು ಅಂತ ಡಿ. ಕೆ. ಶಿವಕುಮಾರ ಬಣ ಹೇಳುತ್ತಿದೆ, ಡಿಕೆಶಿ ಸಿಎಂ ಆಗುತ್ತಾರೆ ಅಂತಿದ್ದಾರೆ. ಹೀಗಾಗಿ ತಮ್ಮ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಸಿಎಂ ಜಾತಿ ಸಮೀಕ್ಷೆ ವರದಿಯನ್ನು ರಾಜಕೀಯವಾಗಿ ಬಳಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಇದೊಂದು ರಾಜಕೀಯ ಅಸ್ತ್ರ
ಜಾತಿ ಜನಗಣತಿ ಸಮೀಕ್ಷೆ ಮೂಲಕ ಗ್ಯಾರಂಟಿ ಫಲಾನುಭವಿಗಳ ಡೇಟಾ ಸಂಗ್ರಹಕ್ಕೆ ಸರ್ಕಾರ ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳಿಗೂ ಸಾಮಾಜಿಕ ಆರ್ಥಿಕ ಸಮೀಕ್ಷೆಗೂ ಏನು ಸಂಬಂಧ. ಇದು ರಾಜಕೀಯ ಪ್ರೇರಿತವಾದ ಸಮೀಕ್ಷೆ. ಗ್ಯಾರಂಟಿ ಫಲಾನುಭವಿಗಳ ಪರಿಶೀಲನೆಗೆ ಮಾಹಿತಿ ಸಂಗ್ರಹ ಜಾತಿ ಜನಗಣತಿಯನ್ನು ರಾಜಕೀಯ ಅಸ್ತ್ರವಾಗಿ ಬಳಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಬಣ ಮುಂದಾಗಿದೆ ಎಂದು ಹೇಳಿದರು.
ಹೆಚ್ಚಿನ ಪರಿಹಾರ ಕೊಡಲಿ
ಹಾಸನ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಬೊಮ್ಮಾಯಿ ಆಗ್ರಹಿಸಿದರು. ಹಿಂದೆ ನಡೆದ ಹಲವು ಪ್ರಕರಣಗಳಲ್ಲಿ ಇದೇ ಸಿಎಂ ಹೆಚ್ಚು ಪರಿಹಾರ ಕೊಟ್ಟಿದ್ದಾರೆ. ಹಾಸನದಲ್ಲಿ ಸತ್ತವರು ಅಮಾಯಕರು, ಯುವಕರು ಅವರ ಕುಟುಂಬಗಳು ಕಷ್ಟದಲ್ಲಿದ್ದಾರೆ, ಇದೆಲ್ಲ ನೋಡಿಕೊಂಡು ಹೆಚ್ಚು ಪರಿಹಾರ ಕೊಡಲಿ. ದಾಖಲೆ ಪ್ರಮಾಣದ ಪರಿಹಾರವನ್ನು ಸಿಎಂ ಕೊಡಬೇಕು ಎಂದು ಆಗ್ರಹಿಸಿದರು.












Click it and Unblock the Notifications