ಸೋಲುವ ಭಯ ಇದ್ದರೆ ಗೆಲುವು ಸಿಗಲ್ಲ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಮಾ. 08: ಯಾರಿಗೆ ಸೋಲುವ ಭಯ ಇರುತ್ತೋ ಅಂಥವರಿಗೆ ಗೆಲುವು ಸಿಗುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2020 ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಯಾವುದೇ ಕೆಲಸ ಇರಲಿ, ಶ್ರಮವಹಿಸಬೇಕು. ಸ್ಪರ್ಧೆಯಲ್ಲಿ ಭಾಗಿಯಾಗಬೇಕು. ಸೋಲು-ಗೆಲುವು ನಂತರ ನಿರ್ಧಾರವಾಗುತ್ತದೆ. ಆದರೆ ಯಾರಿಗೆ ಸೋಲುವ ಭಯ ಇರುತ್ತದೆಯೋ? ಅವರು ಗೆಲುವು ಸಾಧಿಸಲು ಸಾಧ್ಯವಿಲ್ಲ. ಹಾಗಾಗಿ ಭಯ ಇಲ್ಲದೇ ಮುನ್ನುಗ್ಗಿದರೆ ಗೆಲುವು ಸಿಕ್ಕೇ ಸಿಗುತ್ತದೆ ಎಂದು ಬೊಮ್ಮಾಯಿ ಹೇಳಿದರು.

ಈ ಹಿಂದೆ ಮುಂಬಯಿ ಪೊಲೀಸ್ ಅಂದ್ರೆ ಹೆಸರುವಾಸಿ ಆಗಿತ್ತು. ಆದರೆ ಈಗ ಬೆಂಗಳೂರು ಪೊಲೀಸ್ ಆ ಸಾಧನೆ ಮಾಡಿದೆ. ದೇಶದಲ್ಲಿ ಎಲ್ಲರಿಗೂ ಸಿಂಹ ಸ್ವಪ್ನ ವಾಗಿದ್ದ ಪ್ರಕರಣಗಳನ್ನು ನಮ್ಮ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದರೊಂದಿಗೆ ಬೆಂಗಳೂರು ಪೊಲೀಸರು ಈಗ ದೇಶದಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದರು.
Recommended Video
ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಸಚಿವ ಬಸವರಾಜ್ ಬೊಮ್ಮಾಯಿ ಪ್ರಶಸ್ತಿ ವಿತರಿಸಿದರು. ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications