• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸೋಲುವ ಭಯ ಇದ್ದರೆ ಗೆಲುವು ಸಿಗಲ್ಲ: ಬಸವರಾಜ ಬೊಮ್ಮಾಯಿ

|

ಬೆಂಗಳೂರು, ಮಾ. 08: ಯಾರಿಗೆ ಸೋಲುವ ಭಯ ಇರುತ್ತೋ ಅಂಥವರಿಗೆ ಗೆಲುವು ಸಿಗುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2020 ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಯಾವುದೇ ಕೆಲಸ ಇರಲಿ, ಶ್ರಮವಹಿಸಬೇಕು. ಸ್ಪರ್ಧೆಯಲ್ಲಿ ಭಾಗಿಯಾಗಬೇಕು. ಸೋಲು-ಗೆಲುವು ನಂತರ ನಿರ್ಧಾರವಾಗುತ್ತದೆ. ಆದರೆ ಯಾರಿಗೆ ಸೋಲುವ ಭಯ ಇರುತ್ತದೆಯೋ? ಅವರು ಗೆಲುವು ಸಾಧಿಸಲು ಸಾಧ್ಯವಿಲ್ಲ. ಹಾಗಾಗಿ ಭಯ ಇಲ್ಲದೇ ಮುನ್ನುಗ್ಗಿದರೆ ಗೆಲುವು ಸಿಕ್ಕೇ ಸಿಗುತ್ತದೆ‌ ಎಂದು ಬೊಮ್ಮಾಯಿ ಹೇಳಿದರು.

ಈ ಹಿಂದೆ ಮುಂಬಯಿ ಪೊಲೀಸ್ ಅಂದ್ರೆ ಹೆಸರುವಾಸಿ ಆಗಿತ್ತು. ಆದರೆ ಈಗ ಬೆಂಗಳೂರು ಪೊಲೀಸ್ ಆ ಸಾಧನೆ ಮಾಡಿದೆ. ದೇಶದಲ್ಲಿ ಎಲ್ಲರಿಗೂ ಸಿಂಹ ಸ್ವಪ್ನ ವಾಗಿದ್ದ ಪ್ರಕರಣಗಳನ್ನು ನಮ್ಮ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದರೊಂದಿಗೆ ಬೆಂಗಳೂರು ಪೊಲೀಸರು ಈಗ ದೇಶದಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದರು.

   ಕಾನೂನಿನ ಪ್ರಕಾರ ಎಲ್ಲ ಆಯಾಮಗಳಲ್ಲೂ ತನಿಖೆ ನಡೀತಿದೆ :ಗೃಹ ಸಚಿವ ಬಸವರಾಜ ಬೊಮ್ಮಾಯಿ | Oneindia Kannada

   ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಸಚಿವ ಬಸವರಾಜ್ ಬೊಮ್ಮಾಯಿ ಪ್ರಶಸ್ತಿ ವಿತರಿಸಿದರು. ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು.

   English summary
   Home Minister Basavaraj Bommai spoke on the occasion of the closing ceremony of the annual sports 2020 of the Bengaluru City Police.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X