ಕೋವಿಡ್, ಪ್ರವಾಹ; ಅಧಿಕಾರಿಗಳ ಜೊತೆ ನೂತನ ಸಿಎಂ ಸಭೆ
ಬೆಂಗಳೂರು, ಜುಲೈ 28; ಕರ್ನಾಟಕದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಬಳಿಕ ಸಚಿವ ಸಂಪುಟ ಸಭೆಯನ್ನು ಅವರು ನಡೆಸಲಿದ್ದಾರೆ.
Recommended Video
ಬುಧವಾರ ಬೆಳಗ್ಗೆ ಬಸವರಾಜ ಬೊಮ್ಮಾಯಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಶ್ರೀ ಮಾರುತಿ ಮಂದಿರಕ್ಕೆ ನಿಯೋಜಿತ ಮುಖ್ಯಮಂತ್ರಿ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಮಾಜಿ ಸಚಿವ ಭೈರತಿ ಬಸವರಾಜ, ಕೊಳ್ಳೇಗಾಲದ ಶಾಸಕ ಎನ್. ಮಹೇಶ್ ಮುಂತಾದವರು ನಿಯೋಜಿತ ಮುಖ್ಯಮಂತ್ರಿಗಳ ಜೊತೆಗಿದ್ದಾರೆ. ರಾಜಭವನದಲ್ಲಿ 11 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಮಾಧ್ಯಮಗಳ ಜೊತೆ ಮಾತನಾಡಿ ಬಸವರಾಜ ಬೊಮ್ಮಾಯಿ, "ಪ್ರಮಾಣ ವಚನ ಸಮಾರಂಭದ ಬಳಿಕ ಸಚಿವ ಸಂಪುಟ ಸಭೆ ನಡೆಸಲಿದ್ದೇನೆ. ಬಳಿಕ ರಾಜ್ಯದ ಪ್ರವಾಹ ಮತ್ತು ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದೇನೆ" ಎಂದರು.
ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ. ರಾಜಭವನದಲ್ಲಿ 11 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಇಂದು ಬಸವರಾಜ ಬೊಮ್ಮಾಯಿ ಮಾತ್ರ ಪ್ರಮಾಣ ವಚನವನ್ನು ಸ್ವೀಕಾರ ಮಾಡಲಿದ್ದಾರೆ. ಯಾವ ಸಚಿವರನ್ನು ಸಹ ಅವರು ಸಂಪುಟಕ್ಕೆ ಸೇರಿಸಿಕೊಳ್ಳುತ್ತಿಲ್ಲ. ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ನಡೆಯುವ ನಿರೀಕ್ಷೆ ಇದೆ.
ಜುಲೈ 26ರಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಹೈಕಮಾಂಡ್ ನಾಯಕರು ಮಂಗಳವಾರ ರಾಜ್ಯಕ್ಕೆ ಆಗಮಿಸಿ, ಶಾಸಕಾಂಗ ಪಕ್ಷದ ಸಭೆ ನಡೆಸಿದ್ದರು. ಬಸವರಾಜ ಬೊಮ್ಮಾಯಿ ಸರ್ವಾನುಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.












Click it and Unblock the Notifications