ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜುಲೈ 28ರ ಬೆಳಗ್ಗೆ 11 ಗಂಟೆಗೆ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ

|
Google Oneindia Kannada News

ಬೆಂಗಳೂರು, ಜುಲೈ 27: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಜುಲೈ 28ರ ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Recommended Video

ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ನೇಮಕ:BSY ಅವರಿಂದಲೇ ಘೋಷಣೆ | Oneindia Kannada

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಆಯ್ಕೆ ಗೊಂದಲಕ್ಕೆ ತೆರೆ ಬಿತ್ತು. ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ಕೇಂದ್ರ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ನೇತೃತ್ವದ ಸಭೆಯ ನಂತರದ ಮಹತ್ವದ ಘೋಷಣೆ ಹೊರಡಿಸಲಾಯಿತು. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಬಿಜೆಪಿ ಶಾಸಕರು ಈ ಸಭೆಯಲ್ಲಿ ಹಾಜರಾಗಿದ್ದರು.

Breaking News: ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆBreaking News: ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ

ನಿಯೋಜಿತ ಮುಖ್ಯಮಂತ್ರಿ ಆಗಿ ಆಯ್ಕೆಯಾಗುತ್ತಿದ್ದಂತೆ ಬಿ ಎಸ್ ಬಸವರಾಜ ಬೊಮ್ಮಾಯಿ ಉಸ್ತುವಾರಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಆಯ್ಕೆ ಆಗುತ್ತಿದ್ದಂತೆ ಬಿಎಸ್ ವೈ ಕಾಲಿಗೆ ಬಿದ್ದು ನಮಸ್ಕರಿಸಿದರು.

Basavaraj Bommai to take oath as New CM of Karnataka on July 28 at 3.30 pm


ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ:

"ಎಲ್ಲ ಶಾಸಕರು ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ. ನನ್ನ ಹೆಸರನ್ನು ಸೂಚಿಸಿ ಬಿಎಸ್ ವೈ ಆಶೀರ್ವಾದ ಮಾಡಿದ್ದಾರೆ. ತಮ್ಮನ್ನು ಮುಖ್ಯಮಂತ್ರಿ ಆಗಿ ಆಯ್ಕೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿ ಎಸ್ ಯಡಿಯೂರಪ್ಪನವರಿಗೆ ಧನ್ಯವಾದ," ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಸರಳ ಸಜ್ಜನಿಕೆಯ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಬಸವರಾಜ ಸೋಮಪ್ಪ ಬೊಮ್ಮಾಯಿ. ಜನತಾ ದಳದೊಂದಿಗೆ ರಾಜಕೀಯ ಜೀವನ ಪ್ರಾರಂಭಿಸಿದ ಅವರು ನಂತರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ಕರ್ನಾಟಕದ ಮಾಜಿ ಗೃಹ ವ್ಯವಹಾರ, ಕಾನೂನು, ಸಂಸದೀಯ ವ್ಯವಹಾರ ಮತ್ತು ಶಾಸಕಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಹಾವೇರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ, ಜಲಸಂಪನ್ಮೂಲ ಮತ್ತು ಸಹಕಾರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

English summary
Basavaraj Bommai to take oath as New CM of Karnataka on July 28 at 3.30 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X