ದಿ. ಅನಂತ್ ಕುಮಾರ್ ಕೊಡುಗೆ ನೆನಪಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಮೇ 06: "ಕೇಂದ್ರದ ಸಚಿವರಾಗಿದ್ದ ದಿವಂಗತ ಅನಂತ್ ಕುಮಾರ್ ಅವರು ರಾಜ್ಯದ ನೆಲ, ಜಲದ ವಿಷಯಗಳಲ್ಲಿ ರಾಜ್ಯ ಹಾಗೂ ಕನ್ನಡ ಜನರ ಪರ ಗಟ್ಟಿ ನಿಲುವು ಹೊಂದಿದ್ದರು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ಬೆಂಗಳೂರಿನ ಜಯನಗರದ ಬಡಾವಣೆಯಲ್ಲಿನ ಅನಂತ್ ಕುಮಾರ್ ಕಚೇರಿಯಲ್ಲಿ 'ಅನಂತ ಪ್ರೇರಣಾ ಕೇಂದ್ರ'ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, "ಬೆಂಗಳೂರಿನ ಮೆಟ್ರೋ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗ, ಕೃಷ್ಣಾ ಮೇಲ್ದಂಡೆ ಯೋಜನೆ, ಕಾವೇರಿ ಜಲ ವಿಷಯದಲ್ಲಿ ಬಿಗಿ ನಿಲುವಿನಿಂದ ರಾಜ್ಯಕ್ಕೆ ಪರಿಹಾರ ಕೊಡಿಸುವಲ್ಲಿ ಅನಂತಕುಮಾರ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಕೇಂದ್ರದಿಂದ ಆಗಬೇಕಾದ ಬೆಂಗಳೂರಿನ ಹಾಗೂ ರಾಜ್ಯದ ಎಲ್ಲ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಹಕಾರ ನೀಡಿದ್ದರು" ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಅತ್ಯಂತ ಆತ್ಮೀಯ ಸ್ನೇಹಿತರಾಗಿದ್ದ ಅವರ ಸ್ಥಾನಮಾನಗಳು ನಮ್ಮೊಂದಿಗಿನ ಸ್ನೇಹವನ್ನು ಬದಲಾಯಿಸಿರಲಿಲ್ಲ. ಕೃಷ್ಣಾ ಟ್ರಿಬ್ಯುನಲ್ ವಿಚಾರದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ನ್ಯಾಯ ಸಮ್ಮತವಾಗಿ ಕರ್ನಾಟಕದ ಪರವಾಗಿ ಹೋರಾಟ ಮಾಡಿ ಕರ್ನಾಟಕದ ಹಿತ ಕಾಪಾಡಿದ್ದಾರೆ. ಆ ಮೂಲಕ ರಾಜ್ಯದ ಆಪತ್ತನ್ನು ಅವರು ತಪ್ಪಿಸಿದರು ಎಂದರು.

ಹೋರಾಟದ ಅತ್ಯಂತ ಆತ್ಮೀಯ ಸಂಗಾತಿ
ಬಸವರಾಜ ಬೊಮ್ಮಾಯಿ ಮಾತನಾಡಿ, "ನನ್ನ ಸಾರ್ವಜನಿಕ ಹೋರಾಟದ ಅತ್ಯಂತ ಆತ್ಮೀಯ ಸಂಗಾತಿ, ಜನಮೆಚ್ಚಿದ ನಾಯಕರಾದ ಅನಂತಕುಮಾರ್ ಅವರು ಎಲ್ಲರಿಗೂ ಪ್ರೇರಣೆ. ಕನಾಟಕ ಎಂದು ಕೂಡ ಅನಂತಕುಮಾರ್ ಅವರನ್ನು ಮರೆಯಲು ಸಾಧ್ಯವಿಲ್ಲ. ನಮ್ಮ ಬದುಕಿನಲ್ಲಿ ಅವರು ಅನಂತವಾಗಿದ್ದಾರೆ" ಎಂದು ತಿಳಿಸಿದರು.

ಅನಂತ ಕುಮಾರ್ ಒಬ್ಬ ನೈಜ ನಾಯಕ
"ಅನಂತ ಕುಮಾರ್ ಒಬ್ಬ ನೈಜ ನಾಯಕ. ಯಾವುದೇ ಸ್ಥಿತಿಯಲ್ಲಿ, ಹಂತದಲ್ಲಿ ನಾಯಕತ್ವವನ್ನು ವಹಿಸುವ ನೈಜ ನಾಯಕ ಎನಿಸಿಕೊಳ್ಳುತ್ತಾರೆ. ವಿದ್ಯಾರ್ಥಿ ದೆಸೆಯಿಂದ ವಿದ್ಯಾರ್ಥಿ ಆಂದೋಲನದಲ್ಲಿ, ಮುಂದೆ ಎಬಿವಿಪಿ ಸಂಘಟನೆಗಳಲ್ಲಿ ನಾಯಕತ್ವ ವಹಿಸಿದರು. ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ನಾಯಕತ್ವ ವಹಿಸಿದರು. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಬಲಪಡಿಸುವುದರಲ್ಲಿ ನಾಯಕತ್ವ ವಹಿಸಿದರು. ಹತ್ತು ಜನ ಇದ್ದಾಗಲೂ, ಹತ್ತು ಲಕ್ಷ ಜನ ಇದ್ದಾಗಲೂ ನಾಯಕತ್ವ ವಹಿಸಿದ್ದರು. ಬಹಳ ಅಪರೂಪದ ನಾಯಕತ್ವ ಅವರದ್ದು" ಎಂದು ಬಣ್ಣಿಸಿದರು.

ಚಿಕ್ಕಂದಿನಿಂದಲೂ ಸ್ನೇಹವಿತ್ತು
"ಯಾವ ಉದ್ದೇಶಕ್ಕಾಗಿ ಬದುಕು ನಡೆಸಿದರೊ ಅದಕ್ಕಾಗಿ ಅವರು ಹೋರಾಟವನ್ನು ಮಾಡಿದವರು ಅನಂತ ಕುಮಾರ್. ಚಿಕ್ಕಂದಿನಿಂದಲೂ ನಮ್ಮಿಬ್ಬರ ಸ್ನೇಹವಿತ್ತು. ಅವರು ನನ್ನ ಸಹಪಾಠಿಗಳಾಗಿದ್ದರು. ನಮ್ಮ ಮಧ್ಯೆ ಆತ್ಮೀಯ ಒಡನಾಟವಿತ್ತು. ನಮ್ಮ ನಡುವೆ ಯಾರೇ ಕಾಲೇಜಿಗೆ ತಡವಾಗಿ ಹೋದರೂ ಒಬ್ಬರು ಬೆಂಚನ್ನು ಕಾಯ್ದಿರಿಸುತ್ತಿದ್ದೆವು. ತುರ್ತು ಪರಿಸ್ಥಿತಿ ಘೋಷಣೆಯಾದ ಸಂದರ್ಭದಲ್ಲಿ ವಿದ್ಯಾರ್ಥಿ ಕ್ರಿಯಾ ಸಮಿತಿ ರೂಪಿಸಿ ಅನಂತ ಕುಮಾರ್ ಅವರನ್ನು ಕಾರ್ಯದರ್ಶಿಗಳನ್ನಾಗಿ ಮಾಡಿದೆವು. ತುರ್ತು ಪರಿಸ್ಥಿತಿ ವಿರುದ್ಧ ದೊಡ್ಡ ಪ್ರಮಾಣದ ಹೋರಾಟ ಮಾಡುವಂತಿರಲಿಲ್ಲ. ಆದರೆ ಅಂಥ ಸಂದರ್ಭದಲ್ಲಿಯೂ ನೂರಾರು ವಿದ್ಯಾರ್ಥಿಗಳನ್ನು ಸೇರಿಸಿ ದೊಡ್ಡ ಹೋರಾಟ ಮಾಡಲಾಯಿತು. ಲಾಠಿ ಚಾರ್ಜ್ ಆಗಿ ಪೊಲೀಸರು ಅನಂತ ಕುಮಾರ್ ಅವರನ್ನು ಬಂಧಿಸಿದರು. ಇದರಿಂದಾಗಿ ಒಂದು ವರ್ಷ ವಿದ್ಯಾರ್ಥಿ ಜೀವನ ವ್ಯರ್ಥವಾಯಿತು. ನಂತರ ಕಾನೂನಿನ ವಿದ್ಯಾರ್ಥಿಯಾದರು. ಆ ಸಂದರ್ಭಗಳಲ್ಲಿ ಅವರಲ್ಲಿ ನಾಯಕತ್ವದ ವಿಚಾರ ಹಾಗೂ ಗುಣಗಳನ್ನು ಅವರಲ್ಲಿ ಕಂಡೆ. ದೂರದೃಷ್ಟಿ ಇದ್ದ ನಾಯಕರು ಅನಂತ ಕುಮಾರ್" ಎಂದರು.

ಗಂಭೀರ ಹಾಸ್ಯ ಪ್ರಜ್ಞೆ ಇತ್ತು
"ಗಂಭೀರ ರಾಜಕಾರಣದ ಜೊತೆಗೆ ಹಾಸ್ಯ ಪ್ರಜ್ಞೆಯೂ ಅವರಲ್ಲಿತ್ತು. 30- 40 ವರ್ಷ ಒಟ್ಟಿಗಿದ್ದರೂ, ಒಂದು ದಿನವೂ ದುಃಖಿತರಾಗಿ ಅಥವಾ ಚಿಂತಾಕ್ರಾಂತರಾಗಿ ಎಂದೂ ಇರಲಿಲ್ಲ. ಎಂಥಾ ಸ್ಥಿತಿ ಎದುರಾದರೂ ಸ್ಥಿತಪ್ರಜ್ಞತೆಯಿಂದ ಎಲ್ಲವನ್ನೂ ಎದುರಿಸುತ್ತಿದ್ದರು. ನಗುನಗುತ್ತಾ ಇರುತ್ತಿದ್ದರು. ಸಮಸ್ಯೆಗಳನ್ನು ಬಗೆಹರಿಸಲು ಏನು ಮಾಡಬೇಕೋ ಅದನ್ನು ಮಾಡಬೇಕು ಎನ್ನುತ್ತಿದ್ದರು . ಇನ್ನೊಬ್ಬರಿಗೆ ಊಟ ಹಾಕಿಸುವುದರಲ್ಲಿ ಅವರಿಗೆ ಬಹಳ ಆಸಕ್ತಿ. ನನ್ನ ಬಗ್ಗೆ ಬಹಳ ಪ್ರೀತಿ. ಅವರ ಪ್ರೀತಿಯ ಗಾಳದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮಂತ್ರಿ ಸ್ಥಾನ ನಮ್ಮ ಸಂಬಂಧವನ್ನು ಎಂದೂ ಬದಲಾಯಿಸಲಿಲ್ಲ" ಎಂದು ಬಸವರಾಜ ಬೊಮ್ಮಾಯಿ ಸ್ಮರಿಸಿದರು.
Recommended Video
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications