ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ನಿರ್ಮಾಣಕ್ಕೆ 5 ಲಕ್ಷ ಧನ ಸಹಾಯ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 20: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಸಂಬಂಧ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 19-09-2022 ರನ್ನು ಕೊನೆ ದಿನಾಂಕವಾಗಿ ನಿಗದಿಪಡಿಸಿರುವುದನ್ನು ಮಾಡಲಾಗಿತ್ತು. ಇದೀಗ ಈ ಅವಧಿಯನ್ನು ದಿನಾಂಕ: 19-10-2022ರವರೆಗೆ ಬಿಬಿಎಂಪಿ ವಿಸ್ತರಿಸಿದೆ.

ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಅನುಕೂಲವನ್ನು ಮಾಡಿಕೊಡುವ ಹಿತದೃಷ್ಟಿಯಿಂದ ಮನೆ ನಿರ್ಮಾಣ ಮಾಡುವವರಿಗೆ, ವಿದ್ಯಾರ್ಥಿಗಳಿಗೆ, ಅಂಧರಿಗೆ, ಅಂಧ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ, ಹಿರಿಯ ನಾಗರೀಕರ ಅನುಕೂಲಕಕ್ಕಾಗಿ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ ಸಹಾಯವನ್ನು ಮಾಡಲಿದ್ದು ಇದಕ್ಕಾಗಿ ಆನ್‌ ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಅರ್ಜಿ

1. ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ರೂ 5.00 ಲಕ್ಷಗಳ ಸಹಾಯಧನ
2. ಪದವಿ ಪೂರ್ವ, ಪದವಿ ಹಾಗೂ ಸ್ನಾತಕೊತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅನುಕೂಲವಾಗಲು ಉಚಿತ ಲ್ಯಾಪ್‌ಟಾಪ್.
3. ಅಂಧರಿಗೆ ಸ್ಮಾರ್ಟ್ ಸ್ಟಿಕ್.
4. ಅಂಧ ವಿದ್ಯಾರ್ಥಿಗಳಿಗೆ ಎಜುಕೇಷನಲ್ ಲ್ಯಾಪ್‌ಟಾಪ್.
5. ಹಿರಿಯ ನಾಗರಿಕರಿಗೆ ಮಡಚಬಹುದಾದ ವೀಲ್ ಚೇರ್.

BBMP:5 lakh assistance for house construction

ಪಾಲಿಕೆಯ ವೆಬ್‌ ಸೈಟ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ ಮುಖಾಂತರ ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ರೂ. 30/- ಶುಲ್ಕವನ್ನು ಪಾವತಿಸಿ ಆನ್‌ಲೈನ್ ಮೂಖೇನ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಎಲ್ಲಾ ವಲಯದ ಜಂಟಿ ಆಯುಕ್ತರವರ ಕಛೇರಿಯಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.

English summary
In the interest of benefiting the people living under its jurisdiction, BBMP will provide assistance under welfare program to house builders, students, blind, blind students for education, benefit of senior citizens for which application can be submitted online, Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X