Get Updates
Get notified of breaking news, exclusive insights, and must-see stories!

Bengaluru News: ಯಲಹಂಕ ವ್ಯಾಪ್ತಿಯಲ್ಲಿ ಮಾಂಸಾಹಾರ ನಿಷೇಧಿಸಿದ ಬಿಬಿಎಂಪಿ, ಯಾಕೆ?

ಬೆಂಗಳೂರು, ಜನವರಿ 19: ಬೆಂಗಳೂರು ಯಲಹಂಕ ವಾಯುನೆಲೆಯಲ್ಲಿ ಕೇಂದ್ರ ರಕ್ಷಣಾ ಇಲಾಖೆ, ಕೇಂದ್ರ ಸರ್ಕಾರದ ವತಿಯಿಂದ "ಏರ್ ಶೋ-2025" ನಡೆಯಲಿದೆ. ಜನವರಿ ಅಂತ್ಯಕ್ಕೆ ವೈಮಾನಿಕ ಪ್ರದರ್ಶನ ಆರಂಭವಾದರೆ, ಫೆಬ್ರವರಿ ಎರಡನೇ ವಾರದವರೆಗೂ ಜರುಗಲಿದೆ. ಲೋಹದ ಹಕ್ಕಿಗಳು ಮೈಜುಂ ಎನ್ನಿಸುವ ಪ್ರದರ್ಶನ ನೀಡಲಿವೆ. ಈ ಅದ್ಧೂರಿ ಕಾರ್ಯಕ್ರಮ ಪ್ರಯುಕ್ತ ಯಲಹಂಕ ಭಾಗದಲ್ಲಿ ಮಾಂಸ ಮಾರಾಟವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಷೇಧಿಸಿ ಆದೇಶಿಸಿದೆ.

ಬೆಂಗಳೂರು ಅಂತರಾಷ್ಟ್ರೀಯ ಏರ್‌ ಶೋ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 23ನೇ ಜನವರಿಯಿಂದ 17ನೇ ಫೆಬ್ರವರಿ 2025 ರವರೆಗೆ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಯಲಹಂಕ ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ಅವರು ತಿಳಿಸಿದರು.

BBMP Ban Meat Sale Non-Veg Eateries from Jan 23-Feb 17th in Yelahanka Check Why

ಯಲಹಂಕ ಏರ್ ಪೋರ್ಸ್ ಸ್ಟೇಷನಲ್ಲಿ ದಿನಾಂಕ 10.02.2025 ರಿಂದ 14.02.2025 ರವರೆಗೆ ಅಂತರಾಷ್ಟ್ರೀಯ ಏರ್‌ ಶೋ ನಡೆಯಲಿದೆ. ಈ ಸಂಬಂಧ ಯಲಹಂಕ ವಲಯದ ಏರ್‌ಪೋರ್ಸ್‌ ಸ್ಟೇಷನಿಂದ 13 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾಂಸ ಮಾರಾಟದ ಉದ್ದಿಮೆಗಳನ್ನು ಮುಚ್ಚುವುದು ಹಾಗೂ ಹೋಟೆಲ್ ಮತ್ತು ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ ಮತ್ತು ಮಾರಾಟ ನಿಷೇಧ ಮಾಡಿ ಆದೇಶಿಸಲಾಗಿದೆ.

ಈ ಕಾರಣದಿಂದ 23.01.2025 ರಿಂದ 17.02.2025 ರವರೆಗೆ ಎಲ್ಲಾ ಮಾಂಸಾಹಾರ ಮಾರಾಟ ಉದ್ದಿಮೆಗಳನ್ನು ಮುಚ್ಚಲು ಸೂಚಿಸಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937 ರ ರೂಲ್ 91 ರಂತೆ ಮತ್ತು ಇತರ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಹದೇವಪುರ ವಲಯ: ಪ್ಲಾಸ್ಟಿಕ್ ನಿಷೇಧ

ಮಹದೇವಪುರ ವಲಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ ನಡೆಯಿತು. ಈ ವಲಯ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೆ.ಆರ್ ಪುರಂ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಹೆಚ್ಚಿದ್ದು, ಅದರ ನಿಯಂತ್ರಣಕ್ಕೆ ಮನವಿಗೆ ಸ್ಪಂದಿಸಿದ ಅವರು, ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೆಧಿಸಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಮಾರ್ಷಲ್‌ಗಳು ಸೇರಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಹೆಚ್ಚು ಬಳಕೆ ಮಾಡುವ ಪ್ರದೇಶಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ವಶಪಡಿಸಿಕೊಳ್ಳುವುದರ ಜೊತೆಗೆ ದಂಡ ವಿಧಿಸಬೇಕು. ಜೊತೆಗೆ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಸದಂತೆ ಮಾರಾಟಗಾರರಿಗೆ ಎಚ್ಚರಿಕೆ ನೀಡಬೇಕೆಂದರು.

ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಿ

ಕೆ.ಆರ್ ಪುರಂ ವ್ಯಾಪ್ತಿಯಲ್ಲಿ ರಾಜಕಾಲುವೆ ಭಾಗದಲ್ಲಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಅದನ್ನು ತಡೆಯಲು ಕೇಳಿದ್ದಕ್ಕೆ ಪ್ರತಿಕ್ರಿಯಿಸಿ, ಸಂಬಂಧಪಟ್ಟ ರಾಜಕಾಲುವೆ ವಿಭಾಗದ ಅಧಿಕಾರಿಗಳು ಸ್ಥಳ ಪರಿಶೀಲಿಸಿ ರಾಜಕಾಲುವೆ ಒತ್ತುವರಿ ಮಾಡಿದ್ದರೆ ಅಥವಾ ಬಫರ್ ವಲಯದಲ್ಲಿ ನಿರ್ಮಾಣ ಮಾಡಿದ್ದರೆ ಕೂಡಲೆ ಕಾಮಗಾರಿಯನ್ನು ನಿಲ್ಲಿಸಲು ನೋಟೀಸ್ ಜಾರಿ ಮಾಡಬೇಕು. ಜೊತೆಗೆ ಬೆಸ್ಕಾಂ ನಿಂದ ವಿದ್ಯತ್ ಸಂಪರ್ಕ ಕಡಿತಗೊಳಿಸಿ ಭೂಮಾಪಕರಿಂದ ಸಮೀಕ್ಷೆ ನಡೆಸಿ ಒತ್ತುವರಿ ಮಾಡಿದ್ದರೆ ಕಟ್ಟಡ ತೆರವುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+