Breaking: ಬೆಂಗಳೂರಿನಲ್ಲಿ ಎರಡು ದಿನ ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿರ್ಬಂಧ
ಬೆಂಗಳೂರು, ಆಗಸ್ಟ್ 18: ಬೆಂಗಳೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಾಚರಣೆ ಹಿನ್ನೆಲೆ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪಾಲಿಕೆ ಬುಧವಾರ ಆದೇಶ ಹೊರಡಿಸಿದೆ.
ರಾಜ್ಯ ಪಶುಸಂಗೋಪನಾ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿಗಳನ್ನು ಕಡಿಯುವುದನ್ನು ಮತ್ತು ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗುವುದು ಎಂದು ಹೇಳಿದೆ. ಅದೇ ನಿಯಮವು ಚಿಲ್ಲರೆ ಅಂಗಡಿಗಳಿಗೂ ಅನ್ವಯಿಸುತ್ತದೆ.
Recommended Video
ಬೆಂಗಳೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಾಚರಣೆ ಸಂದರ್ಭದಲ್ಲಿ ನಗರದ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಪಶುಸಂಗೋಪನಾ ಇಲಾಖೆಯಿಂದ ಬಿಬಿಎಂಪಿಯು ಈ ಸುತ್ತೋಲೆ ಹೊರಡಿಸಿದೆ.

ಎರಡು ದಿನ ಶ್ರೀಕೃಷ್ಣ ಜನ್ಮಾಷ್ಠಮಿ:
ಭಾರತದಲ್ಲಿ ಈ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಅನ್ನು ಗುರುವಾರ ಮತ್ತು ಶುಕ್ರವಾರ ಆಚರಿಸಲಾಗುತ್ತಿದೆ. ಜನ್ಮಾಷ್ಟಮಿ ಅನ್ನು ಪ್ರತಿ ವರ್ಷ ಶ್ರಾವಣ ಮಾಸದ ಕೃಷ್ಣ ಪಕ್ಷದ ಎಂಟನೇ ದಿನದಂದು ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಗ್ರೆಗೋರಿಯನ್ ಕ್ಯಾಲೆಂಡರ್ನ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ಬರುತ್ತದೆ.
ಹಲಾಲ್ ಕಟ್ ಮತ್ತು ಜಟ್ಕಾ ಕಟ್ ವಿವಾದ:
ಕರ್ನಾಟಕದಲ್ಲಿ ಹಲಾಲ್ ಕಟ್ ಮತ್ತು ಜಟ್ಕಾ ಕಟ್ ಮಾಂಸದ ಬಗ್ಗೆ ವಿವಾದ ಸೃಷ್ಟಿಯಾಗಿತ್ತು. ಇದರ ನಡುವೆ ಕಳೆದ ಏಪ್ರಿಲ್ ತಿಂಗಳ ರಾಮ ನವಮಿ ಆಚರಣೆ ಸಂದರ್ಭದಲ್ಲೂ ಇದೇ ರೀತಿಯ ಆದೇಶವನ್ನು ಬಿಬಿಎಂಪಿ ಜಾರಿಗೊಳಿಸಿತ್ತು. ಬಸವ ಜಯಂತಿ, ಮಹಾ ಶಿವರಾತ್ರಿ, ಗಾಂಧಿ ಜಯಂತಿ, ಸರ್ವೋದಯ ದಿನ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳಂತಹ ಹಲವಾರು ಸಂದರ್ಭಗಳಲ್ಲಿ ಇಂತಹ ನಿಯಮಗಳನ್ನು ಬಿಬಿಎಂಪಿ ಘೋಷಿಸುತ್ತಲೇ ಬಂದಿದೆ.












Click it and Unblock the Notifications