Property Tax: ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂದ ಮಾಲೀಕರಿಗೆ ಬಿಬಿಎಂಪಿ ಬಿಗ್‌ ಶಾಕ್‌

Property Tax: ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಆಗಾಗಾಗ ಮಾಲೀಕರಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಲೇ ಬಂದಿದೆ. ಹಾಗೆಯೇ ಇದೀಗ ನಗರದಲ್ಲಿ ಅತೀ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್‌ ಶಾಕ್‌ ನೀಡಿದೆ. ಹಾಗಾದರೆ ಪಾಲಿಕೆ ತೆಗೆದುಕೊಂಡ ಕ್ರಮ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರಿಂದ ಬೇಗನೇ ತೆರಿಗೆಯನ್ನ ಸಂಗ್ರಹಿಸಲಾಗುತ್ತಿದೆ. ಇನ್ನು ಇದೀಗ ಅತಿ ಹೆಚ್ಚು ತೆರಿಗೆ ಬಾಕಿ ಇಟ್ಟುಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗದ ಮುದ್ರೆ ಹಾಕುವ ಮೂಲಕ ಶಾಕ್‌ ನೀಡಿದೆ.

BBMP big shock to owners with property tax dues

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯಾ ವಲಯಗಳಲ್ಲಿ ಅತೀ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿದೆ. ಅಲ್ಲದೆ, ಬೇಗನೇ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು ಕ್ರಮ ವಹಿಸಲಾಗುತ್ತಿದೆ. ಎಲ್ಲಾ ಪರಿಷ್ಕರಣೆ ಪ್ರಕರಣಗಳಲ್ಲಿ ಆಸ್ತಿಗಳಿಗೆ ಬೀಗ ಮುದ್ರೆ, ಮುಟ್ಟುಗೋಲು ಮತ್ತು ಜಪ್ತಿ ಮಾರಾಟವನ್ನು ಬಳಸಿಕೊಂಡು ವಸೂಲಾತಿ ಮಾಡಬೇಕಿದೆ ಎಂದು ಪ್ರಕಟಣೆಯಲ್ಲಿ ಆಯುಕ್ತರು ತಿಳಿಸಿದ್ದಾರೆ.

24 ಗಂಟೆಗಳಲ್ಲಿ ಎಲ್ಲಾ 8 ವಲಯಗಳು ಸೇರಿ 182 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ. ಆಯಾ ವಲಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ವಿಚಾರವಾಗಿ ಸೂಕ್ತ ಕ್ರಮಗಳನ್ನ ಕೈಗೊಳ್ಳಲು ವಲಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಲಯದಲ್ಲಿ 45, ದಾಸರಹಳ್ಳಿ 35, ಪೂರ್ವ ವಲಯ 231, ಮಹದೇವಪುರ 69.

ಆರ್.ಆರ್.ನಗರ 69, ದಕ್ಷಿಣ ವಲಯ 115, ಪಶ್ಚಿಮ ವಲಯ 226, ಯಲಹಂಕ 40 ವಸತಿಯೇತರ ಕಟ್ಟಡಗಳಿಗೆ ಸೇರಿ ನಗರದಲ್ಲಿ ಒಟ್ಟು 830 ಕಟ್ಟಡಗಳಿಗೆ ಬೀಗ ಮುದ್ದೆ ಹಾಕಲಾಗಿದೆ ಎಂದು ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯಕ್ತ ಮುನೀಶ್ ಮೌದ್ಗಿಲ್ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಇತ್ತೀಗಷ್ಟೇ ಈ ಬಗ್ಗೆ ಬಿಬಿಎಂಪಿ ಸೂಚನೆ ನೀಡಿತ್ತು ಆದರೂ ಎಚ್ಚೆತ್ತುಕೊಳ್ಳದ ಕಾರಣ ಆಸ್ತಿ ಮಾಲೀಕರಿಗೆ ಬಿಬಿಎಂಪಿ ಬಿಗ್‌ ಶಾಕ್‌ ಕೊಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+