ಬಿಬಿಎಂಪಿ ಬಜೆಟ್ 2019 : ಮಹಿಳೆಯರಿಗೇ ಮೇಲುಗೈ
ಬೆಂಗಳೂರು, ಫೆಬ್ರವರಿ 18: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2019ರ ಮಹತ್ವದ ಬಜೆಟ್ ಇಂದು ಮಂಡನೆಯಾಗಲಿದೆ.
ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ ಅವರು ಬಜೆಟ್ ಮಂಡಿಸುತ್ತಿದ್ದು, ಇದೇ ಮೊದಲ ಬಾರಿಗೆ ಮಹಿಳಾ ಸದಸ್ಯರೊಬ್ಬರು ಬಜೆಟ್ ಮಂಡಿಸುತ್ತಿರುವುದು ವಿಶೇಷವಾಗಿದೆ.
ಬಜೆಟ್ ಗಾತ್ರ ಸುಮಾರು 12 ಸಾವಿರ ಕೋಟಿ ತಲುಪುವ ನಿರೀಕ್ಷೆಯಿದ್ದು, ಈ ಬಾರಿ ಬಜೆಟ್‍ನಲ್ಲಿ ನಗರದ ಮಹಿಳೆಯರಿಗೆ ಹಲವು ಹೊಸ ಯೋಜನೆಗಳು ಘೋಷಣೆಯಾಗುವ ಸಾಧ್ಯತೆ ಇದೆ.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸೌಮ್ಯ ಶಿವಕುಮಾರ್ ಅವರು ಮಹಿಳಾ ಪರವಾದ ಹಲವು ಕಲ್ಯಾಣ ಯೋಜನೆಗಳನ್ನು ಕುರಿತು ಸಲಹೆ ನೀಡಿದ್ದು, ಸ್ವಯಂ ಉದ್ಯೋಗಿ ಮಹಿಳೆಯರಿಗೆ ಎಲೆಕ್ಟ್ರಿಕ್ ಮೊಪೈಡ್ ನೀಡುವಂತೆ ಮನವಿ ಮಾಡಿದ್ದಾರೆ.
ವಿಧಾನ ಸಭಾ ಚುನಾವಣೆ, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ನಿರ್ಲಕ್ಷ್ಯದಿಂದಾಗಿ 2018-19ನೇ ಸಾಲಿನ ಬಜೆಟ್ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಿರಲಿಲ್ಲ. ಮೂಲಗಳ ಪ್ರಕಾರ 2018-19ನೇ ಸಾಲಿನ ಬಜೆಟ್ ಶೇ.55 ಮಾತ್ರ ಅನುಷ್ಠಾನಗೊಂಡಿದೆ.
ಈ ಬಾರಿ ಮಹಿಳೆಯರಿಗೆ ಹೆಚ್ಚಿನ ಕೊಡುಗೆ ಸಾಧ್ಯತೆ: ಈ ಬಾರಿ ಮೇಯರ್ ಹಾಗೂ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರು ಮಹಿಳೆಯಾಗಿರುವ ಕಾರಣ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಕೊಡುಗೆ ಕೊಡುವ ನಿರೀಕ್ಷೆ ಇದೆ. ಪ್ರತಿ ವಾರ್ಡ್‌ನಲ್ಲಿ 20 ಮಹಿಳೆರಿಗೆ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಯಾಗುವ ಸಾಧ್ಯತೆ ಇದೆ.












Click it and Unblock the Notifications