BBMP Budget 2023: ರಾಜಧಾನಿಯನ್ನು ಪ್ರವಾಸಿ ನಗರವನ್ನಾಗಿ ಮಾಡಲು 180 ಕೋಟಿ ರೂ. ಮೀಸಲು
ವಸತಿ ಪ್ರದೇಶಗಳಲ್ಲಿ 'ಸಿಟಿ ಪ್ಲಾಜಾ'ಗಳನ್ನು ರಚಿಸಲು ಬಿಬಿಎಂಪಿ 50 ಕೋಟಿ ರೂಪಾಯಿ ಅನುದಾನ ನೀಡಿದೆ.
ಬೆಂಗಳೂರು, ಮಾರ್ಚ್ 03: ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಲಿಕಾನ್ ಸಿಟಿಯನ್ನು ಪ್ರವಾಸಿ ನಗರವನ್ನಾಗಿಸಲು ಪಣ ತೊಟ್ಟಿದೆ. ಹೀಗಾಗಿ ಬಿಬಿಎಂಪಿ 2023-24ನೇ ಆಯವ್ಯಯದಲ್ಲಿ ನಗರದ ರಸ್ತೆಗಳು, ಪ್ರಮುಖ ದೇವಾಲಯಗಳು ಮತ್ತು ಕೆರೆಗಳನ್ನು ಅಭಿವೃದ್ಧಿಪಡಿಸಲು ಅನುದಾನ ಮೀಸಲಿಟ್ಟಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್‌ನಲ್ಲಿ ಕೆಂಪಾಂಬುಧಿ ಕೆರೆ, ಬುಲ್ ಟೆಂಪಲ್ ರಸ್ತೆ, ಸ್ಯಾಂಕಿ ಟ್ಯಾಂಕ್, ಕಾಡು ಮಲ್ಲೇಶ್ವರ ದೇವಸ್ಥಾನ, ಹಲಸೂರು ಕೆರೆ ಮತ್ತು ಸೋಮೇಶ್ವರ ದೇವಸ್ಥಾನಗಳನ್ನು ಒಳಗೊಂಡ ಮೊದಲ ಪ್ರವಾಸೋದ್ಯಮ ಸರ್ಕ್ಯೂಟ್ ರಚಿಸಲು ಮುಂದಾಗಿದೆ. ಇದಕ್ಕಾಗಿಯೇ ಬಜೆಟ್‌ನಲ್ಲಿ ಮಹಾನಗರ ಪಾಲಿಕೆ ಈ ಪ್ರವಾಸೋದ್ಯಮ ಸರ್ಕ್ಯೂಟ್ ಯೋಜನೆಗೆ 180 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.

ವಸತಿ ಪ್ರದೇಶಗಳಲ್ಲಿ 'ಸಿಟಿ ಪ್ಲಾಜಾ'ಗಳನ್ನು ರಚಿಸಲು ಬಿಬಿಎಂಪಿ 50 ಕೋಟಿ ರೂಪಾಯಿ ಅನುದಾನ ನೀಡಿದೆ. "ವಸತಿ ಪ್ರದೇಶಗಳಲ್ಲಿ ಹತ್ತು ನಗರ ಪ್ಲಾಜಾಗಳನ್ನು ಅಭಿವೃದ್ಧಿಪಡಿಸಲಾಗುವುದು. ಇವುಗಳಲ್ಲಿ ಕಾರಂಜಿಗಳು, ಆಟದ ಪ್ರದೇಶಗಳು, ಫುಡ್ ಕೋರ್ಟ್‌ಗಳು ಮತ್ತು ವಿಶ್ರಾಂತಿ ಮತ್ತು ಚೇತರಿಸಿಕೊಳ್ಳಲು ತೆರೆದ ಸ್ಥಳಗಳು ಇರಲಿವೆ" ಎಂದು ವಿಶೇಷ ಹಣಕಾಸು ಆಯುಕ್ತ ಜಯರಾಮ್ ರಾಯಪುರ ಬಜೆಟ್ ಮಂಡಿಸುವಾಗ ಹೇಳಿದ್ದಾರೆ.
ಬಿಬಿಎಂಪಿಯ ಈ ಕ್ರಮವನ್ನು ಸ್ವಾಗತಿಸಿರುವ ನಗರ ತಜ್ಞ ವಿ ರವಿಚಂದರ್ ಅವರು ಸಿಟಿ ಪ್ಲಾಜಾಗಳ ನಿರ್ವಹಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪಾಲಿಕೆಯು ಅಂತಹ ಜಾಗಗಳ ಹಣಗಳಿಕೆಯ ಬಗ್ಗೆ ಸ್ಪಷ್ಟವಾಗಿಲ್ಲ. ಆದರೆ, ಇವುಗಳಿಗೆ ವೆಚ್ಚವನ್ನು ಮಾತ್ರ ಮಾಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ನಗರ ವಿನ್ಯಾಸಕ ನರೇಶ್ ನರಸಿಂಹನ್ ಕೂಡ ಬಿಬಿಎಂಪಿಯ ಪರಿಕಲ್ಪನೆಯನ್ನು ಶ್ಲಾಘಿಸಿದ್ದಾರೆ. "ನಮ್ಮ ನಗರಕ್ಕೆ ಬರುವ ಜನರಿಗೆ ನಮ್ಮ ಇತಿಹಾಸ ಮತ್ತು ಸಂಪ್ರದಾಯದ ಬಗ್ಗೆ ಅರಿವು ಮೂಡಿಸಬೇಕು. ಈ ಸಿಟಿ ಪ್ಲಾಜಾಗಳು ಆ ಗುರಿಯನ್ನು ಸಾಧಿಸಲು ಸಹಾಯ ಮಾಡುತ್ತದೆ" ಎಂದು ಹೇಳಿದ್ದಾರೆ.

2023-24ರಲ್ಲಿ ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು 15 ಕೋಟಿ ರೂ.ವೆಚ್ಚದಲ್ಲಿ 15 ಉದ್ಯಾನವನಗಳನ್ನು ನಿರ್ಮಿಸಲಾಗುವುದು. ಇದಲ್ಲದೇ ಈಗಿರುವ ಉದ್ಯಾನಗಳ ನಿರ್ವಹಣೆಗೆ 80 ಕೋಟಿ ರೂಪಾಯಿ ಮೀಸಲಿಡಲಾಗಿದೆ. 1,410 ಕೋಟಿ ರೂಪಾಯಿ ವೆಚ್ಚದಲ್ಲಿ 150 ಕಿಮೀ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಅದೇ ರೀತಿ 350 ಕಿ.ಮೀ ಉದ್ದದ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಲೈಟ್ ಟೆಂಡರ್ ಶ್ಯೂರ್ ಮಾದರಿಯಲ್ಲಿ 450 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ಬಿಬಿಎಂಪಿ ಪ್ರಕಟಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications