ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಉಪ ಚುನಾವಣೆ : ಕಣದಲ್ಲಿರುವ ಅಭ್ಯರ್ಥಿಗಳ ವಿವರ

|
Google Oneindia Kannada News

ಬೆಂಗಳೂರು, ಮೇ 17 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉಪ ಚುನಾವಣೆಯ ಕಣದ ಅಭ್ಯರ್ಥಿಗಳು ಅಂತಿಮಗೊಂಡಿದ್ದಾರೆ. ಮೇ 29ರಂದು ಎರಡು ವಾರ್ಡ್‌ಗಳಲ್ಲಿ ಉಪ ಚುನಾವಣೆ ನಡೆಯಲಿದ್ದು, ಮೇ 31ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಬಿಬಿಎಂಪಿಯ ಕಾವೇರಿಪುರ ಮತ್ತು ಸಗಾಯಪುರ ವಾರ್ಡ್‌ಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆದಿದೆ. ನಾಮಪತ್ರ ವಾಪಸ್ ಪಡೆಯಲು ಮೇ 20 ಕೊನೆಯ ದಿನವಾಗಿದೆ.

ಬಿಬಿಎಂಪಿ ಉಪ ಚುನಾವಣೆ : ಕಾಂಗ್ರೆಸ್‌-ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಕೆಬಿಬಿಎಂಪಿ ಉಪ ಚುನಾವಣೆ : ಕಾಂಗ್ರೆಸ್‌-ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಸಗಾಯಪುರ ವಾರ್ಡ್‌ನಲ್ಲಿ 14 ಅಭ್ಯರ್ಥಿಗಳು ಮತ್ತು ಕಾವೇರಿಪುರ ವಾರ್ಡ್‌ನಲ್ಲಿ 5 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎರಡೂ ವಾರ್ಡ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಬಂಡಾಯದ ಬಿಸಿ ತಟ್ಟಿದೆ.

63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಪ್ರಕಟ63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಪ್ರಕಟ

ಜೆಡಿಎಸ್‌ನ ರಮೀಳಾ ಉಮಾ ಶಂಕರ್ ಅವರ ನಿಧನದಿಂದ ಕಾವೇರಿಪುರ ವಾರ್ಡ್‌ ಮತ್ತು ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ಏಳುಮಲೈ ಅವರ ನಿಧನದಿಂದಾಗಿ ಎರಡು ವಾರ್ಡ್‌ಗಳಲ್ಲಿ ಉಪ ಚುನಾವಣೆ ಎದುರಾಗಿದೆ. ಮೇ 29ರಂದು ಮತದಾನ ನಡೆಯಲಿದೆ.....

ಕಾವೇರಿಪುರ ವಾರ್ಡ್‌

ಕಾವೇರಿಪುರ ವಾರ್ಡ್‌

ಕಾವೇರಿಪುರ ವಾರ್ಡ್‌ನಲ್ಲಿ 5 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ಸಿ.ಪಲ್ಲವಿ ಅವರು, ಕಾಂಗ್ರೆಸ್‌-ಜೆಡಿಎಸ್‌ನಿಂದ ಸುಶೀಲ.ಎಸ್. ಅವರು ಅಭ್ಯರ್ಥಿಗಳು. ಬಿಜೆಪಿ ಮತ್ತು ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ನಡೆಯಲಿದೆ.

ಸಗಾಯಪುರ ವಾರ್ಡ್‌

ಸಗಾಯಪುರ ವಾರ್ಡ್‌

ಸಗಾಯಪುರ ವಾರ್ಡ್‌ನಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಏಳುಮಲೈ ಸಹೋದರಿ ಪಳನಿಯಮ್ಮ ಕಣದಲ್ಲಿದ್ದಾರೆ. ಬಿಜೆಪಿಯಿಂದ ಎ.ಜೀಯೇರೀಮ್ ಅವರು ಅಭ್ಯರ್ಥಿ. ಆದರೆ, ವಾರ್ಡ್‌ನಲ್ಲಿ ಮೈತ್ರಿಕೂಟದ ಅಭ್ಯರ್ಥಿಗೆ ಬಂಡಾಯದ ಬಿಸಿ ತಟ್ಟಿದೆ.

ಮಾರಿಮುತ್ತು ಕಣದಲ್ಲಿದ್ದಾರೆ

ಮಾರಿಮುತ್ತು ಕಣದಲ್ಲಿದ್ದಾರೆ

ಸಗಾಯಪುರ ವಾರ್ಡ್‌ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಬಂಡಾಯದ ಬಿಸಿ ತಟ್ಟಿದೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದು ಸೋತಿದ್ದ ಮಾರಿಮುತ್ತು ಅವರು ಟಿಕೆಟ್ ಕೈ ತಪ್ಪಿದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಬಿಜೆಪಿಗೆ ಬಂಡಾಯದ ಬಿಸಿ

ಬಿಜೆಪಿಗೆ ಬಂಡಾಯದ ಬಿಸಿ

ಕಾವೇರಿಪುರ ವಾರ್ಡ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಬಿಜೆಪಿಯ ಅಧಿಕೃತ ಬಿ.ಫಾರಂ ಪಡೆದು ಸಿ.ಪಲ್ಲವಿ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರ್ಪಿತಾ.ಕೆ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

English summary
Candidates finalized for Sagayapuram and Kaveripura ward BBMP by elections 2019. By election will be held on May 29.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X