ಬಿಬಿಎಂಪಿ: ತ್ಯಾಜ್ಯ ವಿಲೇವಾರಿ ಸ್ಥಗಿತಗೊಳಿಸಿ ಜೂ.11ರಿಂದ ಪ್ರತಿಭಟನೆ

ಬೆಂಗಳೂರು, ಜೂನ್ 8: ಬಾಕಿ ಇರುವ ಬಿಲ್ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಬಿಎಂಪಿ ಸ್ವಚ್ಛತೆ ಮತ್ತು ಲಾರಿ ಮಾಲೀಕರು ಹಾಗೂ ಗುತ್ತಿಗೆದಾರರ ಸಂಘ ಜೂನ್ 11ರಿಂದ ತ್ಯಾಜ್ಯ ವಿಲೇವಾರಿ ಸ್ಥಗಿತಗೊಳಿಸಿ ಪ್ರತಿಭಟನೆಗೆ ಸಜ್ಜಾಗಿದೆ.

ಬಿಬಿಎಂಪಿಯು ಕಳೆದ ಜನವರಿಯಿಂದ ಆಟೋ, ಕಾಂಪ್ಯಾಕ್ಟರ್ಗಳ ಬಿಲ್ ಪಾವತಿಸಿಲ್ಲ, ಅಲಲ್ದೆ, ಕಳೆದ ಆಗಸ್ಟ್‌ನಿಂದ ಡಿಸೆಂಬರ್‌ ವರೆಗೆ ಬಾಕಿ ಉಳಿಸಿಕೊಂಡಿರುವ ಬಿಲ್‌ನಲ್ಲಿ ಶೇ.10ರಷ್ಟುಹಣವನ್ನೂ ಇದುವರೆಗೆ ಪಾವತಿಸಿಲ್ಲ, ಕಳೆದ ವರ್ಷ ಬೆಂಗಳೂರು ನಗರಾಭಿವೃದ್ಧಿ ಸಚಿವರ ಅಧ್ಯಕ್ಷತೆ ಸಭೆಯಲ್ಲಿ ತೀರ್ಮಾನ ಕೈಗೊಂಡಂತೆ ಆಟೋ ಮತ್ತು ಕ್ಯಾಂಪ್ಯಾಕ್ಟರ್ ಗಳ ಬಾಡಿಗೆ ಪರಿಷ್ಕರಣೆ ಮಾಡಬೇಕಿತ್ತು.

ಅದನ್ನೂ ಮಾಡಿಲ್ಲ. ಕಸದ ಗುತ್ತಿಗೆ ಮೇಲಿನ ಸೇವಾ ತೆರಿಗೆ ಪಾವತಿಸಲು ಆದಾಯ ತೆರಿಗೆ ಇಲಾಖೆಯಿಂದ ಗುತ್ತಿಗೆದಾರರಿಗೆ ನೋಟಿಸ್ ಬರುತ್ತಲೇ ಇದೆ. ಈ ಹಿಂದೆ ಪ್ರತಿಭಟನೆ ನಡೆಸಿದಾಗ ಆದಾಯ ತೆರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಗೊಂದಲ ಬಗೆಹರಿಸುವ ಬಗ್ಗೆ ಆಯುಕ್ತರು ಭರವಸೆ ನೀಡಿದ್ದರು. ಆದರೆ ಇದ್ಯಾವುದೂ ಪ್ರಯೋಜನವಾಗಿಲ್ಲ. ಕಾರ್ಮಿಕರ ಇಎಸ್‌ಐ ಮತ್ತು ಪಿಎಫ್‌ ಪಾವತಿ ಮಾಡದೆ 5 ತಿಂಗಳುಗಳೇ ಕಳೆದಿದೆ.

BBMP cleaning contractors may go strike from June 11

ಪಾಲಿಕೆ ವ್ಯಾಪ್ತಿಯಲ್ಲಿ 450ಕ್ಕೂ ಹೆಚ್ಚು ಕಾಂಪ್ಯಾಕ್ಟರ್, 4 ಸಾವಿರಕ್ಕೂ ಹೆಚ್ಚು ಆಟೋಗಳು ನಿತ್ಯ ಕಸ ವಿಲೇವಾರಿಯಲ್ಲಿ ತೊಡಗಿಸಿಕೊಂಡಿದೆ. ಜತೆಗೆ 7 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆಗೆ ತೀರ್ಮಾನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+