ಮಾಸ್ಕ್ ಧರಿಸದಿದ್ದಕ್ಕೆ ಜೂನ್‌ನಲ್ಲಿ ಬಿಬಿಎಂಪಿ ಸಂಗ್ರಹಿಸಿದ ದಂಡ ಎಷ್ಟು?
ಬೆಂಗಳೂರು, ಜುಲೈ 2: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಮಾಸ್ಕ್ ಧರಿಸಿ ಎಂದು ಎಷ್ಟೇ ಹೇಳಿದರು ಬೆಂಗಳೂರು ಜನರು ಮಾತ್ರ ಕೇಳುತ್ತಿಲ್ಲ. ಹಾಗಂತ ಬಿಬಿಎಂಪಿ ಸುಮ್ಮನೆ ಕುಳಿತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿಲ್ಲ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಅಂದರೆ ದಂಡು ಹಾಕುತ್ತಿದೆ.
Recommended Video
ಬೆಂಗಳೂರಿನಲ್ಲಿ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಜನರಿಂದ ಜೂನ್ ತಿಂಗಳಲ್ಲಿ ಬಿಬಿಎಂಪಿ ಒಟ್ಟು 57.39 ಲಕ್ಷ ದಂಡ ಸಂಗ್ರಹಿಸಿದೆ.
ಜೂನ್ ತಿಂಗಳಲ್ಲಿ ಒಟ್ಟು 27421 ಜನರು ವಿರುದ್ಧ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ದಂಡ ವಿಧಿಸಲಾಗಿದೆ. ಅವರಿಂದ 54,84,292 ರೂಪಾಯಿ ಸಂಗ್ರಹವಾಗಿದೆ. 1267 ಜನರು ವಿರುದ್ಧ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂಬ ಕಾರಣಕ್ಕೆ 2,55,003 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಇದುವರೆಗೂ ಲಾಕ್‌ಡೌನ್ ನಿಯಮ ಪಾಲಿಸಿಲ್ಲ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ 98 ಮಳಿಗೆಗಳನ್ನು ಮುಚ್ಚಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ಅಂದ್ಹಾಗೆ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿಲ್ಲ ಅಂದ್ರೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡಿಲ್ಲ ಅಂದರೆ 200 ರೂಪಾಯಿ ದಂಡ ನಿಗದಿ ಮಾಡಲಾಗಿದೆ.












Click it and Unblock the Notifications