ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಎತ್ತಂಗಡಿ!

|
Google Oneindia Kannada News

ಬೆಂಗಳೂರು, ಜುಲೈ 18: ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಕಠಿಣ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ ಕುಮಾರ್‌ ಅವರನ್ನು ವರ್ಗಾವಣೆ ಮಾಡಿದೆ.

Recommended Video

Corona ಹೋರಾಟದಲ್ಲಿ ಭಾರತ ಮುಖ್ಯ ಪಾತ್ರ | Oneindia Kannada

ಆಯುಕ್ತರಾಗಿದ್ದ ಅನಿಲ್ ಕುಮಾರ್ ಸ್ಥಾನಕ್ಕೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುನಾಥ್‌ ಪ್ರಸಾದ್‌ ಅವರನ್ನು ಬಿಬಿಎಂಪಿ ನೂತನ ಆಯುಕ್ತರನ್ನಾಗಿ ಸರ್ಕಾರ ನೇಮಕ ಮಾಡಿದೆ.

ಚಿತ್ರಗಳು; ಕೋರಮಂಗಲದ ಕೋವಿಡ್ ಆರೈಕೆ ಕೇಂದ್ರಚಿತ್ರಗಳು; ಕೋರಮಂಗಲದ ಕೋವಿಡ್ ಆರೈಕೆ ಕೇಂದ್ರ

ಹಿರಿಯ ಐಎಎಸ್ ಅಧಿಕಾರಿ ಮಂಜುನಾಥ್‌ ಪ್ರಸಾದ್‌ ಅವರು ಈ ಮೊದಲು ಬಿಬಿಎಂಪಿ ಆಯುಕ್ತರಾಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ.

Bbmp Commissioner Bh Anil Kumar Shunted Out, N Manjunath Prasad To Lead Bengaluru’s Civic Body


ಬೆಂಗಳೂರು ಹೊರ ವಲಯದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸ್ಥಾಪನೆ ಮಾಡಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಬಾಡಿಗೆ ಬೆಡ್ ಪ್ರಕರಣದ ಬಳಿಕ ಅನಿಲ್ ಕುಮಾರ್ ವರ್ಗಾವಣೆ ಆಗಿರುವುದು ಅನುಮಾನಗಳಿಗೆ ಕಾರಣವಾಗಿದೆ.

ಬೆಂಗಳೂರಿನ ಯಾವ ವಾರ್ಡ್‌ನಲ್ಲಿ ಎಷ್ಟು ಕೋವಿಡ್ ಪ್ರಕರಣ?ಬೆಂಗಳೂರಿನ ಯಾವ ವಾರ್ಡ್‌ನಲ್ಲಿ ಎಷ್ಟು ಕೋವಿಡ್ ಪ್ರಕರಣ?

BIEC ಸೇರಿದಂತೆ ಬೆಂಗಳೂರಿನಲ್ಲಿ ಸರ್ಕಾರ 20 ಸಾವಿರ ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಿದೆ. ಅಲ್ಲಿಗೆ ಬೇಕಾದ ಹಾಸಿಗೆಗಳನ್ನು ಖರೀದಿ ಮಾಡುವ ಬದಲು ಬಾಡಿಗೆ ಆಧಾರದಲ್ಲಿ ತೆಗೆದುಕೊಳ್ಳಲಾಗಿತ್ತು. ಅದು ನಂತರ ವಿರೋಧ ಪಕ್ಷಗಳ ಆಕ್ಷೇಪಕ್ಕೆ ಕಾರಣವಾಗಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅನಿಲ್ ಕುಮಾರ್ ತಲೆದಂಡವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.

English summary
BBMP Commissioner B.H. Anil Kumar has been transferred. The government has appointed Manjunath Prasad, the general secretary of the Department of Revenue, as the BBMP's new commissioner to replace Anil Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X